ಕನ್ನಡಪ್ರಭ ವಾರ್ತೆ ಹಾಸನ
ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಳೆದ ಡಿ.೪ ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಯೊಂದಿಗೆ ಹೋರಾಡಿ ಹುತಾತ್ಮನಾದ ಮೈಸೂರು ಅಂಬಾರಿ ಹೊತ್ತಿದ್ದ ಆನೆ ಅರ್ಜುನನ ಸ್ಮಾರಕಕ್ಕೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಾನವ-ವನ್ಯಜೀವಿ ಸಂಘರ್ಷಕ್ಕೆ ಏನು ಕಾರಣ ಎಂಬ ಅಧ್ಯಯನಕ್ಕೆ ಒತ್ತು ನೀಡಲಾಗುವುದು ಎಂದರು.
ಆನೆ ಹಾವಳಿ ತಪ್ಪಿಸಲು ಆಗಸ್ಟ್ ೧೨ ರಂದು ವಿಶ್ವ ಆನೆಗಳ ದಿನದಂದು ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಮ್ಮೇಳನ ನಡೆಸಲಾಗುವುದು. ಈ ಸಮ್ಮೇಳನದಲ್ಲಿ ವಿಶ್ವಾದ್ಯಂತ ತಜ್ಞರು ಆಗಮಿಸಲಿದ್ದಾರೆ ಎಂದು ತಿಳಿಸಿದರು.ಈ ಸಮ್ಮೇಳನದಲ್ಲಿ ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಣಕ್ಕೆ ಯಾವ ಯಾವ ದೇಶಗಳಲ್ಲಿ ಯಾವ ರೀತಿಯ ಪರಿಹಾರ ಮಾರ್ಗಗಳನ್ನು ಕಂಡುಕೊಳ್ಳಲಾಗಿದೆ. ಅತ್ಯುತ್ತಮ ರೂಢಿಗಳನ್ನು ನಮ್ಮಲ್ಲಿ ಕೂಡ ಅಳವಡಿಸಿಕೊಳ್ಳುವುದು ಹೇಗೆ ಎಂಬುದಾಗಿ ಬಗ್ಗೆ ಚಿಂತನ- ಮಂಥನ ನಡೆಸಲಾಗುವುದು ಎಂದು ತಿಳಿಸಿದರು.
ಕಾಕನಕೋಟೆಯಲ್ಲಿ ೧೯೬೮ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನನು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ. ಹೀಗಾಗಿ ಸಮಾಧಿ ಸ್ಥಳ ಯಸಳೂರಿನ ಜೊತೆಗೆ ಬಳ್ಳೆಯಲ್ಲಿ ಕೂಡ ಸ್ಮಾರಕ ನಿರ್ಮಿಸಲಾಗುವುದು ಎಂದು ತಿಳಿಸಿದರು.