ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ತೀರ್ಮಾನ

KannadaprabhaNewsNetwork |  
Published : Jan 05, 2024, 01:45 AM IST
4ಸಿಎಚ್‌ಎನ್51ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಚಾಮರಾಜನಗರಜಿಲ್ಲಾಡಳಿತ ಹಾಗೂ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರದೊಂದಿಗೆ ಇದೇ ಜ. 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಗಣರಾಜ್ಯೋತ್ಸವವನ್ನು ಎಲ್ಲ ಅಗತ್ಯ ಸಿದ್ಧತೆಗಳೊಂದಿಗೆ ಅರ್ಥಪೂರ್ಣವಾಗಿ ಕೈಗೊಳ್ಳಲು ತೀರ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರಜಿಲ್ಲಾಡಳಿತ ಹಾಗೂ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರದೊಂದಿಗೆ ಇದೇ ಜ. 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಗಣರಾಜ್ಯೋತ್ಸವವನ್ನು ಎಲ್ಲ ಅಗತ್ಯ ಸಿದ್ಧತೆಗಳೊಂದಿಗೆ ಅರ್ಥಪೂರ್ಣವಾಗಿ ಕೈಗೊಳ್ಳಲು ತೀರ್ಮಾನಿಸಲಾಯಿತು. ಆರಂಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು ಎಲ್ಲಾ ಗ್ರಾಪಂ ಕಚೇರಿ, ಕೇಂದ್ರ ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಗಣರಾಜ್ಯೋತ್ಸವ ಆಚರಣೆಯಾಗಬೇಕು. ಶಿಸ್ತು ಬದ್ಧವಾಗಿ ಆಯೋಜನೆ ಮಾಡಬೇಕು. ಯಾವುದೇ ನಿರ್ಲಕ್ಷ್ಯ ವಹಿಸಬಾರದು. ಅಧಿಕಾರಿಗಳು ಸಿಬ್ಬಂದಿ ಕೂಡ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು. ಗಣರಾಜ್ಯೋತ್ಸವ ದಿನದಂದು ಖಾಸಗಿ ಉದ್ಯಮ ಸಂಸ್ಥೆ ಕೈಗಾರಿಕಾ ಘಟಕಗಳಿಗೂ ರಜೆ ಘೋಷಿಸಲು ಕಾರ್ಮಿಕ ಇಲಾಖೆಗೆ ಸೂಚಿಸಬೇಕು. ಮಹಿಳಾ ಸಂಘಗಳು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಾಗಬೇಕು. ಸರ್ಕಾರಿ ಶಾಲಾ ಕಾಲೇಜುಗಳಿಗೆ ಕಾರ್ಯಕ್ರಮ ಪ್ರಸ್ತುತ ಪಡಿಸಲು ಹೆಚ್ಚಿನ ಅವಕಾಶ ಕಲ್ಪಿಸಬೇಕು. ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಬೇಕು. ಶಿಷ್ಟಾಚಾರ ಅನುಸಾರ ಕಾರ್ಯಕ್ರಮ ಆಯೋಜಿಸಲು ಸುತ್ತೋಲೆ ಹೊರಡಿಸುವುದು ಸೇರಿದಂತೆ ಇನ್ನಿತರ ಕಾರ್ಯಕ್ರಮ ಕುರಿತು ಮುಖಂಡರು ಸಲಹೆ ಅಭಿಪ್ರಾಯಗಳನ್ನು ನೀಡಿದರು. ಕೋಟ್‌

ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧೆ ಹಾಗೂ ಪೂರ್ವ ಸಿದ್ಧತೆಗಳೊಂದಿಗೆ ಏರ್ಪಡಿಸಲು ಸೂಚನೆ ನೀಡಲಾಗುತ್ತದೆ. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಶಿಷ್ಟಚಾರ ಪಾಲಿಸುವ ಸಂಬಂಧ ನಿರ್ದೇಶನ ನೀಡಲಾಗುವುದು. ಎಲ್ಲ ಗ್ರಾಪಂ ಕಚೇರಿಗಳು, ಬ್ಯಾಂಕುಗಳು, ಶಿಕ್ಷಣ ಸಂಸ್ಥೆಗಳು, ಇತರೆ ಕಚೇರಿಗಳಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲು ಸೂಚಿಸಿ ವರದಿ ಪಡೆಯಲಾಗುವುದು ಎಂದರು. ಶಿಲ್ಪಾನಾಗ್ ಜಿಲ್ಲಾಧಿಕಾರಿ

ಗಣರಾಜ್ಯೋತ್ಸವದ ಜಿಲ್ಲಾ ಮಟ್ಟದ ಕಾರ್ಯಕ್ರಮ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗುತ್ತದೆ. ಸರ್ಕಾರಿ ಶಾಲಾ ಕಾಲೇಜು ಮಕ್ಕಳು ವೈವಿಧ್ಯಮಯ ಕಾರ್ಯಕ್ರಮ ನೀಡಲು ಅನುವು ಮಾಡಿಕೊಡಲಾಗುವುದು. ಜಿಲ್ಲೆಯಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು. ಕಟ್ಟುನಿಟ್ಟಾಗಿ ಅಧಿಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರ್ದೇಶನ ನೀಡಲಾಗುತ್ತದೆ. ಮಹಿಳಾ ಸಂಘಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಲಾಗುವುದು ಎಂದು ಹೇಳಿದರು. ಅಚ್ಚುಕಟ್ಟಾಗಿ ಗಣರಾಜ್ಯೋತ್ಸವ ಆಚರಣೆಗೆ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ಸರ್ವರ ಸಹಕಾರದಿಂದ ಯಶಸ್ವಿಯಾಗಿ ಗಣರಾಜ್ಯೋತ್ಸವವನ್ನು ಏರ್ಪಡಿಸಲಾಗುವುದು ಎಂದು ಅವರು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇಅರಸ್, ಕನ್ನಡ ಮತ್ತು ಸಂಸ್ಕೃತಿ ಇಲಖೆಯ ಸಹಾಯಕ ನಿರ್ದೆಶಕರಾದ ಗುರುಲಿಂಗಯ್ಯ, ಸಂಘಟನೆಗಳ ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಸಿ.ಎಂ. ಕೃಷ್ಣಮೂರ್ತಿ, ಸುರೇಶ್ ನಾಯಕ, ಕೆ.ಎಂ. ನಾಗರಾಜು, ಸಿ.ಎಂ. ನರಸಿಂಹಮೂರ್ತಿ, ನಿಜಧ್ವನಿ ಗೋವಿಂದರಾಜು, ಗು. ಪುರುಷೋತ್ತಮ್, ಚಾ.ಗು. ನಾಗರಾಜು, ಶಿವಣ್ಣ, ಎಲ್. ಸುರೇಶ್, ಕಂದಳ್ಳಿ ನಾರಾಯಣ, ಮಹೇಶ್ ಗೌಡ, ಶಿವಣ್ಣ (ಮಾಸ್ಟರ್), ಕದಂಬ ಅಂಬರೀಶ್, ಇನ್ನಿತರ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌