ಮೇ 7ಕ್ಕೆ ಕಡ್ಡಾಯವಾಗಿ ಮತದಾನ ಮಾಡಿ: ಜಿಪಂ ಸಿಇಒ

KannadaprabhaNewsNetwork |  
Published : Apr 20, 2024, 01:06 AM IST
ಫೋಟೋ- 19ಜಿಬಿ7 ಮತ್ತು 19ಜಿಬಿ8ಕಲಬುರಗಿ ಕೇಂದ್ರ ಬಸ್‌ ನಿಲ್ದಾಣದಲ್ಲಿ ಬಣ್ಣದ ಪುಗ್ಗಗಳ ಗೊಂಚಲು ಹಾರಿಬಿಟ್ಟು ಮತದಾನ ಜಾಗೃತಿ ಮೂಡಿಸಲಾಯ್ತು. | Kannada Prabha

ಸಾರಾಂಶ

ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕಾರ ನೀಡಿ ಎಂದು ಭಂವರ್ ಸಿಂಗ್ ಮೀನಾ ಕರೆ ನೀಡಿದರು. ಕಲಬುರಗಿ ಕೇಂದ್ರ ಬಸ್‌ ನಿಲ್ದಾಣದಲ್ಲಿ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಪಂ ಮತ್ತು ಸ್ವೀಪ್ ಸಮಿತಿ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಯೋಗದೊಂದಿಗೆ ಲೋಕಸಭಾ ಚುನಾವಣೆ ನಿಮಿತ್ತ ಸಸಿಗೆ ನೀರೆರೆಯುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕಲಬುರಗಿ

೨೦೨೪ರ ಲೋಕಸಭಾ ಚುನಾವಣೆ ಮೇ ೭ರಂದು ಜರುಗಲಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಭಂವರ್ ಸಿಂಗ್ ಮೀನಾ ಕರೆ ನೀಡಿದರು.

ಕೇಂದ್ರ ಬಸ್‌ ನಿಲ್ದಾಣದಲ್ಲಿ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಸ್ವೀಪ್ ಸಮಿತಿ ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಹಯೋಗದೊಂದಿಗೆ ಲೋಕಸಭಾ ಚುನಾವಣೆ ೨೦೨೪ರ ನಿಮಿತ್ತ ಸಸಿಗೆ ನೀರೆರೆಯುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೇವೆ. ಮತದಾನ ಪ್ರಜಾಪ್ರಭುತ್ವದ ಹಬ್ಬ. ನಾವೆಲ್ಲರೂ ಸೇರಿಕೊಂಡು ಹಬ್ಬದ ರೀತಿಯಲ್ಲಿ ಮತದಾನ ಮಾಡಬೇಕು. ಮತದಾನ ಪ್ರಮಾಣ ಹೆಚ್ಚಿಸಲು ಸತತವಾಗಿ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳವುದರ ಮೂಲಕ ಜನರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಮಗದ ವ್ಯವಸ್ಥಾಪಕ ನಿರ್ದೇಶಕ ಎಂ. ರಾಚಪ್ಪ ಪ್ರತಿಜ್ಞೆ ವಿಧಿ ಭೋಧಿಸಿ ಮಾತನಾಡಿ, ಸ್ವೀಪ್ ಸಮಿತಿ ಹಾಗೂ ಜಿಲ್ಲಾಡಳಿತ ವತಿಯಿಂದ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರಜಾಪ್ರಭುತ್ವದ ಹಬ್ಬವಾಗಿದೆ ನಾವೆಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ಮತದಾನ ಮಾಡಬೇಕೆಂದರು.

ನಮ್ಮಲ್ಲಿ ಅನೇಕ ಸಿಬ್ಬಂದಿ ವರ್ಗದವರು ಬೇರೆ ಊರುಗಳಲ್ಲಿ ಅವರ ಗುರುತಿನ ಚೀಟಿ ಇದೆ. ಪೋಸ್ಟಲ್ ಬ್ಯಾಲೇಟ್ ಮುಖಾಂತರ ಮತದಾನ ಮಾಡುತ್ತಿದ್ದಾರೆ. ಮತದಾನದ ಜಾಗೃತಿ ನೀವು ಇನ್ನೂಬ್ಬರಿಗೆ ತಿಳಿಯಪಡಿಸಬೇಕೆಂದರು.ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ದೇವಿದಾಸ ಪಾಟೀಲ ಮಾತನಾಡಿ, ಪ್ರತಿಯೊಬ್ಬರು ಜವಾಬ್ದಾರಿಯಿಂದ ಮತ ಚಲಾಯಿಸಬೇಕು. ಇದು ಐದು ವರ್ಷಗಳಿಗೆ ಬರುವ ಚುನಾವಣೆ. ಆದ್ದರಿಂದ ಎಲ್ಲರೂ ತಪ್ಪದೇ ಮತದಾನ ಮಾಡಬೇಕೆಂದರು.

ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರುನ್ನಮ್‌ ಮತದಾನ ಜಾಗೃತಿ ಮೂಡಿಸಲು ಬಲೂನ್‌ಗಳನ್ನು ಹಾರಿಬಿಟ್ಟರು ಮತ್ತು ಬಸ್‌ಗಳಿಗೆ ಮತದಾನ ಸ್ಟೀಕರ್ ಅಂಟಿಸಿದರು.

ಇದೇ ಸಂದರ್ಭದಲ್ಲಿ ಕೆನರಾ ಬ್ಯಾಂಕ್‌ನಿಂದ ಉಚಿತವಾಗಿ ನೀಡಿರುವ ನೀರಿನ ಫಿಲ್ಟರ್‌ಗಳಿಗೆ ಜಿಲ್ಲಾ ಚುನಾವಣಾಧಿಕಾರಿ ರಿಬ್ಬನ್‌ ಕತ್ತರಿಸುವುದರ ಮೂಲಕ ಉದ್ಫಾಟಿಸಿದರು.

ಜಿಪಂ ಉಪಕಾರ್ಯದರ್ಶಿ ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಅಬ್ದುಲ್ ಅಜೀಮ್, ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ಧಪ್ಪ ಗಂಗಾಧರ, ನಾರಾಯಣಪ್ಪ ಕುರಬರ್, ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ ಹಾಗೂ ಅಧಿಕಾರಿಗಳು ಸಾರ್ವಜನಿಕರು ಅಪರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಶಕಗಳಲ್ಲೇ ಅಪರೂಪದ ಘಟನೆ ಸ್ಪೀಕರ್‌ ಖಾದರ್‌ ಎದ್ದು ಹೋದರ್‌!
2 ಸಾವಿರ ಬೋಧಕ ಹುದ್ದೆಗಳ ನೇರ ನೇಮಕಾತಿ : ಸುಧಾಕರ್‌