ಸಾರಿಗೆ ಬಸ್ ಸಿಬ್ಬಂದಿ ಮೇಲಿನ ಹಲ್ಲೆಗೆ ಖಂಡನೆ

KannadaprabhaNewsNetwork |  
Published : Feb 25, 2025, 12:46 AM IST
ತುಮಕೂರಿನ ಡಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜಯಕರ್ನಾಟಕ ಸಂಘಟನೆ ಮುಖಂಡರು | Kannada Prabha

ಸಾರಾಂಶ

ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿಯ ಚಾಲಕ, ನಿರ್ವಾಹರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯಕರ್ನಾಟಕ ಜಿಲ್ಲಾ ಘಟಕದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರುಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿಯ ಚಾಲಕ, ನಿರ್ವಾಹರ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯಕರ್ನಾಟಕ ಜಿಲ್ಲಾ ಘಟಕದ ಮುಖಂಡರು ಸರ್ಕಾರವನ್ನು ಒತ್ತಾಯಿಸಿದರು.ಸೋಮವಾರ ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಮುಖಂಡರು, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿ.ಪಿ.ಸುಧೀರ್ ಮಾತನಾಡಿ, ರಾಜ್ಯದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುವ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರ ಎಚ್ಚೆತ್ತುಕೊಂಡು ಅಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ತೆಗೆದುಕೊಳ್ಳಬೇಕು. ಹಲ್ಲೆಕೋರರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.ಈ ತಿಂಗಳ 21 ರಂದು ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರು ಟಿಕೆಟ್ ವಿತರಿಸುವ ವೇಳೆ ಮರಾಠಿ ಭಾಷೆ ಮಾತನಾಡಲು ಒತ್ತಾಯಿಸಿ ಬಸ್ಸಿನ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ.ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬೇಕು, ಸರ್ಕಾರ ಕನ್ನಡಿಗರಿಗೆ ರಕ್ಷಣೆ ನೀಡಬೇಕು ಎಂದರು.ಸಂಘಟನೆಯ ಜಿಲ್ಲಾಧ್ಯಕ್ಷ ವಿ.ಅನಿಲ್ ನಾಯಕ್ ಮಾತನಾಡಿ, ನಮ್ಮ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು, ಕನ್ನಡ ವಿರೋಧಿಗಳಿಗೆ ಎಚ್ಚರಿಕೆಯ ಪಾಠ ಕಲಿಸಬೇಕು.ಘಟನೆಗಳು ಹೀಗೆ ಮುಂದುವರೆಯುತ್ತಿದ್ದರೆ ಜಯಕರ್ನಾಟಕ ಸಂಘಟನೆಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಸಂಘಟನೆಯ ಗೌರವಾಧ್ಯಕ್ಷ ಡಾ.ಸ್ಯಾಮ್ಸನ್ ವಿಕ್ಟರ್, ಜಿಲ್ಲಾ ಉಪಾಧ್ಯಕ್ಷ ಸುಧಾಕರ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ದಲಿತ ಸ್ವಾಭಿಮಾನಿ ಸಂಘಟನೆಯ ಅಧ್ಯಕ್ಷ ಬಂಡೆಕುಮಾರ್, ಮುಖಂಡರಾದದೇವರಾಜು, ಹಿತೇಶ್, ನಾಗಭೂಷಣ್, ದೀಪು, ಅರುಣ್, ಕಾರ್ತಿಕ್ ಮೊದಲಾದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ