- ಶಾಲಾ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು
------ಕನ್ನಡಪ್ರಭ ವಾರ್ತೆ ಆನಂದಪುರ
ಸಾಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳನ್ನು ಸರ್ಕಾರ ಹಾಗೂ ದಾನಿಗಳೊಂದಿಗೆ ಸಮಗ್ರ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.ಅವರು ಕೆಪಿಎಸ್ ಶಾಲೆಯಲ್ಲಿ ನಡೆದ ಶಾಲಾ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಮಾತನಾಡಿ. ಕಳೆದ 20 ವರ್ಷಗಳಿಂದ ಕೆಲವೊಂದು ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಣ್ಣ ಸುಣ್ಣವಿಲ್ಲದೆ ಶಾಲೆಯ ಸ್ವರೂಪವನ್ನೇ ಕಳೆದುಕೊಂಡಿದೆ. ಸಾಗರ ವಿಧಾನಸಭಾ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ಸುಣ್ಣ. ಬಣ್ಣ ಮಾಡಿಸುವ ತೀರ್ಮಾನನ್ನು ತೆಗೆದುಕೊಂಡಿದ್ದೇನೆ ಎಂದರು. ಸರ್ಕಾರಿ ಶಾಲೆಗಳಲ್ಲಿ ಉತ್ತಮ ತರಬೇತಿ ಪಡೆದ ಶಿಕ್ಷಕರಿದ್ದು ಮಕ್ಕಳಿಗೆ ಉತ್ತಮ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ. ಸರ್ಕಾರಿ ಶಾಲೆಗಳಿಗೆ ಬೇಕಾಗುವಂತಹ ಮೂಲಭೂತ ಸೌಕರ್ಯ ನೀಡಲಾಗುವುದು. ಹೆಚ್ಚಿನ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ, ದಾನಿಗಳು, ಸರ್ಕಾರದ ಸಹಕಾರದೊಂದಿಗೆ ಹೆಚ್ಚಿನ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ. ಅಲ್ಲದೆ ಆನಂದಪುರ ಕೆಪಿಎಸ್ ಶಾಲೆಯ ಬೆಳಗ್ಗೆ ಪ್ರಾರಂಭದ ಸಮಯ ಹಾಗೂ ಸಂಜೆ ಶಾಲೆ ಬಿಡುವ ಸಮಯದಲ್ಲಿ ರೋಡ್ ರೋಮಿಯೋ ಗಳ ಉಪಟಳ ತಪ್ಪಿಸಲು ಪೊಲೀಸ್ ವ್ಯವಸ್ಥೆ ಕಲ್ಪಿಸಿ ಅಂತಹ ಯುವಕರನ್ನು ಹಿಡಿದು ಪ್ರಕರಣವನ್ನು ದಾಖಲಿಸುವಂತೆ ಆನಂದಪುರ ಠಾಣೆಯ ಪಿಎಸ್ಐ ಯುವರಾಜ್ ಕಂಬಳಿ ಅವರಿಗೆ ಶಾಸಕರು ಆದೇಶಿಸಿದರು. ಕೆಪಿಎ ಶಾಲಾ ಅಭಿವೃದ್ಧಿ ಸಮಿತಿಯ ಸಭೆಯಲ್ಲಿ. ಉಪಾಧ್ಯಕ್ಷ ರಾಮಚಂದ್ರ, ಪ್ರಾಂಶುಪಾಲ ರವಿಶಂಕರ್, ಉಪ ಪ್ರಾಚಾರ್ಯ ಈಶ್ವರಪ್ಪ, ಆನಂದಪುರ ಗ್ರಾ.ಪಂ. ಅಧ್ಯಕ್ಷರ ಮೋಹನ್ ಕುಮಾರ್, ಆಚಾಪುರ ಗ್ರಾ.ಪಂ. ಅಧ್ಯಕ್ಷ ಕಲೀಮುಲ್ಲಾ ಖಾನ್, ಹಾಗೂ ಸಮಿತಿಯ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಭಾಗವಹಿಸಿದ್ದರು.
--------------ಫೋಟೋ 24 ಎ, ಎನ್, ಪಿ 2 ಆನಂದಪುರ ಕೆಪಿಎಸ್ ಶಾಲೆಯಲ್ಲಿ ನಡೆದ ಸಾಲ ಅಭಿವೃದ್ಧಿ ಸಮಿತಿ ಸಭೆ ಶಾಸಕ ಗೋಪಾಲಕೃಷ್ಣ ಬೇಳೂರು ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.