೫ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ-ಜಿಲ್ಲಾಧಿಕಾರಿ ವೈಶಾಲಿ

KannadaprabhaNewsNetwork |  
Published : Feb 28, 2024, 02:38 AM IST
ಸಭೆಯಲ್ಲಿ ಆರೋಗ್ಯಇಲಾಖೆಯ ಪಲ್ಸ ಪೊಲಿಯೋ ಕುರಿತು ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು. | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಮಾ. ೩ರಂದು ಬೂತ್‌ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುವುದು ಹಾಗೂ ಮಾ. ೪ರಿಂದ ೬ರ ವರೆಗೆ ಮೂರು ದಿನಗಳ ವರೆಗೆ ಮನೆ-ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು, ೫ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ಗದಗ: ಜಿಲ್ಲೆಯಲ್ಲಿ ಮಾ. ೩ರಂದು ಬೂತ್‌ ಮಟ್ಟದಲ್ಲಿ ಪೋಲಿಯೋ ಲಸಿಕೆ ಹಾಕಲಾಗುವುದು ಹಾಗೂ ಮಾ. ೪ರಿಂದ ೬ರ ವರೆಗೆ ಮೂರು ದಿನಗಳ ವರೆಗೆ ಮನೆ-ಮನೆಗೆ ಭೇಟಿ ನೀಡಿ ಪೋಲಿಯೋ ಲಸಿಕೆ ಹಾಕಲಾಗುತ್ತಿದ್ದು, ೫ ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ ಪೋಲಿಯೋ ಅನುಷ್ಠಾನ ಕುರಿತು ಟಾಸ್ಕ ಫೋರ್ಸ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಶಾಲಾ ಮಕ್ಕಳಿಗೆ ಪಲ್ಸ ಪೊಲಿಯೋ ಕಾರ್ಯಕ್ರಮದ ಕುರಿತು ಪ್ರಭಾತ ಫೇರಿ ಕೈಗೊಳ್ಳಬೇಕು. ಪಲ್ಸ ಪೋಲಿಯೋ ಬೂತ್‌ಗಳಿರುವ ಅಂಗನವಾಡಿ ಕೇಂದ್ರಗಳನ್ನು ಪೋಲಿಯೋ ಬ್ಯಾನರ್‌ಗಳಿಂದ ಸಿಂಗರಿಸಿ ಪಲ್ಸ್‌ ಪೋಲಿಯೋ ೪ ದಿನದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕಟ್ಟಡ ನಿರ್ಮಾಣಕ್ಕೆ ಬಂದಂತಹ ಕಾರ್ಮಿಕರಿಗೆ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಪಲ್ಸ್‌ ಪೊಲಿಯೊ ಕಾರ್ಯಕ್ರಮಕ್ಕೆ ಅವಶ್ಯವಿರುವ ಐಸ್ ಪ್ಯಾಕ್ ತಯಾರಿಸಲು ಮೂರು ದಿನಗಳ ಮೊದಲು ನಿರಂತರ ವಿದ್ಯುತ್ ಸರಬರಾಜು ಇರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಮೀನಾಕ್ಷಿ ಕೆ.ಎಸ್ ಮಾತನಾಡಿ, ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಈ ಸುತ್ತಿನಲ್ಲಿ ೧೨೯೩೨೭ ಮಕ್ಕಳಿಗೆ ಲಸಿಕೆ ಗುರಿ ಹೊಂದಲಾಗಿದೆ. ಮಾ. ೩ರಂದು ಬೂತ್‌ ಮಟ್ಟದಲ್ಲಿ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು. ಮಾ. ೪ರಿಂದ ೬ರ ವರೆಗೆ ಮೂರು ದಿನಗಳ ವರೆಗೆ ಲಸಿಕಾ ತಂಡದವರು ಮನೆ-ಮನೆಗೆ ಭೇಟಿ ನೀಡಿ ಲಸಿಕಾ ಕೇಂದ್ರಕ್ಕೆ ಬರದೇ ಉಳಿದಂತ ಮಕ್ಕಳನ್ನು ಹುಡುಕಿ ಅಂಥ ಮಕ್ಕಳಿಗೆ ಲಸಿಕೆ ನೀಡಿ ಆ ಮನೆಗಳಿಗೆ ಪಿ ಮಾರ್ಕ್‌ ಗುರುತನ್ನು ಹಾಕುವರೆಂದು ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ೪೭೦ ಲಸಿಕಾ ಕೇಂದ್ರಗಳನ್ನು ಹಾಗೂ ನಗರ ಪ್ರದೇಶಗಳಲ್ಲಿ ೨೩೫ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಕೆಲಸಕ್ಕೆ ಒಟ್ಟು ೧೪೧೦ ಜನ ಸಿಬ್ಬಂದಿಯವರನ್ನು ಲಸಿಕೆ ಹಾಕುವ ಕೆಲಸಕ್ಕೆ ಒಟ್ಟು ೭೦೫ ತಂಡಗಳಲ್ಲಿ ನಿಯೋಜನೆ ಮಾಡಲಾಗಿದೆ. ೧೪೬ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಅದರಂತೆ ೩೦ ಟ್ರಾನ್ಜಿಟ್ ತಂಡಗಳು ಹಾಗೂ ೭ ಸಂಚಾರಿ ತಂಡಗಳ ಮೂಲಕ ಪೋಲಿಯೋ ಹನಿ ಹಾಕುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಆರೋಗ್ಯಇಲಾಖೆಯ ಪಲ್ಸ ಪೋಲಿಯೋ ಕುರಿತು ಭಿತ್ತಿ ಪತ್ರ ಬಿಡುಗಡೆ ಮಾಡಲಾಯಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ನೀಲಗುಂದ, ಎಸ್.ಎಂ.ಓ ಡಾ. ಮುಕುಂದ ಗಲಗಲಿ, ಜಿಲ್ಲಾ ಶಸ್ತ್ರಚಿಕಿತ್ಸಕರ ಡಾ. ವಿ.ಸಿ.ಕರಿಗೌಡ್ರ, ತಾಲೂಕು ವೈದ್ಯಾಧಿಕಾರಿಗಳು, ಜಿಲ್ಲೆಯ ಎಲ್ಲಾ ಅನುಷ್ಠಾನಾಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತರಕಾರಿಯಲ್ಲಿ ಹಾನಿಕಾರಕ ಅಂಶ ಪತ್ತೆ: ಶೀಘ್ರ ಸೂಕ್ತ ಮಾರ್ಗಸೂಚಿ
ಸಿಲಿಂಡರ್‌ಗೆ ಹಾಹಾಕಾರ: ಊಟ, ತಿಂಡಿ ಹರೋಹರ!