ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆಗೆ ಖಂಡನೆ

KannadaprabhaNewsNetwork |  
Published : Dec 23, 2025, 01:30 AM IST
ಪೊಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ ಹಾಗೂ ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ  ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. | Kannada Prabha

ಸಾರಾಂಶ

ಪೊಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ ಹಾಗೂ ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಶಿವಮೊಗ್ಗ: ಪೊಲೀಸ್ ಅಧಿಕಾರಿಯಿಂದ ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ ಹಾಗೂ ಇಸ್ಪೀಟ್ ಅಡ್ಡೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಹೊರ ಊರುಗಳಿಂದ ಬಂದು, ತುತ್ತು ಅನ್ನಕ್ಕಾಗಿ ಹೋಟೆಲ್‌ಗಳಲ್ಲಿ ಕ್ಲೀನರ್‌ಗಳಾಗಿ ಕೆಲಸ ಮಾಡುವ ಕಾರ್ಮಿಕನ ಮೇಲೆ ಮೊನ್ನೆ ರಾತ್ರಿ ಏಕಾಏಕಿ ಹಲ್ಲೆ ಮಾಡಿದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯ ವರ್ತನೆ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಸಮಯ ಮೀರಿ ಹೋಟೆಲ್ ವ್ಯಾಪಾರವನ್ನು ನಡೆಸುತ್ತಿರುವ ಹೋಟೆಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೆ, ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ಹಲ್ಲೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.ನಗರದಲ್ಲಿ ಯುವಕರು ಗಾಂಜಾ ವ್ಯಸನಿಗಳಾಗಿ ಸಾರ್ವಜನಿಕ ವಲಯದಲ್ಲಿ ಕಿರಿಕಿರಿ ಉಂಟು ಮಾಡುತ್ತಾ ಭಯದ ವಾತಾವರಣ ಸೃಷ್ಟಿಸಿದ್ದು, ಜೊತೆಗೆ ಶಿವಮೊಗ್ಗ ನಗರ ಸೇರಿದಂತೆ ಹೊರವಲಯ, ಗ್ರಾಮೀಣ ಪ್ರದೇಶದ ಗಡಿ ಭಾಗದಲ್ಲಿ ಅಕ್ರಮವಾಗಿ ಎಗ್ಗಿಲ್ಲದೆ ಯಾವುದೇ ಕಾನೂನಿನ ಭಯವಿಲ್ಲದೆ ಕಾನೂನುಬಾಹಿರ ಇಸ್ಪೀಟ್ ಆಟಗಳ ಚಟುವಟಿಕೆ ಸರಾಗವಾಗಿ ನಡೆಯುತ್ತಿದ್ದು, ಇದನ್ನು ನಿಯಂತ್ರಿಸಬೇಕಾದ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಗಳೇ ಇಸ್ಪೀಟ್ ಅಡ್ಡೆಗಳಿಗೆ ರಕ್ಷಣೆ ನೀಡುತ್ತಿದ್ದಾರೆ ಎದು ದೂರಿದರು.ಇಸ್ಪೀಟು ಅಡ್ಡೆಗಳಿಂದ ಹಲವು ಕುಟುಂಬಗಳು ಮನೆ-ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದು, ತಂದೆ-ತಾಯಿ, ಹೆಂಡತಿ-ಮಕ್ಕಳು ಕಣ್ಣೀರಿಡುತ್ತಾ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಶಾಪ ಹಾಕುತ್ತಿದ್ದು, ಕೆಲವು ಯುವಕರು ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡು ನಷ್ಟ ಅನುಭವಿಸಿ, ನಂತರ ಅಪರಾಧ ಕೃತ್ಯಗಳಲ್ಲಿ ಭಾಗವಹಿಸುತ್ತಿರುವುದು ಅತ್ಯಂತ ಕಳವಳದ ಸಂಗತಿ. ಇಂತಹ ಹಲವು ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದ ಪೊಲೀಸ್ ಇಲಾಖೆಯ ಕೆಲವೇ ಅಧಿಕಾರಿಗಳು, ತುತ್ತು ಅನ್ನಕ್ಕಾಗಿ ಕೆಲಸ ಮಾಡುವ ಹೋಟೆಲ್ ಕಾರ್ಮಿಕರ ಮೇಲೆ ಹಲ್ಲೆ ನಡೆಸುವುದು ಎಷ್ಟರಮಟ್ಟಿಗೆ ಸರಿ. ಕೂಡಲೇ ಜಿಲ್ಲಾ ರಕ್ಷಣಾಧಿಕಾರಿಗಳು ಹೋಟೆಲ್ ಕಾರ್ಮಿಕನ ಮೇಲೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಇಸ್ಪೀಟು ಅಡ್ಡೆಗಳ ಮೇಲೆ ದಾಳಿ ನಡೆಸಿ ಸಂಪೂರ್ಣ ಬಂದ್ ಮಾಡಿಸಬೇಕು. ಇನ್ನು ಹತ್ತು ದಿನಗಳಲ್ಲಿ ಕ್ರಮ ತೆಗೆದುಕೊಳ್ಳದೇ ಹೋದಲ್ಲಿ, ಶಿವಮೊಗ್ಗ ಯುವ ಕಾಂಗ್ರೆಸ್‌ನಿಂದ ಸ್ಥಳೀಯ ನಾಗರಿಕರೊಂದಿಗೆ ನಾವುಗಳೇ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಮುಂದಾಗುವ ಎಲ್ಲಾ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆ ಎಂದು ಎಚ್ಚರಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ರಂಗನಾಥ್, ಜಿಲ್ಲಾ ಯುವ ಕಾಂಗ್ರೆಸ್ ನ ಎಚ್.ಪಿ.ಗಿರೀಶ್, ಹಾಪ್‌ಕಾಮ್ಸ್ ನಿರ್ದೇಶಕ ಎಸ್.ಎಮ್.ಶರತ್ ಮರಿಯಪ್ಪ, ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಎಸ್ ಕುಮಾರೇಶ್, ಎಸ್.ಬಸವರಾಜ್, ಯುವ ಕಾಂಗ್ರೆಸ್ ನ ಪದಾಧಿಕಾರಿಗಳಾದ ಪುಷ್ಪಕ್ ಕುಮಾರ್, ಎಂ.ರಾಕೇಶ್, ಮೋಹನ್ ಸೋಮಿನಕೊಪ್ಪ, ರಾಹುಲ್ ಸಿಗೆಹಟ್ಟಿ, ಸಚಿನ್, ರಾಜೇಶ್ ಮಂದಾರ, ಅಧ್ಯಾನ್ ಪಾಷಾ, ಮಿಥುನ್, ಸಂಜಯ್, ಪ್ರಜ್ವಲ್, ಕಿರಣ್ ರಂಗೇಗೌಡ, ವೆಂಕಟೇಶ್ ಕಲ್ಲೂರು, ನಿತಿನ್ ಇತರರು ಇದ್ದರು ಹೊಟೆಲ್ ಕಾರ್ಮಿಕನಿಗೆ ಪಿಎಸ್‌ಐ

ಥಳಿತ, ವಿಡಿಯೋ ವೈರಲ್ಶಿವಮೊಗ್ಗ: ಹೋಟೆಲ್ ಯಾಕೆ ಬಂದ್ ಮಾಡಿಲ್ಲ ಎಂದು ಪ್ರಶ್ನಿಸಿ ಕಾರ್ಮಿಕನೊಬ್ಬನಿಗೆ ಪಿಎಸ್‌ಐಯೊಬ್ಬರು ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ಷಾವಾಸ್ ಎಂಬ ಕಾರ್ಮಿಕನ ಮೇಲೆ ದೊಡ್ಡಪೇಟೆಯ ಪಿಎಸ್‌ಐ ನಾರಾಯಣ ಮಧುಗಿರಿ ಮನಬಂದಂತೆ ಥಳಿಸಿರುವ ವಿಡಿಯೋ ವೈರಲ್ ಆಗಿದೆ. ಪಿಎಸ್‌ಐ ಹಲ್ಲೆ ಮಾಡುವ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹಲ್ಲೆಗೊಳಗಾಗಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌