* ಶಾಸಕ, ಸಚಿವ, ಸಂಸದೆ ಸಂತಾಪ ಕನ್ನಡಪ್ರಭ ವಾರ್ತೆ ದಾವಣಗೆರೆ
ದೇಶದ ಮಾಜಿ ಪ್ರಧಾನಿ ಅರ್ಥಶಾಸ್ತ್ರಜ್ಞ, ಶಿಕ್ಷಣ ತಜ್ಞ ಡಾ.ಮನಮೋಹನ್ ಸಿಂಗ್ ನಿಧನದಿಂದ ಭಾರತ ಮತ್ತು ವಿಶ್ವಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ ಎಂದು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.ಭಾರತದ 14 ನೇ ಪ್ರಧಾನಿಯಾಗಿದ್ದ ಡಾ.ಮನಮೋಹನ ಸಿಂಗ್ ಅವರು ಚಿಂತಕರು, ವಿದ್ವಾಂಸರು ಹಾಗೂ ನಿಗರ್ವಿ ಆಗಿದ್ದರು. ಅವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದಿದ್ದಾರೆ.ಡಾ.ಮನಮೋಹನ್ ಸಿಂಗ್ ಅವರು ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದವರು. ಯುಪಿಎ ಎರಡು ಅವಧಿಯ ಪ್ರಧಾನಿಯಾಗಿ (2004 ಮತ್ತು 2014) ಸೇವೆ ಸಲ್ಲಿಸಿದ್ದರು ಎಂ.ಎಂ. ಸಿಂಗ್ ಅವರ ಸಾಧನೆ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.- - - * ಶಾಸಕ, ಸಚಿವ, ಸಂಸದೆ ಸಂತಾಪ
ದಾವಣಗೆರೆ: ದೇಶದ ಮಾಜಿ ಪ್ರಧಾನಿ ಅರ್ಥಶಾಸ್ತ್ರಜ್ಞ, ಶಿಕ್ಷಣ ತಜ್ಞ ಡಾ.ಮನಮೋಹನ್ ಸಿಂಗ್ ನಿಧನದಿಂದ ಭಾರತ ಮತ್ತು ವಿಶ್ವಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ ಎಂದು ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.ಭಾರತದ 14 ನೇ ಪ್ರಧಾನಿಯಾಗಿದ್ದ ಡಾ.ಮನಮೋಹನ ಸಿಂಗ್ ಅವರು ಚಿಂತಕರು, ವಿದ್ವಾಂಸರು ಹಾಗೂ ನಿಗರ್ವಿ ಆಗಿದ್ದರು. ಅವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದಿದ್ದಾರೆ.ಡಾ.ಮನಮೋಹನ್ ಸಿಂಗ್ ಅವರು ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದವರು. ಯುಪಿಎ ಎರಡು ಅವಧಿಯ ಪ್ರಧಾನಿಯಾಗಿ (2004 ಮತ್ತು 2014) ಸೇವೆ ಸಲ್ಲಿಸಿದ್ದರು ಎಂ.ಎಂ. ಸಿಂಗ್ ಅವರ ಸಾಧನೆ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.- - - * ಮಾಜಿ ಸಂಸದ ಡಾ.ಸಿದ್ದೇಶ್ವರ ಸಂತಾಪ ದಾವಣಗೆರೆ: ಹಿರಿಯ ಮುತ್ಸದ್ಧಿ, ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ ಡಾ.ಮನಮೋಹನ್ ಸಿಂಗ್ ನಿಧನಕ್ಕೆ ಮಾಜಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಾ.ಮನಮೋಹನ್ ಸಿಂಗ್ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಆರ್‌ಬಿಐ ಗವರ್ನರ್ ಆಗಿದ್ದರು. 1991ರಲ್ಲಿ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿ, ಕೇವಲ 4 ತಿಂಗಳ ನಂತರ ಅಂದಿನ ಪ್ರಧಾನಿ ಪಿ.ವಿ. ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾದರು. ಭಾರತದ ಅರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣರಾದರು. ಅನಂತರ 2004 ರಿಂದ 2014ರವರೆಗೆ ಎರಡು ಅವಧಿಗೆ ಭಾರತದ ಪ್ರಧಾನಿಯಾಗಿ ಅನೇಕ ಸೇವೆ ಸಲ್ಲಿಸಿದ್ದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.ಡಾ. ಮನಮೋಹನ ಸಿಂಗ್ ಅಗಲಿಕೆಯಿಂದಾಗಿ ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವಂತಹ ಶಕ್ತಿ ನೀಡಲಿ ಎಂದು ಸಿದ್ಧೇಶ್ವರ ಪ್ರಾರ್ಥಿಸಿದ್ದಾರೆ.- - -* ದೂರದೃಷ್ಟಿತ್ವ ಯೋಜನೆಗಳ ಸರದಾರ
ದಾವಣಗೆರೆ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ ತಂದಿದೆ. ಭಾರತದ ಆರ್ಥಿಕತೆ ಉದಾರೀಕರಣಗೊಳಿಸಿ ಕೈಗೊಂಡ ಯೋಜನೆಗಳು ಸಾರ್ವಕಾಲಿಕ ಶ್ರೇಷ್ಠವಾದದ್ದು. ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದ ಸಿಂಗ್‌ರಂಥ ಮತ್ತೊಬ್ಬ ನಾಯಕ ಇಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಸಂತಾಪ ಸೂಚಿಸಿದ್ದಾರೆ.ಕೇವಲ ಭಾರತ ದೇಶ ಮಾತ್ರವಲ್ಲ, ಬೇರೆ ದೇಶಗಳ ಅಧ್ಯಕ್ಷರು ಸಹ ಮನಮೋಹನ್ ಸಿಂಗ್ ಅವರ ಸಲಹೆ ಪಡೆಯುತ್ತಿದ್ದರು ಎಂದರೆ ಬುದ್ಧಿವಂತಿಕೆಗೆ ಸಾಕ್ಷಿ. ಕೈಗಾರಿಕೆ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ. ರಾಜನೀತಿಜ್ಞ, ರಾಷ್ಟ್ರದ ಮೇಲೆ ಅಳಿಸಲಾರದ ಗುರುತು ಅಜರಾಮರ. ಹಣದುಬ್ಬರ ಮತ್ತು ಜಾಗತಿಕ ತೈಲ ಆಘಾತಗಳ ಅವಧಿಯಲ್ಲಿ ನೀತಿಗಳನ್ನು ಮಾರ್ಗದರ್ಶನ ಮಾಡಿದರು ಎಂದು ಸ್ಮರಿಸಿದ್ದಾರೆ.1982 ರಿಂದ 1985 ರವರೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿದ್ದರು, ಅಲ್ಲಿ ಅವರು ಆರ್ಥಿಕ ಸ್ಥಿರೀಕರಣ ಮತ್ತು ಹಣಕಾಸು ನಿಯಂತ್ರಣದ ಮೇಲೆ ಕೇಂದ್ರೀಕರಿಸಿದರು. ಅವರು ಯೋಜನಾ ಆಯೋಗದ (1985-1987) ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲಿ ಅವರು ಭಾರತದ ದೀರ್ಘಾವಧಿಯ ಆರ್ಥಿಕ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಇಂಥ ಮಹಾನ್ ನಾಯಕನ ಚಿರಸ್ಥಾಯಿಯಾಗಿ ಉಳಿಯುತ್ತಾರೆ ಎಂದು ಖಾಲಿದ್ ಅಹ್ಮದ್ ಅಭಿಪ್ರಾಯಪಟ್ಟಿದ್ದಾರೆ.- - -* ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸಂತಾಪ
ಚನ್ನಗಿರಿ: ಉದಾರೀಕರಣದ ಹರಿಕಾರ, ಆರ್ಥಿಕ ಸುಧಾರಕ, ವಿದೇಶಾಂಗ ನೀತಿಯ ಪರಿಣಿತಿ ಹೊಂದಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ತಮ್ಮ ಆಡಳಿತ ಅವಧಿಯಲ್ಲಿ ದೇಶದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆ ಮೂಲಕ ಭಾರತವನ್ನು ಸಮರ್ಥವಾಗಿ ಮುನ್ನಡೆಸಿದ್ದರು ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ.ಆಡಳಿತದಲ್ಲಿ ಶಿಕ್ಷಣದ ಹಕ್ಕು ಮತ್ತು ಗ್ರಾಮೀಣ ಪ್ರದೇಶಗಳ ಬಡಜನರಿಗೆ ಅನುಕೂಲ ಕಲ್ಪಿಸಲು ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದರು. ಧಾರ್ಮಿಕ ವಿಚಾರ ಧಾರೆಗಳಿಗೆ ಸ್ಪಂದಿಸುತ್ತಿದ್ದರು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಒಪ್ಪಿಕೊಂಡಿದ್ದರು. ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ವ್ಯಕ್ತಿಯಾಗಿದ್ದರು. ಅವರ ನಿಧನದಿಂದ ರಾಜಕೀಯ ಕ್ಷೇತ್ರವೇ ಬರಡಾದಂತಾಗಿದೆ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.- - -
* ದೂರದೃಷ್ಟಿತ್ವ ಯೋಜನೆಗಳ ಸರದಾರದಾವಣಗೆರೆ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ ದೇಶಕ್ಕೆ ತುಂಬಲಾರದ ನಷ್ಟ ತಂದಿದೆ. ಭಾರತದ ಆರ್ಥಿಕತೆ ಉದಾರೀಕರಣಗೊಳಿಸಿ ಕೈಗೊಂಡ ಯೋಜನೆಗಳು ಸಾರ್ವಕಾಲಿಕ ಶ್ರೇಷ್ಠವಾದದ್ದು. ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದ ಸಿಂಗ್‌ರಂಥ ಮತ್ತೊಬ್ಬ ನಾಯಕ ಇಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಸಂತಾಪ ಸೂಚಿಸಿದ್ದಾರೆ.ಕೇವಲ ಭಾರತ ದೇಶ ಮಾತ್ರವಲ್ಲ, ಬೇರೆ ದೇಶಗಳ ಅಧ್ಯಕ್ಷರು ಸಹ ಮನಮೋಹನ್ ಸಿಂಗ್ ಅವರ ಸಲಹೆ ಪಡೆಯುತ್ತಿದ್ದರು ಎಂದರೆ ಬುದ್ಧಿವಂತಿಕೆಗೆ ಸಾಕ್ಷಿ. ಕೈಗಾರಿಕೆ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ. ರಾಜನೀತಿಜ್ಞ, ರಾಷ್ಟ್ರದ ಮೇಲೆ ಅಳಿಸಲಾರದ ಗುರುತು ಅಜರಾಮರ. ಹಣದುಬ್ಬರ ಮತ್ತು ಜಾಗತಿಕ ತೈಲ ಆಘಾತಗಳ ಅವಧಿಯಲ್ಲಿ ನೀತಿಗಳನ್ನು ಮಾರ್ಗದರ್ಶನ ಮಾಡಿದರು ಎಂದು ಸ್ಮರಿಸಿದ್ದಾರೆ.1982 ರಿಂದ 1985 ರವರೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಆಗಿದ್ದರು, ಅಲ್ಲಿ ಅವರು ಆರ್ಥಿಕ ಸ್ಥಿರೀಕರಣ ಮತ್ತು ಹಣಕಾಸು ನಿಯಂತ್ರಣದ ಮೇಲೆ ಕೇಂದ್ರೀಕರಿಸಿದರು. ಅವರು ಯೋಜನಾ ಆಯೋಗದ (1985-1987) ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಅಲ್ಲಿ ಅವರು ಭಾರತದ ದೀರ್ಘಾವಧಿಯ ಆರ್ಥಿಕ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಇಂಥ ಮಹಾನ್ ನಾಯಕನ ಚಿರಸ್ಥಾಯಿಯಾಗಿ ಉಳಿಯುತ್ತಾರೆ ಎಂದು ಖಾಲಿದ್ ಅಹ್ಮದ್ ಅಭಿಪ್ರಾಯಪಟ್ಟಿದ್ದಾರೆ.- - -* ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸಂತಾಪ ಚನ್ನಗಿರಿ: ಉದಾರೀಕರಣದ ಹರಿಕಾರ, ಆರ್ಥಿಕ ಸುಧಾರಕ, ವಿದೇಶಾಂಗ ನೀತಿಯ ಪರಿಣಿತಿ ಹೊಂದಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ತಮ್ಮ ಆಡಳಿತ ಅವಧಿಯಲ್ಲಿ ದೇಶದಲ್ಲಿ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಆ ಮೂಲಕ ಭಾರತವನ್ನು ಸಮರ್ಥವಾಗಿ ಮುನ್ನಡೆಸಿದ್ದರು ಎಂದು ಮಾಜಿ ಶಾಸಕ ವಡ್ನಾಳ್ ರಾಜಣ್ಣ ಸಂತಾಪ ವ್ಯಕ್ತಪಡಿಸಿದ್ದಾರೆ.ಆಡಳಿತದಲ್ಲಿ ಶಿಕ್ಷಣದ ಹಕ್ಕು ಮತ್ತು ಗ್ರಾಮೀಣ ಪ್ರದೇಶಗಳ ಬಡಜನರಿಗೆ ಅನುಕೂಲ ಕಲ್ಪಿಸಲು ಉದ್ಯೋಗ ಖಾತ್ರಿ ಯೋಜನೆ ಜಾರಿಗೊಳಿಸಿದ್ದರು. ಧಾರ್ಮಿಕ ವಿಚಾರ ಧಾರೆಗಳಿಗೆ ಸ್ಪಂದಿಸುತ್ತಿದ್ದರು. ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಒಪ್ಪಿಕೊಂಡಿದ್ದರು. ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ ಧೀಮಂತ ವ್ಯಕ್ತಿಯಾಗಿದ್ದರು. ಅವರ ನಿಧನದಿಂದ ರಾಜಕೀಯ ಕ್ಷೇತ್ರವೇ ಬರಡಾದಂತಾಗಿದೆ. ಅವರ ಕುಟುಂಬಕ್ಕೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.- - -