ಮಾಗಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ರಾಜ್ಯಸಭೆಯಲ್ಲಿ ಮಾಡಿದ ಭಾಷಣದ ವೇಳೆ ವಿವಾದಾತ್ಮಕ ಹೇಳಿಕೆ ವಿರುದ್ಧ ದಲಿತ ಮುಖಂಡರು ತೀವ್ರವಾಗಿ ಖಂಡಿಸಿದರು.
ಮಾಗಡಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ರಾಜ್ಯಸಭೆಯಲ್ಲಿ ಮಾಡಿದ ಭಾಷಣದ ವೇಳೆ ವಿವಾದಾತ್ಮಕ ಹೇಳಿಕೆ ವಿರುದ್ಧ ದಲಿತ ಮುಖಂಡರು ತೀವ್ರವಾಗಿ ಖಂಡಿಸಿದರು.
ತಾಪಂ ಮಾಜಿ ಸದಸ್ಯ ಸಿ.ಜಯರಾಂ ಮಾತನಾಡಿ, ಕೇಂದ್ರ ಗೃಹ ಸಚಿವರ ಹೇಳಿಕೆಯಲ್ಲಿ ಅಂಬೇಡ್ಕರ್ ವಿರೋಧಿ ಮನೋಭಾವ ಎದ್ದು ಕಾಣುತ್ತದೆ. ಇಂತಹ ಸೂಕ್ಷ್ಮ ಹೇಳಿಕೆ ಇಡೀ ದೇಶದ ಶೋಷಿತ ಸಮುದಾಯಗಳ ಸಂಕಷ್ಟ ಮತ್ತು ಅವಮಾನವನ್ನು ಪುನಃ ಒತ್ತಿ ಹೇಳುತ್ತದೆ. ಭಾರತದ ಇತಿಹಾಸದಲ್ಲಿ ಅಸ್ಪೃಶ್ಯರು, ಮಹಿಳೆಯರು ಮತ್ತು ಶೋಷಿತ ವರ್ಗಗಳಿಗೆ ಮಾನವೀಯ ಬದುಕು ನೀಡಿದ ಶಕ್ತಿ ಬಾಬಾ ಸಾಹೇಬರು ಕೊಟ್ಟ ಸಂವಿಧಾನ ಮತ್ತು ಅವರ ಮಾರ್ಗದರ್ಶಕ ತತ್ವಗಳಿಂದ ಬಂದಿದೆ. ಅಸ್ಪೃಶ್ಯತೆ, ಅಸಮಾನತೆ ಮತ್ತು ಶೋಷಣೆ ವಿರುದ್ಧ ಬಾಬಾಸಾಹೇಬರು ತಮ್ಮ ತ್ಯಾಗ, ಅಧ್ಯಯನದಿಂದ ಸಮಾಜವನ್ನು ಮೇಲೆತ್ತಿದ ಸತ್ಯವನ್ನು ಯಾರೂ ಮರೆಯುವಂತಿಲ್ಲ ಎಂದು ಹೇಳಿದರು.
ಬುದ್ದ, ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆದರ್ಶಗಳು, ಶೋಷಿತ ವರ್ಗಗಳಿಗೆ ಹೊಸ ಬದುಕು ನೀಡಿದ ಮಾರ್ಗದರ್ಶನ. ಬಾಬಾಸಾಹೇಬರು ಶಿಕ್ಷಣ, ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆ ಮಾತ್ರವೇ ಸಮಾಜದಲ್ಲಿ ಬದಲಾವಣೆ ತರಬಲ್ಲ ಯೋಗ್ಯ ಮಾರ್ಗ. ಅಮಿತ್ ಶಾ ಅವರಂತಹ ವ್ಯಕ್ತಿಗಳು ಇಂತಹ ಹೀನ ಹೇಳಿಕೆಗಳಿಂದ ದೇಶದ ಜನತೆ ಮುಂದೆ ಕ್ಷಮೆಯಾಚಿಸಬೇಕು ಮತ್ತು ತಮ್ಮ ಸ್ಥಾನಕ್ಕೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ದಲಿತ ಮುಖಂಡ ದೊಡ್ಡಯ್ಯ ಮಾತನಾಡಿ, ಅಂಬೇಡ್ಕರ್ ಹಾಕಿಕೊಟ್ಟ ಸಂವಿಧಾನದ ಅಡಿಯಲ್ಲಿ ಗೃಹ ಸಚಿವರಾಗಿ ಅಧಿಕಾರ ನಡೆಸುತ್ತಿದ್ದಾರೆ. ಈಗ ಅವರ ವಿರುದ್ಧವೇ ಮಾತನಾಡಿರುವುದು ಸರಿಯಲ್ಲ. ಕೂಡಲೇ ಅಮಿತ್ ಶಾ ಕ್ಷಮೆ ಕೇಳಬೇಕು. ಇಲ್ಲವಾದರೆ ಕೇಂದ್ರ ಗೃಹ ಸಚಿವರ ವಿರುದ್ಧ ತಾಲೂಕಿನಲ್ಲಿ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಾಂಗ್ರೆಸ್ ಮಹಿಳಾ ಸದಸ್ಯೆ ವನಜ, ದೊಡ್ಡಿ ಲಕ್ಷ್ಮಣ್ ಇತರರು ಭಾಗವಹಿಸಿದ್ದರು.
19ಮಾಗಡಿ1 :
ಮಾಗಡಿಯ ಅಂಬೇಡ್ಕರ್ ಭವನದಲ್ಲಿ ದಲಿತ ಮುಖಂಡರು ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.