ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ಪುನರ್ವಸತಿ ಕುರಿತು ಸಭೆ ನಡೆಸಿದ ಅವರು, ಆರ್‌ಸಿ ಕೇಂದ್ರಗಳಲ್ಲಿ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸಬೇಕು ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಮಾಡಿಕೊಂಡ ಮನವಿಗೆ ಸಚಿವರು, ಸಭೆ ಕರೆಯಲು ಸೂಚಿಸಿದರು.
ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿ, 1984ರಿಂದ ಮುಳುಗಡೆಯಾದ ವಿಧಾನಸಭಾ ಕ್ಷೇತ್ರದ ಗ್ರಾಮಗಳ ಸ್ಥಳಾಂತರ ಮಾಡಲಾಗಿದೆ. ಅಲ್ಲಿ ಜನರು ಮೂಲ ಸೌಲಭ್ಯಗಳಿಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸಬೇಕಿದೆ ಎಂದರು.ಇದಕ್ಕೆ ಧ್ವನಿಗೂಡಿಸಿದ ಶಾಸಕ ಜೆ.ಟಿ. ಪಾಟೀಲ, ಬೀಳಗಿ ವಿಧಾನಸಭಾ ಕ್ಷೇತ್ರದಲ್ಲಿಯೂ ಮೂಲ ಸೌಲಭ್ಯಗಳನ್ನು ಒದಗಿಸಿಲ್ಲ. ಕೂಡಲೇ ಅವಶ್ಯ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.
ಪದವಿ ಕಾಲೇಜು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ. ಸ್ವಂತ ಕಟ್ಟಡ ನಿರ್ಮಾಣಕ್ಕೆ 10 ಎಕರೆ ಜಮೀನು ಕೇಳಿದ್ದೇವೆ. ಇಲ್ಲಿಯವರೆಗೂ ಕೊಟ್ಟಿಲ್ಲ. ಕೂಡಲೇ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.
ಸಾವಿರ ಜನ ಸಂಖ್ಯೆ ಇದ್ದರೆ ಎಷ್ಟು ಸ್ಮಶಾನಕ್ಕೆ ಎಷ್ಟು ಜಾಗ ಬೇಕಾಗುತ್ತದೆ ಎಂಬ ಪ್ರಶ್ನೆಗೂ ಉತ್ತರ ಬಾರದಿದ್ದಾಗ, ಜನ ಸಾಮಾನ್ಯರಿಗೆ ಗೊತ್ತಾಗುವುದು, ನಿಮಗೆ ಗೊತ್ತಾಗುವುದಿಲ್ಲ ಎಂದರೆ ಹೇಗೆ? ವೈಜ್ಞಾನಿಕವಾಗಿ ಪ್ರಸ್ತಾವ ಸಲ್ಲಿಸಿ ಎಂದು ಸೂಚಿಸಿದರು.
ಶಾಸಕರಾದ ಎಚ್.ವೈ.ಮೇಟಿ, ಜಗದೀಶ ಗುಡಗುಂಟಿ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹಮ್ಮದ್ ಮೊಹಸಿನ್ ಇದ್ದರು.
ಅನರ್ಹರಿಗೆ ನಿವೇಶನ ಹಂಚಿಕೆ: ತನಿಖೆಗೆ ಆಗ್ರಹ
ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ಒಂದು ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ಬೇರೆ ಗ್ರಾಮದವರಿಗೆ ನಿವೇಶನ ನೀಡಲಾಗಿದೆ. ವಾಣಿಜ್ಯ ನಿವೇಶನಗಳನ್ನು ಮಾರಾಟ ಮಾಡಲಾಗಿದೆ. ಸಂತ್ರಸ್ತರದಲ್ಲದವರಿಗೂ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು.