ಶೈಕ್ಷಣಿಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

KannadaprabhaNewsNetwork | Published : Sep 21, 2024 1:53 AM

ಸಾರಾಂಶ

ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಣೆ ಮಾಡಬೇಕು, ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕ ವಸೂಲಿ ಮಾಡಬಾರದು.

ಕನ್ನಡಪ್ರಭ ವಾರ್ತೆ ಕೋಲಾರಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ವಿಧ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಸಂಘಟನೆ ಹಾಗೂ ವಿದ್ಯಾರ್ಥಿಗಳು ಮಂಗಸಂದ್ರ ಸ್ನಾತಕೋತ್ತರ ಕೇಂದ್ರದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಎನ್.ಶಿವಪ್ಪ ಮಾತನಾಡಿ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಮೌಲ್ಯಮಾಪನ, ಇಂಟರ್‌ನೆಟ್ ಸಮಸ್ಯೆ, ಪರಿಶಿಷ್ಟ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಶುಲ್ಕ ಪಾವತಿ ಸೇರಿದಂತೆ ಸಾಕಷ್ಟು ಸಮಸ್ಯೆಗಳ ಪಟ್ಟಿಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಸಮಸ್ಯೆ ಬಗೆಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ವಿದ್ಯಾರ್ಥಿ ವೇತನ ನೀಡಿಲ್ಲ

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಾಖಲಾತಿ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ಬಂದಿಲ್ಲ. ಹಿಂದುಳಿದ ವರ್ಗಗಳ ಬುಡಕಟ್ಟು ಭೇಟಿಯ ಹಣವನ್ನು ನೀಡದೇ ವಿಳಂಬ ಮಾಡಿದ್ದಾರೆ, ವಿದ್ಯಾರ್ಥಿಗಳ ಸ್ವಂತ ಹಣದಿಂದ ಖರ್ಚು ಮಾಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಕ್ಕೆ ಬಿಲ್ಲುಗಳನ್ನು ನೀಡಿ ವರ್ಷವಾದರೂ ಯಾವುದೇ ಕ್ರಮ ವಹಿಸಿಲ್ಲ ಕೇಂದ್ರದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್‌ಗಳನ್ನು ವಿತರಣೆ ಮಾಡಬೇಕು, ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ಪ್ರತ್ಯೇಕವಾಗಿ ಪ್ರಯೋಗಾಲಯದ ಶುಲ್ಕ ವಸೂಲಿ ಮಾಡಬಾರದು ಎಂದು ಒತ್ತಾಯಿಸಿದರು.

ವಿವಿಯಲ್ಲಿ ಬ್ರೋಕರ್‌ಗಳ ಹಾವಳಿಎಸ್‌ಎಫ್‌ಐ ಸಂಘಟನೆಯ ಮಾಜಿ ರಾಜ್ಯ ಅಧ್ಯಕ್ಷ ವಿ.ಅಂಬರೀಷ್ ಮಾತನಾಡಿ, ವಿಶ್ವವಿದ್ಯಾಲಯವು ಕೆಲವು ಬ್ರೋಕರ್ ಗಳಿಂದ ಕೂಡಿದ್ದು ಶೈಕ್ಷಣಿಕ ವ್ಯವಸ್ಥೆ ನಾಶ ಮಾಡಿದ್ದಾರೆ ಇದಕ್ಕೆ ಜನಪ್ರತಿನಿಧಿಗಳ ಅಧಿಕಾರಿ ವರ್ಗ ಶಾಮೀಲಾಗಿದ್ದಾರೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡದೇ ಶಿಕ್ಷಣದಿಂದ ವಂಚಿತರಾಗಿ ಮಾಡಿದ್ದಾರೆ ಎಂದು ಆರೋಪಿಸಿದರು.ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ವಿ.ಸುರೇಶ್‌ಬಾಬು ಜಿಲ್ಲಾ ಉಪಾಧ್ಯಕ್ಷ ಶಶಿಕುಮಾರ್, ಸುದರ್ಶನ್, ಲಾವಣ್ಯ, ಜಿಲ್ಲಾ ಸಹ ಕಾರ್ಯದರ್ಶಿ ಹರ್ಷಿತ ಮುಖಂಡರಾದ ತಿಮ್ಮರಾಜು, ಅಮೃತ, ಭಾಷ, ಪವಣ್, ಪ್ರಿಯಾಂಕ ಇದ್ದರು.

Share this article