ಸಮೀಕ್ಷೆ ಮಾಡಿ ಫಲಾನುಭವಿಗಳ ಪಂಚಗ್ಯಾರಂಟಿ ವ್ಯಾಪ್ತಿಗೆ ಸೇರಿಸಿ-ಮಿಥುನ ಪಾಟೀಲ

KannadaprabhaNewsNetwork |  
Published : May 15, 2025, 01:55 AM IST
ಸರ್ವೆ ಮಾಡಿ ಫಲಾನುಭವಿಗಳನ್ನು ಪಂಚಗ್ಯಾರಂಟಿ ವ್ಯಾಪ್ತಿಗೆ ಸೇರಿಸಿ:ಮಿಥುನ | Kannada Prabha

ಸಾರಾಂಶ

ಪಂಚ ಗ್ಯಾರಂಟಿ ಯೋಜನೆಯಡಿಯಲ್ಲಿ ತಾಲೂಕಿನ ಯಾವುದೇ ವ್ಯಕ್ತಿ ಯೋಜನೆಯ ಲಾಭ ಪಡೆಯದೆ ಇದ್ದಲ್ಲಿ ಅಂತವರನ್ನು ಗುರುತಿಸಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸರ್ವೇ ಕೈಗೊಂಡು ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಿಥುನ ಪಾಟೀಲ ತಿಳಿಸಿದರು.

ರೋಣ: ಪಂಚ ಗ್ಯಾರಂಟಿ ಯೋಜನೆಯಡಿಯಲ್ಲಿ ತಾಲೂಕಿನ ಯಾವುದೇ ವ್ಯಕ್ತಿ ಯೋಜನೆಯ ಲಾಭ ಪಡೆಯದೆ ಇದ್ದಲ್ಲಿ ಅಂತವರನ್ನು ಗುರುತಿಸಿ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಸರ್ವೇ ಕೈಗೊಂಡು ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಮಿಥುನ ಪಾಟೀಲ ತಿಳಿಸಿದರು.ಪಟ್ಟಣದ ತಾಲೂಕು ಪಂಚಾಯತಿಯಲ್ಲಿ ಇರುವ ಗ್ಯಾರಂಟಿ ಕಾರ್ಯಾಲಯದಲ್ಲಿ ಜರುಗಿದ ರೋಣ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕಿನ ಪ್ರತಿ ಗ್ರಾಮ ದಲ್ಲಿಯೂ ಕೂಡಾ ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ವೇ ಮಾಡಲು ನೇಮಿಸಿದ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ಹೋಗಿ ಸರ್ವೇ ಮಾಡಿ ಸರ್ಕಾರದಿಂದ ಅನುಷ್ಠಾನಿತ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿದರ ಬಗ್ಗೆ ಪರಿಶೀಲನೆ ಮಾಡಬೇಕು, ಗ್ಯಾರಂಟಿ ಯೋಜನೆಗಳು ಇನ್ನು ತಲುಪದಿದ್ದಲ್ಲಿ, ತಲುಪದೇ ಇರಲು ಕಾರಣವನ್ನು ಕಂಡು ಹಿಡಿದು ಪರಿಶೀಲಿಸಿ ಅದಕ್ಕೆ ಪರಿಹಾರವನ್ನು ಕಲ್ಪಿಸಿ ಅರ್ಹರಿಗೆ ಯೋಜನೆಗಳನ್ನು ತಲುಪಿಸಬೇಕು ಎಂದರು.ಅನ್ನಭಾಗ್ಯ ಯೋಜನೆಯ ಸಮರ್ಪಕ ಅನುಷ್ಟಾನಕ್ಕಾಗಿ ಆಹಾರ ಇಲಾಖೆಯ ಅಧಿಕಾರಿಗಳು ಪಡಿತರ ಅಂಗಡಿದಾರರ ಜೊತೆಗೆ ಸಭೆ ನಡೆಸಬೇಕು. ಅನ್ನಭಾಗ್ಯದ ಅಕ್ಕಿಯು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಸದ್ಯ ರೇಶನ್ ಕಾರ್ಡಗಳನ್ನು ಪ್ರಾರಂಭಿಸಿದ್ದು ಅದರ ಕಾಲಾವಧಿಯನ್ನು ಜನರಿಗೆ ತಿಳಿಯುವಂತೆ ಜಾಗೃತಿ ವಹಿಸಬೇಕು ಸೂಚಿಸಿದರು.

ರೋಣ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 36857 ಅರ್ಜಿಗಳು ನೊಂದಣೆಯಾಗಿದ್ದು ಅದರಲ್ಲಿ 36183 ಮಂಜೂರಾತಿ ಆಗಿವೆ. ಅದರಲ್ಲಿ 674 ಮಂಜೂರಾತಿಗೆ ಬಾಕಿ ಉಳದಿವೆ. ಅವರನ್ನು ಗುರುತಿಸಿ ಅವರಿಗೆ ಗೃಹಲಕ್ಷ್ಮಿ ಗೆ ಸೇರಿಸಿ ಶೇ 98.17 ಪ್ರಗತಿ ಸಾಧಿಸಿದೆ. ಮುಖ್ಯವಾಗಿ 171 ಗೃಹಲಕ್ಷೀ ಯೋಜನೆಯ ಫಲಾನುಭವಿಗಳು ಮರಣ ಹೊಂದಿದ್ದು ಸಂಬಂಧಿಸಿದ ಅಂಗನವಾಡಿ ಕಾರ್ಯಕರ್ತೆಯರು ಮರಣ ಪತ್ರ ತೆಗೆದುಕೊಂಡು ಅವರ ಹೆಸರನ್ನು ಕಡಿಮೆ ಮಾಡಲು ತಿಳಿಸಿದರು.

ಗೃಹಜ್ಯೋತಿ ಯೋಜನೆಯಡಿ ರೋಣ ಉಪವಿಭಾಗದಲ್ಲಿ ಒಟ್ಟು ಸಂಪರ್ಕ ಇದ್ದ ಸಂಖ್ಯೆ 43272 ಸ್ಥಾವರಗಳು ಅದರಲ್ಲಿ 22268 ಫಲಾನುಭವಿಗಳು ಯೋಜನೆ ಲಾಭ ಪಡೆದಿದ್ದು 1380 ಯೋಜನೆಯ ಲಾಭ ಪಡೆದಿಲ್ಲಾ ಇದನ್ನು ಕೂಡಾ ಸರ್ವೇ ಮಾಡಿ ಎಂದರು.

ಯುವನಿಧಿ ಯೋಜನೆಯಡಿ ರೋಣ ತಾಲೂಕಿನಲ್ಲಿ 753 ಫಲಾನುಭವಿಗಳ ನೋಂದಣಿಯಾಗಿದ್ದು 448 ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ 13,30,500 ರು. ವರ್ಗಾವಣೆಯಾಗಿರುತ್ತದೆ ಎಂದು ಸಂಬಂಧಿಸಿದ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ. ಕಂದಕೂರ, ಗ್ಯಾರಂಟಿ ಸಮಿತಿಯ ಸದಸ್ಯರು, ಅಧಿಕಾರಿಗಳು ಸೇರಿದಂತೆ ತಾಪಂ ಸಿಬ್ಬಂದಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ