ಉಡುಪಿ: ಮಧ್ಯಪ್ರದೇಶದ ಇಂದೋರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಪಂದ್ಯಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಉಡುಪಿ ಜಿಲ್ಲಾ ಕಿಕ್ ಬಾಕ್ಸಿಂಗ್ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.ತಂಡದ ಆವನಿ ಎಸ್. ರಾವ್ ಹಾಗೂ ಧನುಷ್ ಶೆಟ್ಟಿ ಅವರು ಚಿನ್ನದ ಪದಕವನ್ನು ಪಡೆದು ಇಟೆಲಿಯಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಪಂದ್ಯಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಿಕ್ ಬಾಕ್ಸಿಂಗ್ ಅಸೋಸಿಯೇಷನ್ ಗೌರವ ಸಲಹೆಗಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾಧ್ಯಕ್ಷ ವಾಮನ್ ಪಾಲನ್, ಪ್ರಧಾನ ಕಾರ್ಯದರ್ಶಿ ರವಿ ಸಾಲ್ಯಾನ್, ಉಪಾಧ್ಯಕ್ಷ ಅಶೋಕ್ ಕುಲಾಲ್, ಜೊತೆ ಕಾರ್ಯದರ್ಶಿಗಳಾದ ಮೇಘಾ, ಸೂರಜ್, ತಾಂತ್ರಿಕ ನಿರ್ದೇಶಕ ಪವನ್ ಕುಮಾರ್, ಶಿಕ್ಷಕರಾದ ವರದರಾಜ್, ಅಮೃತ ಉಪಸ್ಥಿತರಿದ್ದರು. ಪವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.