ಅರ್ಹರ ಬಿಪಿಎಲ್‌ ಕಾರ್ಡ್‌ ರದ್ದತಿಗೆ ಖಂಡನೆ

KannadaprabhaNewsNetwork |  
Published : Oct 29, 2025, 01:30 AM IST
 | Kannada Prabha

ಸಾರಾಂಶ

ವಿನಾಕಾರಣ ಅರ್ಹ ಫಲಾನುಭವಿಗಳ ಸಾವಿರಾರು ಕಾರ್ಡ್‌ಗಳನ್ನು ರದ್ದುಗೊಳಿಸಿರುವ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರನ್ನು ಕೊಡಲೇ ಅಮಾನತು ಮಾಡಬೇಕು.

ಗದಗ: ಅರ್ಹ ಫಲಾನುಭವಿಗಳ ಕಾರ್ಡಗಳನ್ನು ರದ್ದುಗೊಳಿಸಿರುವ ಆಹಾರ ಇಲಾಖೆ ಅಧಿಕಾರಿಗಳನ್ನ ಅಮಾನತುಗೊಳಿಸುವಂತೆ ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ, ಜಿಲ್ಲಾ ಸ್ಲಂ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಗದಗ- ಬೆಟಗೇರಿ ಅವಳಿ ನಗರದ ಬಡವರ, ಕೊಲಿ ಕಾರ್ಮಿಕರ ಹಾಗೂ ಸ್ಲಂ ಜನರ ಅರ್ಹ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರದ ಸೂಚನೆಯನ್ನು ಸರಿಯಾಗಿ ಗಮನಿಸದೇ ಆಹಾರ ಇಲಾಖೆ ಅಧಿಕಾರಿಗಳು ರದ್ದುಗೊಳಿಸಿ ಜನವಿರೋಧಿ ಕ್ರಮ ಅನುಸರಿಸಿರುವುದು ಖಂಡನೀಯ.

ವಿನಾಕಾರಣ ಅರ್ಹ ಫಲಾನುಭವಿಗಳ ಸಾವಿರಾರು ಕಾರ್ಡ್‌ಗಳನ್ನು ರದ್ದುಗೊಳಿಸಿರುವ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರನ್ನು ಕೊಡಲೇ ಅಮಾನತು ಮಾಡಬೇಕು. ರದ್ದುಗೊಂಡಿರುವ ಕಾರ್ಡ್‌ಗಳನ್ನು ಮರು ಪರಿಶೀಲನೆ ನಡೆಸುವವರೆಗೊ ಅನ್ಯಾಯಕ್ಕೆ ಒಳಗಾಗಿರುವ ಬಡ ಕುಟುಂಬಗಳಿಗೆ ತಕ್ಷಣ ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು.

ಒಂದು ವೇಳೆ ಆಹಾರ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡದೇ ಇದ್ದಲ್ಲಿ ಮತ್ತು ರದ್ದುಗೊಂಡಿರುವ ಕಾರ್ಡ್‌ಗಳಿಗೆ ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳದೇ ಇದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ವೇಳೆ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್. ಮಾನ್ವಿ, ಕಾರ್ಯದರ್ಶಿ ಅಶೋಕ ಕುಸಬಿ, ಪರವೀನಬಾನು ಹವಾಲ್ದಾರ, ಮೌಲಾಸಾಬ ಗಚ್ಚಿ, ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಸಲೀಂ ಹರಿಹರ, ಶೇಖಪ್ಪ ರೋಣ, ಖಾಜಾಸಾಬ ಇಸ್ಮಾಯಿಲನವರ, ಗೌಸ್‌ಸಾಬ ಅಕ್ಕಿ, ಮೆಹಬೂಬ ಮುಲ್ಲಾ, ಬಸವರಾಜ ಕಳಸದ, ರಿಜ್ವಾನ ಮುಲ್ಲಾ, ಮಕ್ತುಮಸಾಬ ಮುಲ್ಲಾನವರ ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು