ಸಮಾಜದ ಯುವ ನಾಯಕನ ವ್ಯಕ್ತಿತ್ವಕ್ಕೆ ಧಕ್ಕೆ: ಎನ್.ರುದ್ರಮುನಿ । ತೀವ್ರ ಹೋರಾಟದ ಎಚ್ಚರಿಕೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ರಾಜಕೀಯ ಏಳಿಗೆ ಸಹಿಸಲಾಗದೆ, ಕೆಲವೊಂದು ಶಕ್ತಿಗಳು ಇಲ್ಲಸಲ್ಲದ ಆರೋಪ ಎಸಗುತ್ತ, ತೇಜೋವಧೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾ ಘಟಕ ಹೇಳಿದೆ.ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ರಾಜಕೀಯ ಏಳಿಗೆ ಸಹಿಸಲಾಗದೆ, ಕೆಲವೊಂದು ಶಕ್ತಿಗಳು ಇಲ್ಲಸಲ್ಲದ ಆರೋಪ ಎಸಗುತ್ತ, ತೇಜೋವಧೆ ಮಾಡುತ್ತಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಜಿಲ್ಲಾ ಛಲವಾದಿ ಮಹಾಸಭಾ ಜಿಲ್ಲಾ ಘಟಕ ದಾವಣಗೆರೆಯಲ್ಲಿ ಹೇಳಿದೆ.
ಪ್ರಿಯಾಂಕ್ ಖರ್ಗೆ ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಹಲವಾರು ರಾಜಕೀಯ ಮುಖಂಡರು ಪ್ರಿಯಾಂಕ್ ಖರ್ಗೆ ರಾಜಕೀಯ ಏಳಿಗೆ ಸಹಿಸಲಾಗದೇ, ಅನವಶ್ಯಕವಾಗಿ ಆಧಾರರಹಿತ ಹಾಗೂ ಅವಹೇಳನಕಾರಿಯಾಗಿ ತೇಜೋವಧೆ ಮಾಡುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.
ಇದೇ ರೀತಿ ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಮಾಡುವುದು, ಟೀಕಿಸುವುದು, ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡುವುದನ್ನು ಮುಂದುವರಿಸಿದರೆ ಅಂತಹವರ ವಿರುದ್ಧ ಛಲವಾದಿ ಸಮಾಜವು ರಾಜ್ಯವ್ಯಾಪಿ ಪ್ರತಿಭಟನೆ ನಡೆಸುವ ಮೂಲಕ ತಕ್ಕ ಪಾಠ ಕಲಿಸಲಿದೆ. ಇನ್ನಾದರೂ ಪ್ರಿಯಾಂಕ್ ಖರ್ಗೆ ಬಗ್ಗೆ ಮಾತನಾಡುವ ಮುನ್ನ ವಿಪಕ್ಷಗಳ ನಾಯಕರಾದವರು ಆಲೋಚಿಸಿ ಮಾತನಾಡಲಿ ಎಂದು ಎನ್.ರುದ್ರಮುನಿ ಕಿವಿಮಾತು ಹೇಳಿದರು.