ಮ್ಯಾನ್ಯುಯಲ್ ಸ್ಕ್ಯಾವೇಂಜರ್ ಫಲಾನುಭವಿಗಳ ಸಮೀಕ್ಷೆ ನಡೆಸಿ

KannadaprabhaNewsNetwork |  
Published : Dec 18, 2024, 12:45 AM IST
ಕ್ಯಾಪ್ಷನ16ಕೆಡಿವಿಜಿ37 ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧ್ಯಕ್ಷತೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೇಂಜರ್‌ಗಳ ಸಭೆ ನಡೆಯಿತು. | Kannada Prabha

ಸಾರಾಂಶ

ದಾವಣಗೆರೆ ನಗರ, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯೊಳಗೆ ಮ್ಯಾನ್ಯುಯಲ್ ಸ್ಕ್ಯಾವೇಂಜರ್ ಫಲಾನುಭವಿಗಳ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಮತ್ತು ಅಂಕಿಅಂಶ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದ್ದಾರೆ.

- ಅಧಿಕಾರಿಗಳು ನಿಖರ ಮಾಹಿತಿ, ಅಂಕಿಅಂಶ ನೀಡಬೇಕು: ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ- - - ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರ, ಪಟ್ಟಣ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯೊಳಗೆ ಮ್ಯಾನ್ಯುಯಲ್ ಸ್ಕ್ಯಾವೇಂಜರ್ ಫಲಾನುಭವಿಗಳ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಮತ್ತು ಅಂಕಿಅಂಶ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ. ಮ್ಯಾನ್ಯುಯಲ್ ಸ್ಕ್ಯಾವೇಂಜರ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ-2013ರ ಅನುಷ್ಠಾನ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮೀಕ್ಷೆ ಅನ್ವಯ ಇಲ್ಲಿಯವರೆಗೂ ಸ್ವೀಕೃತವಾದ ಫಲಾನುಭವಿಗಳ ಅರ್ಜಿಗಳನ್ನು ಸರ್ಕಾರಕ್ಕೆ ಕಳುಹಿಸಲಾಗುವುದು. ಸ್ವೀಕೃತವಾಗದ ಅರ್ಜಿಗಳನ್ನು ಕಾಲಮಿತಿಯೊಳಗೆ ಪರಿಶೀಲನೆ ಮಾಡಿ ಕಳಿಸಲಾಗುವುದು ಎಂದರು.

ಮ್ಯಾನ್ಯುಯಲ್ ಸ್ಕ್ಯಾವೇಂಜರ್‌ಗಳ ಫಲಾನುಭವಿಗಳು:

ದಾವಣಗೆರೆಯಲ್ಲಿ 245, ಹರಿಹರ- 78, ಚನ್ನಗಿರಿ- 41, ಮಲೇಬೆನ್ನೂರು 3, ಹೊನ್ನಾಳಿ 8, ಜಗಳೂರು 13 ಸೇರಿ ಒಟ್ಟು 388 ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳಿದ್ದಾರೆ. ಇದರಲ್ಲಿ 372 ಮ್ಯಾನ್ಯುಯಲ್ ಸ್ಕ್ಯಾವೇಂಜರ್‌ಗಳನ್ನು ಗುರುತಿಸಿ, ಗುರುತಿನ ಚೀಟಿ ನೀಡಲಾಗಿದೆ. ಇದರಲ್ಲಿ 16 ಬಾಕಿಯಿದ್ದು, 4 ಜನ ಮರಣ ಹೊಂದಿದ್ದಾರೆ. ಇನ್ನೂ 12 ಫಲಾನುಭವಿಗಳು ಸ್ಥಳದಲ್ಲಿ ವಾಸವಿಲ್ಲದ ಕಾರಣ ಗುರುತಿನ ಚೀಟಿ ವಿತರಿಸಲು ಸಾಧ್ಯವಾಗಿಲ್ಲ ಎಂದರು.

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ 2017ರಲ್ಲಿ 34 ಜನ, 2022ರಲ್ಲಿ 106 ಜನ ಹಾಗೂ 2023 ರಲ್ಲಿ 110 ಜನ ಒಟ್ಟು 250 ಜನರನ್ನು ನೇರ ನೇಮಕಾತಿ ಮೂಲಕ ಪೌರಕಾರ್ಮಿಕರ ಹುದ್ದೆಗೆ ವರ್ಷವಾರು ಭರ್ತಿ ಮಾಡಿಕೊಳ್ಳಲಾಗಿದೆ. ಇನ್ನುಳಿದ ಖಾಲಿ ಹುದ್ದೆಗಳಿಗೆ ಪ್ರಸ್ತಾವನೆ ಕಳುಹಿಸಲಾಗಿದೆ. ಸರ್ಕಾರದ ಆದೇಶ ಬಂದ ನಂತರ ಮುಂದಿನ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದರು.

ವಿಮಾ ಪಾಲಿಸಿ ಸೌಲಭ್ಯ:

ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 742 ಸ್ವಚ್ಛತಾ ಸಿಬ್ಬಂದಿಗೆ ಪ್ರಧಾನಮಂತ್ರಿ ಸುರಕ್ಷಾ ಭೀಮ ಯೋಜನೆ ಹಾಗೂ ಪ್ರಧಾನಮಂತ್ರಿ ಜೀವನ ಜ್ಯೋತಿ ಯೋಜನೆಯಡಿ ವಿಮಾ ಪಾಲಿಸಿಗಳನ್ನು ಮಾಡಲಾಗಿದೆ. 458 ಪೌರ ಕಾರ್ಮಿಕರು, 12 ಕ್ಲೀನರ್‌ಗಳು, 21 ಲೋಡರ್‌ಗಳು, 19 ಯುಜಿಡಿ ಹೆಲ್ಪರ್‌ಗಳು, 13 ಸೀನಿಯರ್ ಹೆಲ್ಪರ್‌ಗಳು, 26 ಸ್ಯಾನಿಟರಿ ಸೂಪರ್ ವೈಸರ್, 193 ವಾಹನ ಚಾಲಕರು ಸೇರಿದಂತೆ ಒಟ್ಟಾರೆಯಾಗಿ 742 ಕಾರ್ಮಿಕರಿಗೆ ವಿಮಾ ಪಾಲಿಸಿಗಳನ್ನು ಮಾಡಿಸಲಾಗಿದೆ ಎಂದರು. ಜಿಲ್ಲಾ ನಗರ ಅಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎನ್.ಮಹಾಂತೇಶ್ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಂಡ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಮರುಸಮೀಕ್ಷೆಯ ವರದಿ ಪ್ರಕಾರ ಸ್ವೀಕೃತವಾದ 224 ಅರ್ಜಿಗಳನ್ನು ಪರಿಶೀಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಸುರೇಶ್ ಬಿ. ಇಟ್ನಾಳ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯ್‌ಕುಮಾರ ಎಂ.ಸಂತೋಷ್, ಡಿಎಚ್‌ಒ ಡಾ.ಷಣ್ಮುಖಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ಮತ್ತು ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

- - -

ಬಾಕ್ಸ್‌ * ಗುರುತಿನ ಚೀಟಿ ವಿತರಣೆಪೌರಕಾರ್ಮಿಕರಿಗೆ ಉತ್ತಮ ಗುಣಮಟ್ಟದ ಪೌಷ್ಠಿಕಾಂಶವುಳ್ಳ ಹಾಗೂ ರುಚಿಕರ ಆಹಾರ ನೀಡಲು ಮೆನು ಬದಲಾಯಿಸಲು ಅಗತ್ಯ ಕ್ರಮವಹಿಸಲಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ, ಹರಿಹರ ಮತ್ತು ನಗರಸಭೆ, ಚನ್ನಗಿರಿ, ಹೊನ್ನಾಳಿ, ಮಲೇಬೆನ್ನೂರು ಪುರಸಭೆ, ಜಗಳೂರು, ನ್ಯಾಮತಿ ಪಟ್ಟಣ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಮತ್ತು ನೇರ ಪಾವತಿ ಪೌರಕಾರ್ಮಿಕರಿಗೆ ಹಾಗೂ ಸ್ವಚ್ಛತಾ ಸಿಬ್ಬಂದಿಗೆ ಗುರುತಿನ ಚೀಟಿ ನೀಡಿರುವುದಾಗಿ ಸಭೆಯಲ್ಲಿ ತಿಳಿಸಲಾಯಿತು.

- - -

-16ಕೆಡಿವಿಜಿ37.ಜೆಪಿಜಿ:

ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೇಂಜರ್‌ಗಳ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ