ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ । 27ಕ್ಕೆ ಕೆಪಿಎಸ್‌ಸಿ ಪರೀಕ್ಷೆ
ನಗರದ 16 ಕೇಂದ್ರಗಳಲ್ಲಿ ಆ.27ರಂದು ನಡೆಯಲಿರುವ ಪರೀಕ್ಷೆಯನ್ನು ಯಾವುದೇ ಲೋಪದೋಷವಾಗದಂತೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕೆಪಿಎಸ್‌ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪರೀಕ್ಷೆ ನಡೆಯುವ ಕೊಠಡಿಗಳಲ್ಲಿ ಬೆಳಕು, ಕುಡಿಯುವ ನೀರು, ಸುಸ್ಥಿತಿಯಲ್ಲಿರುವ ಗಡಿಯಾರ ಸೇರಿದಂತೆ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಇಂದೇ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ:
ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಉಪ ವಿಭಾಗಾಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ, ಸಪ್ತಶ್ರೀ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಬ್ದುಲ್ ಖಾದರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಮಪ, ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ನಾರಾಯಣಸ್ವಾಮಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲಗುರುಮೂರ್ತಿ, ಡಿಡಿಪಿಐ ಕೆ. ಮಂಜುನಾಥ್ ಇದ್ದರು.