ಕನ್ನಡಪ್ರಭ ವಾರ್ತೆ ಭಾರತೀನಗರ
ಭಾರತೀ ಎಜುಕೇಷನ್ ಟ್ರಸ್ಟ್‌ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೀರಾವರಿ ಸೌಲಭ್ಯದಡಿ ಎಲ್ಲರಿಗೂ ಸಮಾನ ನೀರು ಹಂಚಿಕೆ, ನೀರು ಪೋಲು ತಪ್ಪಿಸುವುದು, ವಿತರಣಾ ಮತ್ತು ಹೊಲಗಾಲುವೆಗಳ ದುರಸ್ತಿ, ನೀರಿನ ಕರ ವಸೂಲಾತಿ, ಮುಖ್ಯವಾಗಿ ಕೊನೆಯ ಭಾಗದ ರೈತರಿಗೆ ನೀರು ತಲುಪಿಸುವುದು ಹಾಗೂ ನೀರು ಬಳಕೆದಾರರ ಸಹಕಾರ ಸಂಘಗಳನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಸಮಾವೇಶದ ಮೂಲಕ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಯಿತು.
ಅಲ್ಲದೇ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಸಮಾವೇಶಕ್ಕೆ ಆಹ್ವಾನಿಸಿ ನೀರು ಬಳಕೆದಾರರ ಸಹಕಾರ ಸಂಘಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಭೆಯಲ್ಲಿ ಒಕ್ಕೊರಲ ಅಭಿಪ್ರಾಯ ವ್ಯಕ್ತವಾಯಿತು.ರೈತರ ಪಾಲ್ಗೊಳ್ಳುವಿಕೆ ಹೆಚ್ಚಬೇಕು:
ಕೆಆರ್‌ಎಸ್ ಅಣೆಕಟ್ಟೆ ತುಂಬಿದ್ದರೂ ಕಡೇ ಭಾಗಕ್ಕೆ ಸುಗಮವಾಗಿ ನೀರು ತಲುಪದೆ ರೈತರು ಸಂಕಷ್ಟ ಎದುರಿಸುವಂತಾಯಿತು. ನೀರಿನ ಸಂರಕ್ಷಣೆ ಮತ್ತು ನೀರು ನಿರ್ವಹಣೆ ಸಮರ್ಪಕವಾಗಿ ಆಗಿದ್ದರೆ ಇಂದಿನ ಜಲ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿತ್ತು ಎಂದರು.
ಕಾರ್ಯಾನುದಾನ ಹೆಚ್ಚಳಕ್ಕೆ ಆಗ್ರಹ:
ಸರ್ಕಾರ ಪ್ರತಿ ವರ್ಷ ನೀರು ಬಳಕೆದಾರರ ಸಹಕಾರ ಸಂಘಗಳಿಗೆ ವಾರ್ಷಿಕ 1 ಲಕ್ಷ ರು. ಕಾರ್ಯಾನುದಾನ ಮತ್ತು ಏಕಕಾಲಿಕ ನಿರ್ವಹಣಾ ಅನುದಾನ ನೀಡುತ್ತಿದೆ. ಆದರೆ, ಈ ಅನುದಾನ ಏನೇನಕ್ಕೂ ಸಾಲದು. ಇದು ಹೆಚ್ಚಳವಾಗಬೇಕು ಎಂದು ಒತ್ತಾಯಿಸಿದರು.ಸಭೆಯಲ್ಲಿ ಕೆ.ಆರ್.ಎಸ್.ಫೆಡರೇಶನ್ ಅಧ್ಯಕ್ಷ ಕೆ.ಎಲ್.ದೊಡ್ಡಲಿಂಗೇಗೌಡ, ಬಿ.ಎನ್.ನಂಜೇಗೌಡ, ನಿರ್ದೇಶಕರಾದ ಎಚ್.ಕೃಷ್ಣ, ಬಿ.ಎಂ.ರಘು, ವಿ.ಕೆ.ಚನ್ನಬಸವೇಗೌಡ, ಎಚ್.ಡಿ.ಮಹದೇವು, ಸಿಇಓ ಬಿ.ಸುರೇಶ್ ಹಾಗೂ ನೀರು ಬಳಕೆದಾರ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಭಾಗವಹಿಸಿದ್ದರು.