ಗುಣಮಟ್ಟದ ಕಾಮಗಾರಿ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ: ರಾಮಣ್ಣ ದೊಡ್ಡಮನಿ

KannadaprabhaNewsNetwork |  
Published : Feb 02, 2026, 02:30 AM IST
ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಪಂ ಇಒ ರಾಮಣ್ಣ ದೊಡ್ಡಮನಿ ಮಾತನಾಡಿದರು. | Kannada Prabha

ಸಾರಾಂಶ

ಪ್ರತಿಯೊಂದು ಇಲಾಖೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸರ್ಕಾರದ ನಿಯಮಾನುಸಾರ ಬಳಕೆ ಮಾಡಿಕೊಳ್ಳಬೇಕು.

ಶಿರಹಟ್ಟಿ: ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖೆಯಡಿ ಬರುವ ಕಾಮಗಾರಿಗಳ ಸ್ಥಿತಿಗಳ ಕುರಿತು ಮಾಹಿತಿ ನೀಡಬೇಕು. ವಿವಿಧ ಕಾಮಗಾರಿಗಳಿಗಾಗಿ ಬಿಡುಗಡೆಯಾಗಿರುವ ಅನುದಾನಗಳನ್ನು ಬಳಕೆ ಮಾಡಿಕೊಳ್ಳಲು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ತಿಳಿಸಿದರು.ಪಟ್ಟಣದ ತಾಪಂ ಕಚೇರಿಯಲ್ಲಿ ಶುಕ್ರವಾರ ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಒಟ್ಟು ಬಿಡುಗಡೆಯಾದ ಅನುದಾನ ಎಷ್ಟು? ಯಾವ ಯಾವ ಕಾಮಗಾರಿಗಳಿಗೆ ಎಷ್ಟು ಹಣ ಬಳಕೆ ಮಾಡಲಾಗಿದೆ. ಕಾಮಗಾರಿ ಗುಣಮಟ್ಟದ್ದಾಗಿದೆಯೋ ಇಲ್ಲವೋ ಎನ್ನುವ ಮಾಹಿತಿಯನ್ನು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಎಂಬಿ ಬರೆಯಬೇಕು. ಅನುದಾನ ಬಾಕಿ ಉಳಿದರೆ ಅದರ ಬಗ್ಗೆ ಗಮನಹರಿಸಿ ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಕೈಗೊಂಡು ಮಾಹಿತಿ ನೀಡಬೇಕು.ಪ್ರತಿಯೊಂದು ಇಲಾಖೆಗೆ ಬಿಡುಗಡೆಯಾಗಿರುವ ಅನುದಾನವನ್ನು ಸರ್ಕಾರದ ನಿಯಮಾನುಸಾರ ಅನುದಾನ ಬಳಕೆ ಮಾಡಿಕೊಳ್ಳಬೇಕು. ನಿಗದಿತ ಅವಧಿಯೊಳಗೆ ಅನುದಾನ ಬಳಕೆ ಮಾಡಿಕೊಳ್ಳುವ ಭರದಲ್ಲಿ ಕಳಪೆ ಕಾಮಗಾರಿ ಮಾಡಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.ಪರಿಶಿಷ್ಟ ಜಾತಿ ಹಾಗೂ ಪಂಗಡ ಸಮುದಾಯ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಂಡು ಶೇ. ೧೦೦ರಷ್ಟು ಸಾಧನೆಗೈಯಬೇಕು. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೂಲ ಸೌಕರ್ಯಗಳು ಸೇರಿದಂತೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸಬೇಕು. ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಶೇ. ೫೦ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಬಳಸಬೇಕು. ಒಂದು ವೇಳೆ ನಿಗದಿಪಡಿಸಿದ ಪ್ರದೇಶದಲ್ಲಿ ಶೇ. ೪೦ಕ್ಕಿಂತ ಕಡಿಮೆ ಅರ್ಹ ಫಲಾನುಭವಿಗಳು ಇದ್ದರೆ ಅಂತಹ ಪ್ರದೇಶಗಳಲ್ಲಿ ಜನಸಂಖ್ಯೆ ಅನುಸಾರ ಅನುದಾನ ನಿಗದಿಪಡಿಸಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ಬಾರಿ ಎಸ್‌ಸಿಪಿ ಅಡಿಯಲ್ಲಿ ₹೧೫.೯೦ ಲಕ್ಷ ಅನುದಾನವನ್ನು ನಿರೀಕ್ಷಿಸಲಾಗಿತ್ತು. ಆದರೆ ಸರ್ಕಾರದಿಂದ ಹೆಚ್ಚುವರಿಯಾಗಿ ₹೨೨.೧೩ ಲಕ್ಷ ಬಿಡುಗಡೆಯಾಗಿದ್ದು, ಅದರಲ್ಲಿ ₹೨೨.೧೨ ಲಕ್ಷ ಬಳಕೆಯಾಗಿದೆ. ಅದರಂತೆ ಟಿಎಸ್‌ಪಿ ಯೋಜನೆಯಡಿಲ್ಲಿ ₹೯.೧೮ ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಅದರಲ್ಲಿ ₹೯.೧೨ ಲಕ್ಷ ಅನುದಾನದಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಾಲಿನ ಪುಡಿ ಮತ್ತು ಕೋಳಿ ಮೊಟ್ಟೆಯನ್ನು ವಿತರಿಸಲಾಗಿದೆ ಎಂದು ಸಿಡಿಪಿಒ ಮೃತ್ಯುಂಜಯ ಗುಡ್ಡದಾನವೇರಿ ತಿಳಿಸಿದರು.ನೋಟಿಸ್ ನೀಡುವಂತೆ ತಾಕೀತು: ಶುಕ್ರವಾರ ನಡೆದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆಗೆ ಬೆರಳೆಣಿಕೆಯ ಅಧಿಕಾರಿಗಳು ಹಾಜರಾಗಿದ್ದರೆ. ಕೆಲವು ಇಲಾಖೆಯ ಅಧಿಕಾರಿಗಳು ತಮ್ಮ ಬದಲಿಗೆ ಇಲಾಖೆಯ ಸಿಬ್ಬಂದಿಯನ್ನು ಕಳಿಸಿದ್ದರು. ಇದನ್ನು ಕಂಡ ಇಒ ಅವರು, ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಗೋಪಾಲ ಲಮಾಣಿ ಅವರಿಗೆ ಸೂಚಿಸಿದರು. ಸಭೆಗೆ ಸುಮಾರು ೨೮ ಇಲಾಖೆಗಳ ಅಧಿಕಾರಿಗಳಿಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ಸುಮಾರು ೧೪ ಇಲಾಖೆಗಳ ಅಧಿಕಾರಿಗಳು ಮಾತ್ರ ಹಾಜರಿದ್ದರು.ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲ ಲಮಾಣಿ, ಬಿಇಒ ಎಚ್.ಎನ್. ನಾಯಕ, ಡಾ. ಪವನ ಪಾಯಿದೆ, ಎಇಇ ಮಲ್ಲಿಕಾರ್ಜುನ್ ಪಾಟಿಲ್, ಭಾರತಿ ಮುರಶಿಳ್ಳಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ
ರಾಜಕ್ಕೆ ಕೇಂದ್ರ ಬಜೆಟ್ಟಲ್ಲಿ ಚೊಂಬು : ಸಿಎಂ ಸಿಡಿಮಿಡಿ