ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಭಾಷಣ, ಕೊಲೆ ಬೆದರಿಕೆಗೆ ಖಂಡನೆ

KannadaprabhaNewsNetwork |  
Published : Sep 20, 2026, 02:45 AM IST
19ಕೆಎಂಎನ್ ಡಿ22 | Kannada Prabha

ಸಾರಾಂಶ

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ಜೊತೆಗೆ ಕೊಲೆ ಬೆದರಿಕೆ ಹಾಕಿರುವ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಇಮ್ರಾನ್ ಪಾಷಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ವಾಭಿಮಾನಿ ಒಕ್ಕಲಿಗರ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರಿಂದ ಪೊಲೀಸ್ ಠಾಣೆಗೆ ದೂರು.

ಕನ್ನಡಪ್ರಭ ವಾರ್ತೆ ಮದ್ದೂರು

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ಜೊತೆಗೆ ಕೊಲೆ ಬೆದರಿಕೆ ಹಾಕಿರುವ ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಇಮ್ರಾನ್ ಪಾಷಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ವಾಭಿಮಾನಿ ಒಕ್ಕಲಿಗರ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಟ್ಟಣದ ಪೊಲೀಸ್ ಠಾಣೆಗೆ ಶನಿವಾರ ದೂರು ನೀಡಿದ್ದಾರೆ.

ಒಕ್ಕೂಟದ ಸದಸ್ಯ ಕೆ.ಎಸ್.ಮಲ್ಲಿಕಾರ್ಜುನ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ಇಮ್ರಾನ್ ಪಾಷಾ ವಿರುದ್ಧ ದ್ವೇಷ ಭಾಷಣ ಕಾನೂನಿನ ಅಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

ಸಚಿವ ಜಮೀರ್ ಆಪ್ತ ಇಮ್ರಾನ್ ಪಾಷಾ ಬೆಂಗಳೂರಿನ ಪಾದರಾಯನಪುರದಲ್ಲಿ ಟಿಪ್ಪು ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಅವಹೇಳನಕಾರಿ, ಕೀಳು ಮಟ್ಟದ ಭಾಷೆ ಬಳಸಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ದೂರಿದರು.

ಇತನ ಮೇಲೆ ಈ ಹಿಂದೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣ ವಿಧಾನಸೌಧದ ಕಾರಿಡಾರ್ ನಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಮೇಲೆ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಈ ಮತಾಂಧನ ವಿರುದ್ಧ ದ್ವೇಷ ಭಾಷಣ ಕಾನೂನು ಅಡಿ ಪೊಲೀಸರು ಎಫ್ಐಆರ್‌ ದಾಖಲಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇತನ ವಿರುದ್ಧ ಚಳವಳಿ ನಡೆಸಲಾಗುವುದು ಎಂದು ಮುಖಂಡರು ಎಚ್ಚರಿಸಿದ್ದಾರೆ.

ಈ ವೇಳೆ ಹಿಂದೂ ಪರ ಸಂಘಟನೆಯ ವಕೀಲ ಯೋಗಾನಂದ, ಎಂ.ಎಸ್. ಜಗನ್ನಾಥ, ಜಿ.ಸಿ.ಮಹೇಂದ್ರ, ಗುರು ಮಲ್ಲೇಶ್, ಸಿ.ಎಂ.ರಘು, ಗೆಜ್ಜಲಗೆರೆ ನಿಂಗರಾಜು, ವೀರಭದ್ರ ಸ್ವಾಮಿ, ಹೊಸಹಳ್ಳಿ ಮಹದೇವಸ್ವಾಮಿ, ಬಸವರಾಜು ಮತ್ತಿತರರು ಇದ್ದರು.

ಇಂದು ಗುರುವಂದನಾ ಕಾರ್ಯಕ್ರಮ

ಮಂಡ್ಯ: ನಗರದ ಪೊಲೀಸ್‌ ಕಾಲೋನಿಯ ಸರ್ಕಾರಿ ಪದವಿಪೂರ್ವ ಕಾಲೇಜು ವತಿಯಿಂದ 1994-97ನೇ ಸಾಲಿನ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಭಾನುವಾರ (ಸೆ.20) ಬೆಳಗ್ಗೆ 11 ಗಂಟೆಗೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ. ಉದ್ಘಾಟನೆಯನ್ನು ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಡಾ.ವಿ.ಜೆ.ಶೋಭಾರಾಣಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಡಾ.ಕೆ.ಶಬಾನಾ ವಹಿಸುವರು. ಅತಿಥಿಗಳಾಗಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಭಾಗವಹಿಸುವರು. ನಿವೃತ್ತ ಮುಖ್ಯ ಶಿಕ್ಷಕಿ ಕಮಲಮ್ಮ, ಶಿಕ್ಷಕರಾದ ವಿ.ಗೀತಾ, ಬಿ.ಕೆ.ವನಮಾಲ, ಎಚ್‌.ವಿ.ವೆಂಕಟನಾರಾಯಣ, ಪಿ.ರಾಮಮೂರ್ತಿ, ಎಂ.ಸಿ.ಶಂಕರೇಗೌಡ, ಕುಮುದಿನಿ, ಆರ್‌.ಶ್ರೀಲತಾ, ಎಂ.ಜೆ.ಜವರೇಗೌಡ, ಎಚ್‌.ರಾಮಚಂದ್ರ, ಕುಸುಮಾ, ಎಂ.ಎಲ್‌.ಅನ್ನಪೂರ್ಣಾದೇವಿ, ಪ್ರಾಂಶುಪಾಲೆ ಎಸ್‌.ಗೀತಾರಾಣಿ, ಶಾಲೆಯ ಮುಖ್ಯ ಶಿಕ್ಷಕಿ ಜಯಲಕ್ಷ್ಮಮ್ಮ ಭಾಗವಹಿಸುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಜಿ ರಾಮ್‌ ಜಿ’ ಅಡಿ ವಸತಿ ಯೋಜನೆಕೈಕೊಳ್ಳಲು ಕೇಂದ್ರ ಅವಕಾಶ: ಖಂಡ್ರೆ
ಭೂಗಳ್ಳನನ್ನು ಪಕ್ಕದಲ್ಲೇ ಕೂರಿಸಿಕೊಂಡು ಹಗರಣಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ: ಸಚಿವ