ಬೆಲೆ ಏರಿಕೆ ಖಂಡಿಸಿ: ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Nov 27, 2026, 02:15 AM IST
ರಾಣಿಬೆನ್ನೂರು ನಗರದ ಪೋಸ್ಟ್ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕಗಳ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಣಿಬೆನ್ನೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ನಗರ ಹಾಗೂ ಗ್ರಾಮೀಣ ಘಟಕಗಳ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಡಾ. ಬಸವರಾಜ ಕೇಲಗಾರ ಮಾತನಾಡಿ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಕೆಎಂಎಫ್ ಹಾಲಿನ ದರ, ಬಸ್ ಪ್ರಯಾಣ ದರ, ನೀರು ಹಾಗೂ ಕಸ ಸಂಗ್ರಹಣೆ ಶುಲ್ಕವನ್ನು ಹೆಚ್ಚಿಸುವ ಮೂಲಕ ಬಡವರ ಬದುಕನ್ನು ದುಸ್ತರಗೊಳಿಸಿದೆ. ಬಡವರ, ದೀನದಲಿತರ ಉದ್ಧಾರಕ್ಕಾಗಿ ಶ್ರಮಿಸುವ ಬದಲು ಕಾಂಗ್ರೇಸ್ ಮರೆತು ಕುಳಿತಿಕೊಂಡಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗದ ಕುಟುಂಬಗಳ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬೆಲೆ ಏರಿಕೆಯನ್ನು ನಿಯಂತ್ರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದರು.

ನಗರ ಘಟಕದ ಅಧ್ಯಕ್ಷ ಮಂಜುನಾಥ ಕಾಟಿ, ಗ್ರಾಮೀಣ ಘಟಕದ ಅಧ್ಯಕ್ಷ ಸುಭಾಷ ಶಿರಗೇರಿ, ಜಿಲ್ಲಾ ಕಾರ್ಯದರ್ಶಿ ಸಿದ್ದು ಚಿಕ್ಕಬಿದರಿ, ಕೆ.ಶಿವಲಿಂಗಪ್ಪ, ಮಂಜುನಾಥ ಓಲೇಕಾರ, ಸಂತೋಷ ತೆವರಿ, ಎ.ಬಿ.ಪಾಟೀಲ, ಅಮೋಘ ಬಾದಾಮಿ, ಗದಿಗೆಪ್ಪ ಹೊಟ್ಟಿಗೌಡ್ರ, ಪ್ರಕಾಶ ಪೂಜಾರ, ಮಲ್ಲಿಕಾರ್ಜುನ ಮಸಿಯಪ್ಪನವರ, ಗೀತಾ ಜಂಬಗಿ, ಗಂಗಮ್ಮ ಹಾವನೂರ, ಮಂಜುಳಾ ಹತ್ತಿ, ಚೆನ್ನಮ್ಮ ಜಿ., ವೀಣಾ ಬಿದರಿ, ಅಜಯ್ ಮಠದ, ಮೌನೇಶ ತಳವಾರ, ನಿಂಗಪ್ಪ ಹೊಳಲ, ಅನಂತ ಇಟಗಿ, ಮಾಳಪ್ಪ ಪೂಜಾರ, ಅಶೋಕ ಪಾಸಿಗಾರ, ಮೈಲಪ್ಪ ಗೋಣಿಬಸಮ್ಮನವರ,ಅನಿಲ ಅಡ್ಡಿ, ಅನಿಲ ಸಿದ್ದಾಳಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಗುರಿ
ರೈತರಿಗೆ ಪ್ರತಿ ಟನ್‌ಗೆ ₹3,825 ರಂತೆ ಬಿಲ್ ಪಾವತಿ