ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸಮಗ್ರವಾಗಿ ಪರಿಶೀಲಿಸಿ: ಜಿಲ್ಲಾಧಿಕಾರಿ

KannadaprabhaNewsNetwork |  
Published : Jul 25, 2026, 02:15 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ಮಾತನಾಡಿದರು. | Kannada Prabha

ಸಾರಾಂಶ

ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆಯನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತ ಮತ್ತು ಸಮಗ್ರವಾಗಿ ಪರಿಶೀಲನೆ ನಡೆಸಬೇಕು.

ಜಿಲ್ಲೆಯ ಗರ್ಭಧಾರಣಾ ಪೂರ್ವ, ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ ಸಕ್ಷಮ ಪ್ರಾಧಿಕಾರದ ಸಭೆ

ಕನ್ನಡಪ್ರಭ ವಾರ್ತೆ ಕಾರವಾರ

ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆಯನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತ ಮತ್ತು ಸಮಗ್ರವಾಗಿ ಪರಿಶೀಲನೆ ನಡೆಸಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ನಿರ್ದೇಶನ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ ಸಕ್ಷಮ ಪ್ರಾಧಿಕಾರದ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸ್ತುತ ಜಿಲ್ಲೆಯಲ್ಲಿ 82 ಸ್ಕ್ಯಾನಿಂಗ್ ಸೆಂಟರ್ ಗಳಿದ್ದು, ಈ ಸೆಂಟರ್‌ಗಳಿಗೆ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ಪರಿಶೀಲನೆ ಸಂದರ್ಭದಲ್ಲಿ ಕೆಂದ್ರದಲ್ಲಿನ ಅಗತ್ಯ ದಾಖಲಾತಿಗಳು ಮತ್ತು ಈ ಕೇಂದ್ರಗಳಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ ಮಾಡುತ್ತಿಲ್ಲ ಎಂಬುದರ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಭೇಟಿ ನೀಡಿದ ಸಂದರ್ಭದ ಜಿಪಿಎಸ್ ಪೋಟೋಗಳೊಂದಿಗೆ ಸಮಗ್ರ ವರದಿ ಸಿದ್ದಪಡಿಸಿ, ಈ ವರದಿಯನ್ನು ದೃಢೀಕರಿಸಿ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ್ ದೊಡ್ಡಮನಿ, ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಕ್ರಿಮ್ಸ್‌ನ ಸ್ತ್ರೀರೋಗ ತಜ್ಞ ಡಾ. ನರೇಶ ಪಾವಸ್ಕರ್, ಸದಸ್ಯರಾದ ಕ್ರಿಮ್ಸ್‌ನ ಮಕ್ಕಳ ವಿಭಾಗದ ಮುಖ್ಯಸ್ಥ ಮತ್ತು ಸಹ ಪ್ರಾಧ್ಯಾಪಕ ಡಾ. ಪವನ ಕುಮಾರ್, ಜಿಲ್ಲಾ ವಾರ್ತಾಧಿಕಾರಿ ಬಿ.ಶಿವಕುಮಾರ್, ವಕೀಲೆ ಸುಧಾರಾಣಿ ಸಾಮಾಜಿಕ ಕಾರ್ಯಕರ್ತೆ ಯಶೋಧ ಹೆಗಡೆ ಮತ್ತು ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷೆ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರಕರ, ಸದಸ್ಯರಾದ ರೇಡಿಯಾಲಜಿಸ್ಟ್ ಡಾ. ಆಶಿತಾ, ರೋಟರಿ ಕ್ಲಬ್ ನ ಹೇಮ್ಲಾ ಅಲ್ಫಾನ್ಸೋ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರಕಾರಿ ಆಸ್ಪತ್ರೆ ಸಮಸ್ಯೆ ಬಗೆಹರಿಸುವಂತೆ ಆರೋಗ್ಯ ಸಚಿವರಿಗೆ ಮನವಿ
ಬಿಸಿಯೂಟ ಅನುದಾನ ಹೆಚ್ಚಳಕ್ಕೆ ಮನವಿ