ಸುರಪುರ: ಪ್ರಸ್ತುತ ತಂತ್ರಜ್ಞಾನ ಕ್ಷೇತ್ರದಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗವು ಅತ್ಯಂತ ಮಹತ್ವದ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು ಹಾಗೂ ನಿರಂತರ ಅಧ್ಯಯನದ ಮೂಲಕ ಉತ್ತಮ ಜ್ಞಾನ ಮತ್ತು ಕೌಶಲ್ಯ ಬೆಳೆಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಶರಣಬಸಪ್ಪ ಸಾಲಿ ಹೇಳಿದರು.
ಕಾಲೇಜು ಶಿಕ್ಷಣ ಮುಗಿಸಿ ಹೊರಹೋಗುತ್ತಿರುವ ವಿದ್ಯಾರ್ಥಿಗಳು ಶಿಕ್ಷಣದ ಅವಧಿಯಲ್ಲಿ ಗಳಿಸಿದ ಜ್ಞಾನ, ಅನುಭವ ಹಾಗೂ ಕೌಶಲ್ಯಗಳನ್ನು ವೃತ್ತಿಜೀವನದಲ್ಲಿ ಅಳವಡಿಸಿಕೊಳ್ಳುವುದರ ಜತೆಗೆ ಸಮಾಜದ ಪ್ರಗತಿಗೂ ಕೊಡುಗೆ ನೀಡಬೇಕು. ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ನಿರಂತರವಾಗಿ ವೃದ್ಧಿಸಿಕೊಳ್ಳಬೇಕು ಎಂದರು.
ಪ್ರೊ. ಪೂಜಾ ಹತ್ತರಕಿ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಪ್ರೊ. ಬಸನಗೌಡ ಕೊಳ್ಳೂರು, ಪ್ರಶಾಂತ ಶೇರಿ, ಈಶ್ವರಾಜ್ ಪಾಟೀಲ, ರಾಘವೇಂದ್ರ ಕುಲಕರ್ಣಿ ಅವರು ವಿದ್ಯಾರ್ಥಿಗಳಿಗೆ ಅಗತ್ಯ ಮಾರ್ಗದರ್ಶನ ನೀಡಿದರು. ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಅಶೋಕ ಪಾಟೀಲ, ಶರಣಗೌಡ ಪಾಟೀಲ, ಸಾಹೇಬಗೌಡ ಪಾಟೀಲ, ಪಾರ್ವತಿ ಪಾಟೀಲ, ಗಂಗಾಧರ ಹುಗಾರ, ಸಾಹೇಬಗೌಡ ಉಪಸ್ಥಿತರಿದ್ದರು.ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಅಂತಿಮ ವರ್ಷದ ವಿದ್ಯಾರ್ಥಿಗಳ ಜೀವನಕ್ಕೆ ಶುಭ ಹಾರೈಸಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕರ‍್ಯಕ್ರಮಗಳು ಜರುಗಿದವು.