ಕನ್ನಡಪ್ರಭ ವಾರ್ತೆ ಉಡುಪಿ
ಅವರು ಭಾನುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ತಡೆಗೆ ರೂಪಿಸಿರುವ ವಿವಿಧ ತಂಡಗಳ ಅಧಿಕಾರಿಗಳಿಗೆ ಹಾಗೂ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ತರಬೇತಿ ನೀಡುವಾಗ ಎಲ್ಲ ರೀತಿ ಸಾಧಕ ಭಾದಕಗಳ ಕುರಿತು ಸವಿಸ್ತಾರ ಮಾಹಿತಿಯನ್ನು ನೀಡಬೇಕು ಎಂದು ಸಲಹೆ ನೀಡಿದರು.ಮತಯಂತ್ರಗಳ ಲಭ್ಯತೆ, ವಿಧಾನಸಭೆ ಕ್ಷೇತ್ರವಾರು ವಿತರಣೆ ಸೇರಿದಂತೆ ಮತ್ತಿತರ ಸಿದ್ಧತೆ ಕುರಿತು ಮಾಹಿತಿ ಪಡೆದು ಮಾತನಾಡಿ, ಮತಯಂತ್ರಗಳ ನಿರ್ವಹಣೆ ವ್ಯವಸ್ಥಿತವಾಗಿ ಆಗಬೇಕು ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡದಂತೆ ಜಾಗೃತಿ ವಹಿಸಬೇಕೆಂದು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಮಾತನಾಡಿ, ಜಿಲ್ಲೆಯ ಮತದಾರರ ವಿವರ, ಮತಗಟ್ಟೆಗಳ ಸಂಖ್ಯೆ, ಚುನಾವಣಾ ಕಾರ್ಯಗಳಿಗೆ ನಿಯೋಜಿಸಿಕೊಂಡ ಅಧಿಕಾರಿಗಳ ಹಾಗೂ ಸಿಬ್ಬಂದಿಯ ವಿವರ, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯಲು ರೂಪಿಸಿದ ವಿವಿಧ ತಂಡಗಳ ವಿವರ, ಚೆಕ್ಪೋಸ್ಟ್ ನಿರ್ಮಾಣ ಮಾಡಿರುವ ಬಗ್ಗೆ, ಇ.ವಿ.ಎಂ ಹಂಚಿಕೆ ಸೇರಿದಂತೆ ನ್ಯಾಯ ಸಮ್ಮತ ಚುನಾವಣೆ ನಡೆಸಲು ಮಾಡಿಕೊಂಡಿರುವ ತಯಾರಿಗಳ ವಿವರಗಳನ್ನು ಸವಿಸ್ತಾರವಾಗಿ ವಿವರಿಸಿದರು ಹಾಗೂ ಚುನಾವಣೆಯಲ್ಲಿ ಮತದಾನವನ್ನು ಹೆಚ್ಚಿಸಲು ಕೈಗೊಂಡಿರುವ ಜಾಗೃತಿ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.
ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನವಣಾಧಿಕಾರಿ ಮೀನಾ ನಾಗರಾಜ್, ಪೊಲೀಸ್ ವೀಕ್ಷಕಿ ಬಿನಿತ ಠಾಕೂರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಚಿಕ್ಕಮಗಳೂರು ಜಿಲ್ಲೆಯ ಸಿ.ಇ.ಒ. ಗೋಪಾಲಕೃಷ್ಣ ಬಿ., ಉಡುಪಿ ಎಸ್ಪಿ ಡಾ. ಅರುಣ್ ಕೆ., ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಾಠೆ, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ಡಿ.ಎಫ್.ಓ. ಗಣಪತಿ, ಜಿಲ್ಲಾ ಮಟ್ಟದ ವಿವಿಧ ನೋಡಲ್ ಅಧಿಕಾರಿಗಳು ಇದ್ದರು.