ಮಂಡ್ಯ:
ನಂತರ ಮಾತನಾಡಿದ ಅವರು, ಅತಿವೇಗ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸದೇ ಚಾಲನೆ ಮಾಡುವುದು ಅಪಘಾತಗಳಿಗೆ ಪ್ರಮುಖ ಕಾರಣಗಳಾಗಿವೆ. ಸಂಚಾರ ನಿಯಮಗಳನ್ನು ಪಾಲಿಸಿ, ರಸ್ತೆ ಅಪಘಾತಗಳಿಂದ ಉಂಟಾಗುವ ಜೀವಹಾನಿ ಹಾಗೂ ಆಸ್ತಿ ನಷ್ಟವನ್ನು ತಡೆಯಿರಿ ಎಂದು ಕಿವಿಮಾತು ಹೇಳಿದರು. ಇದೇ ವೇಳೆ ಸಂಚಾರ ನಿಯಮಗಳ ಪಾಲನೆ, ರಸ್ತೆ ಸುರಕ್ಷತೆ ಕಾಪಾಡುವುದು ಹಾಗೂ ಅಪಘಾತ ರಹಿತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ ಸ್ವೀಕರಿಸಿದರು. ನಂತರ ಜಾಥಾವು ಡೀಸಿ ಕಚೇರಿಯಿಂದ ನಗರದ ಜಯಚಾಮರಾಜ ಒಡೆಯರ್ ವೃತ್ತದವರೆಗೆ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಗಳ ಪ್ರಾಧಿಕಾರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಎಂ.ಆನಂದ್ , ಪ್ರಾದೇಶಿಕ ಸಾರಿಗೆ ಅಧಿಕಾರಿ ಟಿ.ಜೆ.ಹೇಮಾವತಿ, ಪ್ರಾದೇಶಿಕ ಸಾರಿಗೆ ಕಚೇರಿ ನಿವೃತ್ತ ಅಧೀಕ್ಷಕ ಎಂ.ಜಿ.ಎನ್.ಪ್ರಸಾದ್, ಸ್ಕೌಟ್ ಅಂಡ್ ಗೈಡ್ ನ ಮುಖ್ಯಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಡೀಸಿಯಿಂದ ಸ್ಥಳ ಪರಿಶೀಲನೆಮಂಡ್ಯ: ತಾಲೂಕಿನ ಬೇವುಕಲ್ಲು ಗ್ರಾಮದ ಬೀರೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿ.6ರಂದು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಡೀಸಿ ಡಾ.ಕುಮಾರ ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲಿಸಿದರು.
ದೇವಸ್ಥಾನ ಆವರಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು, ವಾಹನಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಹಾಗೂ ತುರ್ತು ಪರಿಸ್ಥಿತಿಗಳಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ವೇಳೆ ಎಸ್ಪಿ ಶೋಭರಾಣಿ ಸೇರಿದಂತೆ ಪೊಲೀಸರು, ಅಧಿಕಾರಿಗಳು ಇದ್ದರು.