ಅಂಚೆ ಮತ ಎಣಿಕೆಯನ್ನು ಜಾಗರೂಕತೆಯಿಂದ ನಡೆಸಿ: ಜಿಲ್ಲಾಧಿಕಾರಿ ಡಾ.ಕುಮಾರ

KannadaprabhaNewsNetwork |  
Published : May 28, 2024, 01:05 AM IST
೨೭ಕೆಎಂಎನ್‌ಡಿ-೪ಮಂಡ್ಯದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ  ಅಂಚೆ ಮತ ಎಣಿಕೆ ಅಧಿಕಾರಿ, ಸಿಬ್ಬಂದಿಗೆ ಆಯೋಜಿಸಲಾಗಿದ್ದ ಚುನಾವಣಾ ತರಬೇತಿಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಇದ್ದರು. | Kannada Prabha

ಸಾರಾಂಶ

ಅಂಚೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಒಟ್ಟು ೧೧ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಂಚೆ ಮತ ಪತ್ರ ಎಣಿಕೆಯ ಸಹಾಯಕ ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಂಚೆ ಮತ ಎಣಿಕೆಯು ಬಹಳ ಸೂಕ್ಷ್ಮವಾಗಿದ್ದು, ಎಲ್ಲಾ ಮತ ಎಣಿಕೆ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ಮತ ಎಣಿಕೆ ಕಾರ್ಯ ಜೂ.೪ರಂದು ನಡೆಯಲಿದ್ದು, ಅಂಚೆ ಮತಪತ್ರಗಳ ಎಣಿಕೆಯನ್ನು ಬಹಳ ಜಾಗರೂಕತೆಯಿಂದ ನಡೆಸುವಂತೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಂಚೆ ಮತ ಎಣಿಕೆ ಅಧಿಕಾರಿ ಹಾಗೂ ಸಿಬ್ಬಂದಿಗೆ ತಿಳಿಸಿದರು.

ಸೋಮವಾರ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಅಂಚೆ ಮತ ಎಣಿಕೆ ಅಧಿಕಾರಿ, ಸಿಬ್ಬಂದಿಗೆ ಆಯೋಜಿಸಲಾಗಿದ್ದ ಚುನಾವಣಾ ತರಬೇತಿಯಲ್ಲಿ ಮಾತನಾಡಿ, ಅಂಚೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಒಟ್ಟು ೧೧ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಟೇಬಲ್‌ಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಅಂಚೆ ಮತ ಪತ್ರ ಎಣಿಕೆಯ ಸಹಾಯಕ ಚುನಾವಣಾ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಂಚೆ ಮತ ಎಣಿಕೆಯು ಬಹಳ ಸೂಕ್ಷ್ಮವಾಗಿದ್ದು, ಎಲ್ಲಾ ಮತ ಎಣಿಕೆ ಅಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಮತ ಎಣಿಕೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ತರಬೇತಿಯಲ್ಲಿ ಸರಿಯಾದ ಸಲಹೆ ಹಾಗೂ ಮಾರ್ಗದರ್ಶನವನ್ನು ಪಡೆಯಿರಿ. ಮತ ಎಣಿಕೆಯ ದಿನದಂದು ಕೌಂಟಿಂಗ್ ಟೇಬಲ್‌ನ ಸಂಖ್ಯೆ, ಅಧಿಕಾರಿ ಹೆಸರು, ಎಣಿಕೆ ಮೇಲ್ವಿಚಾರಕರ ಹೆಸರು, ನೀಡುವ ಪೋಸ್ಟಲ್ ಬ್ಯಾಲೆಟ್ ಬಂಡಲ್‌ನ ಒಟ್ಟು ಸಂಖ್ಯೆಯನ್ನು ನೀಡಲಾಗುವ ನಮೂನೆಯಲ್ಲಿ ತಪ್ಪದೇ ನಮೂದಿಸಬೇಕು ಎಂದರು.

ಮತ ಎಣಿಕೆ ಮೇಲ್ವಿಚಾರಕರ ಜವಾಬ್ದಾರಿ ಬಹಳ ಮುಖ್ಯವಾಗಿದ್ದು, ಮತ ಎಣಿಕೆಯ ದಿನ ಎಲ್ಲಾ ಸಿಬ್ಬಂದಿ ನಿಗದಿಪಡಿಸುವ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಮತ ಎಣಿಕೆಯನ್ನು ನಿಖರವಾಗಿ ನಮೂದಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಅಪರ ಜಿಲ್ಲಾಧಿಕಾರಿ ಡಾ.ಎಚ್. ಎಲ್. ನಾಗರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಿ.23ಕ್ಕೆ ರೈತರ ದಿನಾಚರಣೆ, ರಾಜ್ಯಮಟ್ಟದ ಸಮಾವೇಶ
ಪ್ರಜಾಸೌಧ ನಿರ್ಮಾಣ ಜಾಗ ಬದಲಾವಣೆಗೆ ಆಗ್ರಹ