ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿ

KannadaprabhaNewsNetwork |  
Published : Sep 26, 2024, 10:13 AM IST
ರಾಜಕಾಲುವೆ ಅತಿಕ್ರಮಣ ತೆರವಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ನಗರದಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ, ಅತಿಕ್ರಮಣವನ್ನು 15 ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕಾಲುವೆಯಲ್ಲಿ ಶೇಖರಣೆಯಾಗಿರುವ ಕಸ, ತ್ಯಾಜ್ಯವನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಛವಾಗಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನಗರದಲ್ಲಿ ಒತ್ತುವರಿಯಾಗಿರುವ ರಾಜಕಾಲುವೆ, ಅತಿಕ್ರಮಣವನ್ನು 15 ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಬೇಕು. ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕಾಲುವೆಯಲ್ಲಿ ಶೇಖರಣೆಯಾಗಿರುವ ಕಸ, ತ್ಯಾಜ್ಯವನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಛವಾಗಿಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸೋಮವಾರ ದಾಖಲೆಯ ಮಳೆಯ ಮಳೆಯಾಗಿ ಅವಾಂತರ ಸೃಷ್ಟಿಯಾಗಿದೆ. ಹಾನಿಯ ಕುರಿತು ತುರ್ತಾಗಿ ಸಮೀಕ್ಷೆ ಕೈಗೊಂಡು ಮನೆ-ಬೆಳೆಹಾನಿ ಸಮೀಕ್ಷೆ ಕೈಗೊಳ್ಳಬೇಕು. ನಿಖರ ಮಾಹಿತಿ ಸಿದ್ಧಪಡಿಸುವಂತೆ ಹಾಗೂ ಪಾಲಿಕೆ ವ್ಯಾಪ್ತಿಯ ಹಾನಿಯ ಬಗ್ಗೆ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆಯು ರಸ್ತೆ ನಿರ್ಮಾಣ ಸಂದರ್ಭದಲ್ಲಿ ಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಮಳೆಯಿಂದ ಹಾನಿಯಾದ ರಸ್ತೆ, ವಿದ್ಯುತ್ ಕಂಬಗಳ ಮಾಹಿತಿ ಸಂಗ್ರಹಿಸುವಂತೆ ಹಾಗೂ ಮಳೆ ಸಂದರ್ಭದಲ್ಲಿ ಯಾವುದೇ ಅಪಾಯಗಳು ಉಂಟಾಗದಂತೆ ವಿದ್ಯುತ್ ಕಡಿತಗೊಳಿಸಬೇಕು ಸಲಹೆ ನೀಡಿದರು.

ಇನ್ನು, ಶಾಲಾ ಕೊಠಡಿಗಳ ದುರಸ್ತಿ ಬಗ್ಗೆ ಮಾಹಿತಿಯನ್ನು ಆದ್ಯತೆ ಮೇರೆಗೆ ಕ್ರೋಡಿಕರಿಸಿ ವರದಿ ಸಲ್ಲಿಸಬೇಕು. ಶಾಲಾ ಕೊಠಡಿಗಳು ಎಲ್ಲೆಲ್ಲಿ ಸಮಸ್ಯೆಯಾಗಿದೆ. ದುರಸ್ತಿ ಹಾಗೂ ಸ್ವಚ್ಛತೆಯ ಬಗ್ಗೆ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ, ಸಕಾಲಕ್ಕೆ ಹಾಜರಾಗುವ ಬಗ್ಗೆ ಜಿಲ್ಲಾ ಪಂಚಾಯತಿಯ ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಕಾಲಕಾಲಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹೇಳಿದರು.

ಮಳೆಯಿಂದ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಎರಡು ವಾರಗಳಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುವುದು. ಯಾವುದೇ ನೆಪ ಹೇಳದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗುವ ಸೊಳ್ಳೆ ಉತ್ಪತ್ತಿಯಾಗದಂತೆ ಫಾಗಿಂಗ್, ಔಷಧ ಸಿಂಪಡಣೆ ಮಾಡಬೇಕು. ಮಲೇರಿಯಾ, ಚಿಕೂನ್‌ ಗುನ್ಯಾ, ಡೆಂಘೀ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ಈ ವೇಳೆ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ, ಮೇಯರ್ ಮೆಹಜಬಿನ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಉಪ ಮೇಯರ್ ದಿನೇಶ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಋಷಿಕೇಶ ಸೋನಾವಣೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.------

ಕೋಟ್‌

ಮಳೆಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರನ್ನೊಳಗೊಂಡ ಕಾರ್ಯಪಡೆ ರಚಿಸಬೇಕು. ಇವರು ಮೇಲಿಂದ ಮೇಲೆ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆಯಬೇಕು.

- ಎಂ.ಬಿ.ಪಾಟೀಲ, ಉಸ್ತುವಾರಿ ಸಚಿವರು.

PREV

Recommended Stories

15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಗುಜರಿಗೆ: ಆದೇಶ
ಹಾಸಿಗೆ, ದಿಂಬಿಗಾಗಿ ಮತ್ತೆ ಕೋರ್ಟಲ್ಲಿ ಅಂಗಲಾಚಿದ ಕೊಲೆ ಆರೋಪಿ ದರ್ಶನ್‌