ಮಾಜಿ ಪ್ರಧಾನಿ ಸಿಂಗ್‌ ನಿಧನಕ್ಕ ಶ್ರದ್ಧಾಂಜಲಿ

KannadaprabhaNewsNetwork |  
Published : Dec 31, 2024, 01:02 AM IST
ಅರಸೀಕೆರೆ ನಗರದ ಹೊರವಲಯದಲ್ಲಿರುವ ಆದರ್ಶ ಫಾರಂನಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆ. | Kannada Prabha

ಸಾರಾಂಶ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನ ರಾಜ್ಯ ಹಾಗೂ ದೇಶಕ್ಕೆ ತುಂಬಾಲಾರದ ನಷ್ಟ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರು ಆದ ಶಾಸಕ ಕೆ. ಎಂ ಶಿವಲಿಂಗೇಗೌಡ ಕಂಬನಿ ಮಿಡಿದರು. ಕೇಂದ್ರದ ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರು ಹಾಗೂ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಸ್‌. ಎಂ. ಕೃಷ್ಣ ಅವರು ತೆಗೆದುಕೊಂಡ ನಿಲುವು ಹಾಗೂ ನಿರ್ಧಾರಗಳು ರಾಜ್ಯ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಬದಲಿಸಿತು ಎಂದು ಸ್ಮರಿಸಿಕೊಂಡರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನ ರಾಜ್ಯ ಹಾಗೂ ದೇಶಕ್ಕೆ ತುಂಬಾಲಾರದ ನಷ್ಟ ಎಂದು ರಾಜ್ಯ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರು ಆದ ಶಾಸಕ ಕೆ. ಎಂ ಶಿವಲಿಂಗೇಗೌಡ ಕಂಬನಿ ಮಿಡಿದರು.

ನಗರದ ಹೊರವಲಯದಲ್ಲಿರುವ ಆದರ್ಶ ಫಾರಂನಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರದ ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಮನಮೋಹನ್ ಸಿಂಗ್ ಅವರು ಹಾಗೂ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಎಸ್‌. ಎಂ. ಕೃಷ್ಣ ಅವರು ತೆಗೆದುಕೊಂಡ ನಿಲುವು ಹಾಗೂ ನಿರ್ಧಾರಗಳು ರಾಜ್ಯ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಬದಲಿಸಿತು ಎಂದು ಸ್ಮರಿಸಿಕೊಂಡರು.

ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ದೇಶದ ನಾಗರಿಕರಿಗೆ ಆಹಾರ ಭದ್ರತೆ, ಶಿಕ್ಷಣ ಹಕ್ಕು ಕಾಯ್ದೆ, ಸೇರಿದಂತೆ ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿ ಹಾಗೂ ವಿದೇಶಾಂಗ ಮಂತ್ರಿಗಳಾಗಿ ಸಲ್ಲಿಸಿದ ಸೇವೆ ಮತ್ತು ರಾಜ್ಯದ ಮುಖ್ಯಮಂತ್ರಿಗಳಾಗಿ ಎಚ್ ಎಂ ಕೃಷ್ಣ ಅವರು ಐಟಿಬಿಟಿ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ದೇಶದ ಜನತೆ ಮರೆಯಲು ಸಾಧ್ಯವಿಲ್ಲ ಎಂದು ತಮ್ಮ ನುಡಿನಮನ ಸಲ್ಲಿಸಿದರು.

ಗಂಡಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೆಟ್ರೋ ಬಾಬು ಮಾತನಾಡಿ, ಉತ್ತಮ ರಾಜಕಾರಣಿಗಳಾಗಿದ್ದ ಮನಮೋಹನ್ ಸಿಂಗ್ ಮತ್ತು ಎಸ್ ಎಂ ಕೃಷ್ಣ ಅವರು ಇಂದು ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಅವರ ಅಧಿಕಾರ ಅವಧಿಯಲ್ಲಿ ರಾಜ್ಯ ಹಾಗೂ ದೇಶದ ಬೆಳವಣಿಗೆಗೆ ನೀಡಿದ ಕೊಡುಗೆ ಅಪಾರವಾಗಿರುವುದು ಅಷ್ಟೇ ಅಲ್ಲದೇ ಯುವ ರಾಜಕಾರಣಿಗಳಿಗೆ ಆದರ್ಶವಾಗಿದೆ ಎಂದು ಕಂಬನಿ ಮಿಡಿದರು.

ಶ್ರದ್ಧಾಂಜಲಿ ಸಭೆಯಲ್ಲಿ ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ಸಾಮಾಜಿಕ ನ್ಯಾಯ ಸಮಿತಿಯ ಜಿಲ್ಲಾಧ್ಯಕ್ಷ ವೆಂಕಟೇಶ್,ಗ್ಯಾರಂಟಿ ಯೋಜನೆಗಳ ಸಮಿತಿಯ ತಾಲೂಕು ಅಧ್ಯಕ್ಷ ಧರ್ಮಶೇಖರ್,ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹುಚ್ಚೇಗೌಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಅಧ್ಯಕ್ಷ ಜಯರಾಮ್, ಕಾಂಗ್ರೆಸ್ ಮುಖಂಡರಾದ ಜವನಪ್ಪ, ನಗರಸಭೆ ಸದಸ್ಯರಾದ ವೆಂಕಟಮುನಿ, ಇತರರು ಪಾಲ್ಗೊಂಡಿದ್ದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ