ಅಪಪ್ರಚಾರ ನಡೆಸೋರ ವಿರುದ್ಧ ಮಂಪರು ಪರೀಕ್ಷೆ ನಡೆಸಿ

KannadaprabhaNewsNetwork |  
Published : Aug 17, 2025, 01:35 AM IST
16ಕೆಡಿವಿಜಿ3-ದಾವಣಗೆರೆಯಲ್ಲಿ ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳದ ಭಕ್ತ ಮಂಡಳಿ, ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಮಾಜಿ ಉಪ ಮೇಯರ್ ಸೋಗಿ ಶಾಂತಕುಮಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಇಡೀ ಪ್ರಕರಣದ ಹಿಂದಿರುವ ಕಾಣದ ಕೈಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತವೃಂದ ಒತ್ತಾಯಿಸಿದೆ.

- ಧರ್ಮಸ್ಥಳ ಕ್ಷೇತ್ರ, ಧರ್ಮಾಧಿಕಾರಿ ವಿರುದ್ಧ ಕುತಂತ್ರ: ದಿನೇಶ ಶೆಟ್ಟಿ ಟೀಕೆ- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಅಪಪ್ರಚಾರ ಮಾಡುತ್ತಿರುವವರನ್ನು ಮಂಪರು ಪರೀಕ್ಷೆಗೆ ಒಳಪಡಿಸಿ, ಇಡೀ ಪ್ರಕರಣದ ಹಿಂದಿರುವ ಕಾಣದ ಕೈಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಶ್ರೀಕ್ಷೇತ್ರ ಧರ್ಮಸ್ಥಳ ಭಕ್ತವೃಂದ ಒತ್ತಾಯಿಸಿದೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಶ್ರೀಕ್ಷೇತ್ರ ಮತ್ತು ಧರ್ಮಾಧಿಕಾರಿಗಳ ವಿರುದ್ಧ ಕಾಣದ ಕೈಗಳು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುತ್ತಿರುವ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣವರ್‌, ಎಂ.ಡಿ.ಸಮೀರ್‌, ಸಂತೋಷ ಶೆಟ್ಟಿ, ಟಿ.ಜಯಂತ್, ಅಜಯ್ ಅಂಚನ್ ಇತರರನ್ನೂ ತನಿಖೆಗೆ ಒಳಪಡಿಸಬೇಕು. ಮುಸುಕುಧಾರಿ ಅನಾಮಿಕ ವ್ಯಕ್ತಿ ಸೂಚಿಸಿದ ಸ್ಥಳಗಳಲ್ಲೆಲ್ಲಾ ಅಗೆದರೂ ಅಸ್ಥಿಪಂಜರಗಳು ಸಿಗದ ಹಿನ್ನೆಲೆಯಲ್ಲಿ ಆತನ ವಿರುದ್ಧವೇ ತನಿಖೆ ಮಾಡಿ, ಮಂಪರು ಪರೀಕ್ಷೆಗೆ ಒಳಪಡಿಸಲಿ ಎಂದು ಆಗ್ರಹಿಸಿದರು.

ಮಾಜಿ ಉಪ ಮೇಯರ್‌ ಸೋಗಿ ಶಾಂತಕುಮಾರ ಮಾತನಾಡಿ, ಕುಮಾರಿ ಸೌಜನ್ಯಗೆ ನ್ಯಾಯ ದೊರಕಿಸುವ ನೆಪದಲ್ಲಿ ಶ್ರೀಕ್ಷೇತ್ರದ ಮೇಲೆ ನಿರಂತರ ದಾಳಿ ಮಾಡಲಾಗುತ್ತಿರುವವರ ಹಿನ್ನೆಲೆ ಏನು, ಯಾಕೆಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಹೇಳಿದರು.

ಭಕ್ತರಾದ ಎಸ್.ಟಿ.ಕುಸುಮ ಶ್ರೇಷ್ಠಿ, ಅಣಬೇರು ಮಂಜುನಾಥ, ಅಣಜಿ ಚಂದ್ರಶೇಖರ, ಜಿಗಳಿ ಪ್ರಕಾಶ, ಜಯಪ್ರಕಾಶ ಮಾಗಿ, ಮಂಜುನಾಥ ಪಾಟೀಲ ಇತರರು ಇದ್ದರು.

- - -

(ಕೋಟ್‌) 20ರಂದು ಬೃಹತ್ ಪ್ರತಿಭಟನೆ

ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಆ.20ರಂದು ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಗೆ ಶ್ರೀ ಜಯದೇವ ವೃತ್ತದಿಂದ ಮೆರವಣಿಗೆ ಹೊರಟು ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ, ಅಲ್ಲಿ ಜಿಲ್ಲಾಧಿಕಾರಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಅರ್ಪಿಸಲಾಗುವುದು ಎಂದು ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದರು.

- - -

-16ಕೆಡಿವಿಜಿ3:

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌