ಕನ್ನಡಪ್ರಭ ವಾರ್ತೆ ಸಕಲೇಶಪುರ
ಬುಧವಾರ ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆಯ ಸಮಿತಿಯ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನಗರದ ಸುಭಾಷ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿವಿಧ ಶಾಲಾ ಮಕ್ಕಳ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಇಲಾಖೆಯ ಸಿಬ್ಬಂದಿ ಕಡ್ಡಾಯವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು. ಗಣರಾಜ್ಯೋತ್ಸವ ಸಂದಭದಲ್ಲಿ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು ಎಂದರು.
ವಿವಿಧ ಶಾಲೆ ಹಾಗೂ ಇಲಾಖೆಗಳನೊಳಗೊಂಡಂತೆ ಪರಿಸರ, ನಾಡು ನುಡಿಗೆ ಸಂಬಂಧಿಸಿದ ಸ್ತಬ್ಧ ಚಿತ್ರಗಳ ಆಕರ್ಷಕ ಮೆರವಣಿಗೆಯು ಸಹ ಈ ಸಂದರ್ಭದಲ್ಲಿ ನಡೆಯಲಿದ್ದು, ತಾಲೂಕಿನ ಎಲ್ಲ ಸಂಘಸಂಸ್ಥೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.ಪೂರ್ವಭಾವಿ ಸಭೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶಾರದ ಗುರುಮೂರ್ತಿ, ಪತ್ರಕರ್ತರ ಸಂಘದ ಅಧ್ಯಕ್ಷ ಜೈ ಭೀಮ್ ಮಂಜು, ನಗರ ಠಾಣಾ ಸಬ್‌ಇನ್ಸ್‌ಪೆಕ್ಟರ್ ಮಹೇಶ್, ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ತಮ್ಮಣ್ಣ ಶೆಟ್ಟಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.