ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಸಮೀಕ್ಷೆದಾರರಿಗೆ ಸಹಕರಿಸಲು ಕರೆ

KannadaprabhaNewsNetwork |  
Published : May 10, 2025, 01:06 AM IST
ಯಾದಗಿರಿಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ರಾಜ್ಯದ ಪ್ರತಿಯೊಂದು ಪರಿಶಿಷ್ಟ ಜಾತಿಯ ಕುಟುಂಬದ ಸಮಗ್ರ ಸಮೀಕ್ಷೆ ನಡೆಯಿತು. | Kannada Prabha

ಸಾರಾಂಶ

Comprehensive Survey of Scheduled Castes: Call for cooperation from surveyors

- ಬೇಕಾದ ವಿವರಗಳ ಸ್ಪಷ್ಟವಾಗಿ ನೀಡಿ: ಚನ್ನಬಸಪ್ಪ ಮನವಿ

ಕನ್ನಡಪ್ರಭ ವಾರ್ತೆ ಯಾದಗಿರಿ

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ರಾಜ್ಯದ ಪ್ರತಿಯೊಂದು ಪರಿಶಿಷ್ಟ ಜಾತಿಯ ಕುಟುಂಬದ ಸಮಗ್ರ ಸಮೀಕ್ಷೆ ಕೈಗೊಂಡು ಸಾಮಾಜಿಕ, ಶೈಕ್ಷಣಿಕ ,ಆರ್ಥಿಕ, ರಾಜಕೀಯ, ಔದ್ಯೋಗಿಕ, ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಣೆ ಮಾಡಿ ಒಳ ಮೀಸಲಾತಿ ವರ್ಗೀಕರಣ ಮಾಡಲು ಸರ್ಕಾರ ಪರಿಶಿಷ್ಟ ಜಾತಿ ಗಳ ಸಮಗ್ರ ಸಮೀಕ್ಷೆಗಳನ್ನು ಸಾಮಾಜಿಕ ಕಲ್ಯಾಣ ಇಲಾಖೆ ಮೂಲಕ ಕೈಗೊಳ್ಳುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಚನ್ನಬಸಪ್ಪ ಅವರು ತಿಳಿಸಿದ್ದಾರೆ.ಸಮೀಕ್ಷೆದಾರರು ತಮ್ಮ ಮನೆಗೆ ಬಂದಾಗ ಅವರೊಂದಿಗೆ ಸಹಕರಿಸಿ ಅವರಿಗೆ ಬೇಕಾದ ವಿವರಗಳನ್ನು ಪೂರ್ಣವಾಗಿ ಸ್ಪಷ್ಟವಾಗಿ ನೀಡಲು ಅವರು ಪರಿಶಿಷ್ಟ ಜಾತಿ ಕುಟುಂಬಗಳಿಗೆ ಕೋರಿದ್ದಾರೆ. ಮೇ 5 ರಿಂದ 17ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಾಗುತ್ತಿದ್ದು, ಮೇ 19ರಿಂದ 21ರವರೆಗೆ ವಿಶೇಷ ಶಿಬಿರಗಳನ್ನು ಕೈಗೊಂಡು ಮನೆ ಮನೆ ಭೇಟಿ ಅವಧಿಯಲ್ಲಿ ಬಿಟ್ಟು ಹೋದ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ.ಹೆಚ್ಚಿನ ವಿವರಗಳಿಗಾಗಿ ತಮ್ಮ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಅಥವಾ ತಹಶೀಲ್ದಾರ್ ಕಚೇರಿಯನ್ನು ಸಂಪರ್ಕಿಸುವುಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಯಾದಗಿರಿ ಜಿಲ್ಲೆ ಮೂಲಕ ಕೋರಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

----

9ವೈಡಿಆರ್‌5: ಯಾದಗಿರಿಯಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ರಾಜ್ಯದ ಪ್ರತಿಯೊಂದು ಪರಿಶಿಷ್ಟ ಜಾತಿಯ ಕುಟುಂಬದ ಸಮಗ್ರ ಸಮೀಕ್ಷೆ ನಡೆಯಿತು.

---000---

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!