ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಪರೀಕ್ಷೆ-1 ನಡೆಸಿದಂತೆ ಪರೀಕ್ಷೆ-2 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ, ಏಪ್ರಿಲ್, 24 ರಿಂದ ಮೇ, 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3470 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.