ವಿದ್ಯಾರ್ಥಿಗಳಿಗೆ ಲಯನ್ಸ್‌ನಿಂದ ಕಂಪ್ಯೂಟರ್‌ ತರಬೇತಿ

KannadaprabhaNewsNetwork |  
Published : Jul 06, 2024, 12:50 AM IST
5ಎಚ್ಎಸ್ಎನ್4 : ಪಟ್ಟಣದ ಸಮೀಪ ಎನ್ ನಿಡಗೋಡು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕಂಪ್ಯೂಟರ್ ತರಭೇತಿ ,ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ಶಿಬಿರವನ್ನು  ಹಮ್ಮಿಕೊಳ್ಳಲಾಗಿತ್ತು. | Kannada Prabha

ಸಾರಾಂಶ

ಬೇಲೂರು ಪಟ್ಟಣದ ಸಮೀಪ ಎನ್ ನಿಡಗೋಡು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ, ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.

ಕನ್ನಡಪ್ರಭ ವಾರ್ತೆ ಬೇಲೂರುಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳು ಕಲೆ, ಸಂಸ್ಕೃತಿಗೆ ಹೆಚ್ಚು ಒತ್ತು ನೀಡುತ್ತಾರೆಂದು ಲಯನ್ಸ್‌ ಸೇವಾ ಸಂಸ್ಥೆ ಅಧ್ಯಕ್ಷ ಡಾ. ಚಂದ್ರಮೌಳಿ ಹೇಳಿದರು.ಪಟ್ಟಣದ ಸಮೀಪ ಎನ್ ನಿಡಗೋಡು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ, ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ಶಿಬಿರದಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವರೇ ಹೆಚ್ಚು. ಆದರೆ ಇಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಇಂಗ್ಲೀಷ್‌ ಕಲಿಕೆಯಲ್ಲಿ ಖಾಸಗಿ ಶಾಲೆಗಳನ್ನ ಮೀರಿಸುವ ಜ್ಞಾನದ ಭಂಡಾರ ಹೊಂದಿದ್ದಾರೆ. ಇಲ್ಲಿಯ ಶಿಕ್ಷಕ ಆಶಾಕಿರಣ್ ಅವರು ನೀಡಿರುವ ಕಂಪ್ಯೂಟರ್‌ ಕಲಿಕೆಗೆ ಬೇಕಾಗಿದ್ದ ಪರಿಕರಗಳನ್ನು ನಮ್ಮ ಲಯನ್ಸ್ ಸೇವಾ ಸಂಸ್ಥೆಯಿಂದ ನೀಡುತ್ತಿದ್ದೇವೆ ಎಂದರು.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳು ಕ್ಷೀಣಿಸುತ್ತಿದ್ದು ಖಾಸಗಿ ಶಾಲೆಗಲಿಗ ಸೆಡ್ಡು ಹೊಡೆಯುವ ರೀತಿಯಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನು ಕಲಿತಿರುತ್ತಾರೆ. ಪ್ರತಿ ವಿದ್ಯಾರ್ಥಿಗಳಿಗೂ ಆರೋಗ್ಯ ತಪಾಸಣೆ ಅತಿಮುಖ್ಯ, ಅದಕ್ಕಾಗಿ ಪ್ರತಿ ಶಾಲಾ ಕಾಲೇಜುಗಳಲ್ಲಿ ವಾರಕ್ಕೊಮ್ಮೆ ಆರೋಗ್ಯ ತಪಾಸಣಾ ಶಿಬಿರ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ವಲಯ ಅಧ್ಯಕ್ಷ ಅಬ್ದುಲ್ ಲತೀಫ್ ಮಾತನಾಡಿ, ಈ ವರ್ಷ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗಾಗಿ ಆದರ್ಶ ಲ್ಯಾಬ್ ವತಿಯಿಂದ ಕಣ್ಣಿನ ಪರೀಕ್ಷೆ ಮಾಡುವ ಮೂಲಕ ಅವರಿಗೆ ತೊಂದರೆ ಇದ್ದರೆ ನಮ್ಮ ಸಂಸ್ಥೆಯ ಕಡೆಯಿಂದ ಉಚಿತ ಚಿಕಿತ್ಸೆ ನೀಡಲಾಗುವುದು. ವಿದ್ಯಾರ್ಥಿಗಳ ಪರಿಸರದ ಜಾಗೃತಿಯನ್ನು ಚಿಕ್ಕ ಮಕ್ಕಳಿಂದಲೆ ಅರಿವು ನೀಡುವ ಕೆಲಸ ಮಾಡಲಾಗುವುದು ಎಂದರು.

ಮುಖ್ಯೋಪದ್ಯಾಯ ಜಗದೀಶ್ ಮಾತನಾಡಿ, ಲಯನ್ಸ್ ಸಂಸ್ಥೆ ನಮ್ಮ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತವಾಗಿ ಕಂಪ್ಯೂಟರ್ ತರಬೇತಿಯನ್ನು ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಲಯನ್ಸ್ ಸಂಸ್ಥೆಯ ಪ್ರಶಾಂತ್, ಸುಮಂತ್, ಸಂತೋಷ್, ಪೂವಯ್ಯ,ಕಣ್ಣಿನ ಆಸ್ಪತ್ರೆ ಆದರ್ಶ, ರವಿಕುಮಾರ್, ಶಿಕ್ಷಕರಾದ ಆಶಾ, ಪ್ರತಿಮ ಹಾಜರಿದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?