ಹಕ್ಕು ಜೊತೆ ಕರ್ತವ್ಯ ಪಾಲನೆ ಅತಿ ಮುಖ್ಯ: ಜಿಲ್ಲಾ ಪಂಚಾಯಿತಿ ಸಿಇಒ

KannadaprabhaNewsNetwork |  
Published : Dec 07, 2024, 12:30 AM IST
ಚಿತ್ರ :  6ಎಂಡಿಕೆ2 : ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನ ಆಚರಿಸಲಾಯಿತು.  | Kannada Prabha

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ರಾಷ್ಟ್ರದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸುವ ಮೂಲಕ ಪ್ರತಿಯೊಬ್ಬರೂ ಹಕ್ಕುಗಳನ್ನು ಪಡೆಯುವುದರ ಜತೆಗೆ ಕರ್ತವ್ಯ ಪಾಲಿಸುವುದು ಅತಿ ಮುಖ್ಯ ಎಂದು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಶುಕ್ರವಾರ ನಗರದ ಗಾಂಧಿ ಭವನದಲ್ಲಿ ನಡೆದ ಸಂವಿಧಾನ ಶಿಲ್ಪಿ, ಭಾರತ ರತ್ನ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 68 ನೇ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್ ಭಾರತ ಸಂವಿಧಾನ ರಚಿಸುವ ಮೂಲಕ ರಾಷ್ಟ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದರು.

ನಾಪೋಕ್ಲು ವಸತಿ ಶಾಲೆಯ ಸಹ ಶಿಕ್ಷಕಿ ರೂಪಾ ಮಾತನಾಡಿ, ಸಾಮಾಜಿಕ ನ್ಯಾಯ, ಭ್ರಾತೃತ್ವ, ಸಮಾನತೆ ಮತ್ತು ಸಹೋದರತ್ವ ಇದ್ದಲ್ಲಿ ರಾಷ್ಟ್ರದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅಂಬೇಡ್ಕರ್ ಸಾರಿದ್ದಾರೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಮೂಕ ನಾಯಕ. ಬಹಿಷ್ಕೃತ ಭಾರತ ಪತ್ರಿಕೆಗಳನ್ನು ಹೊರತಂದಿದ್ದರು. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮೂಲಕ ಪ್ರತಿಯೊಬ್ಬರಲ್ಲಿ ಜಾಗೃತಿ ಮೂಡಿಸಿದರು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್ ಮಾತನಾಡಿ, ಅಂಬೇಡ್ಕರ್ ಚಿಂತನೆಗಳು, ಬರಹಗಳು, ಭಾಷಣಗಳು ರಾಷ್ಟ್ರದ ಅಭಿವೃದ್ಧಿಗೆ ಸಾರ್ವಕಾಲಿಕ ದಾಖಲೆಗಳಾಗಿವೆ. ಅಂಬೇಡ್ಕರ್ ಅವರ ಸಾರ್ಥಕ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಶೋಷಿತ ಸಮುದಾಯಗಳ ಏಳಿಗೆಗೆ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದು ವಿವರಿಸಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಸಹ ಶಿಕ್ಷಕರಾದ ರೂಪ, ನಗರಸಭೆ ಪೌರಾಯುಕ್ತ ರಮೇಶ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ, ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಮತ್ತಿತರರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ, ವ್ಯವಸ್ಥಾಪಕಿ ಕುಸುಮಾ, ಶಿವಶಂಕರ, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಮಹದೇವಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಿಲ್ಲಿಯಲ್ಲಿ ಡಿಕೆಶಿ ರಾಜ್ಯ ನೀರಾವರಿ ಸಭೆ
ಗ್ಯಾಸ್ ಇಲ್ಲದೇ ಬೆಳಗಾವಿಯ 60 + ಕೈಗಾರಿಕೆ ಬಂದ್‌ ಹಂತಕ್ಕೆ