ಸಮಾಧಾನ ಸಮಾರಂಭ; ಬಾಕಿ ಪ್ರಕರಣ ಇತ್ಯರ್ಥ

KannadaprabhaNewsNetwork |  
Published : Aug 24, 2026, 02:00 AM IST
 ಮೀಸಲಾತಿ | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮಾರ್ಗದರ್ಶನದಲ್ಲಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೀದರ್ ವತಿಯಿಂದ ಆಯೋಜಿಸ ಲಾದ ವಿಶೇಷ ಲೋಕ ಅದಾಲತ್ - ‘ಸಮಾಧಾನ ಸಮಾರಂಭ’ದ ಅಂಗವಾಗಿ, ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇದ್ದ ರಾಮಶೆಟ್ಟಿ ವಿರುದ್ಧ ವೀರಶೆಟ್ಟಿ ಪ್ರಕರಣವನ್ನು ವಿಡಿಯೋ ಕಾನ್ಫರೆನ್ಸ್ (VC) ಮೂಲಕ ಯಶಸ್ವಿಯಾಗಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್

ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ್‌ನ ಸದಸ್ಯ ಕಾರ್ಯದರ್ಶಿಗಳಾದ ರಾಘವೇಂದ್ರ ಉಪಾಧ್ಯೆ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಉಪಸ್ಥಿತರಿದ್ದು, ಪ್ರಕರಣದ ರಾಜಿ ಇತ್ಯರ್ಥ ಪ್ರಕ್ರಿಯೆಯನ್ನು ಸಮನ್ವಯಗೊಳಿಸಿದರು. ಈ ವಿಶೇಷ ಲೋಕ ಅದಾಲತ್ ಕಾರ್ಯಕ್ರಮವು ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಬಿ.ರಹಮಾನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು.

ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಿರುವುದು ಬೀದರ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪಾಲಿಗೆ ಮಹತ್ವದ ಸಾಧನೆಯಾಗಿದೆ. ಹಲವು ವರ್ಷಗಳಿಂದ ಬಾಕಿ ಇದ್ದ ಪ್ರಕರಣವೊಂದನ್ನು ಪಕ್ಷಕಾರರ ಪರಸ್ಪರ ಸಮ್ಮತಿಯ ಮೂಲಕ ರಾಜಿ ಸಂಧಾನದಿಂದ ಇತ್ಯರ್ಥಪಡಿಸಿರುವುದು, ಉಭಯ ಪಕ್ಷಕಾರರು ಪರಸ್ಪರ ಸೌಹಾರ್ದಯುತವಾಗಿ ನಡೆದುಕೊಂಡು, ಪ್ರಕರಣದ ಶೀಘ್ರ ಇತ್ಯರ್ಥಕ್ಕೆ ಸಂಪೂರ್ಣ ಸಹಕಾರ ನೀಡಿದ್ದು, ಹಾಗೂ ರಾಜಿ ಇತ್ಯರ್ಥದಿಂದ ಸಂತೃಪ್ತಿ ಮತ್ತು ಸಂತೋಷ ವ್ಯಕ್ತಪಡಿಸಿರುವುದು ವಿಶೇಷ ಲೋಕ ಅದಾಲತ್‌ನ ಉದ್ದೇಶವನ್ನು ಮತ್ತಷ್ಟು ಸಾರ್ಥಕಗೊಳಿಸಿದಂತಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿಕ್ಷಣವೇ ಎಲ್ಲ ಸಮಸ್ಯೆಗಳ ಪರಮೋಚ್ಛ ಪರಿಹಾರ
ಆಗಸ್ಟ್ 24 ರಂದು ಫ್ರೀಡಂ ಪಾರ್ಕಿನಲ್ಲಿ ಗ್ರಾಮ ಸಹಾಯಕರ ಮುಷ್ಕರ