ಧರ್ಮಸ್ಥಳ ಯೋಜನೆಯಿಂದ ಮಹಿಳೆಯರಲ್ಲಿ ಆತ್ಮವಿಶ್ವಾಸ ವೃದ್ಧಿ: ದೋಟಿಹಾಳ

KannadaprabhaNewsNetwork |  
Published : Dec 30, 2024, 01:02 AM IST
ಪೋಟೊ29ಕೆಎಸಟಿ3: ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶಾದಿಮಹಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕಾ ಮಟ್ಟದ ಮಹಿಳಾ ವಿಚಾರ ಗೋಷ್ಟಿಯ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನೆಗಳು ಮಹಿಳೆಯರಲ್ಲಿ ಆತ್ಮ ವಿಶ್ವಾಸ ವೃದ್ಧಿಸುತ್ತಿದ್ದು, ಇವುಗಳನ್ನು ಮಹಿಳೆಯರು ಸದುಪಯೋಗ ಪಡೆದುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕುಷ್ಟಗಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನೆಗಳು ಮಹಿಳೆಯರಲ್ಲಿ ಆತ್ಮ ವಿಶ್ವಾಸ ವೃದ್ಧಿಸುತ್ತಿದ್ದು, ಇವುಗಳನ್ನು ಮಹಿಳೆಯರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಡಾ ನಿಗಮದ ಅಧ್ಯಕ್ಷ ಹಸನಸಾಬ ದೋಟಿಹಾಳ ಹೇಳಿದರು.

ತಾಲೂಕಿನ ದೋಟಿಹಾಳ ಗ್ರಾಮದ ಶಾದಿಮಹಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆ ಕುಷ್ಟಗಿ ವತಿಯಿಂದ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ತಾಲೂಕಾ ಮಟ್ಟದ ಮಹಿಳಾ ವಿಚಾರ ಗೋಷ್ಠಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.

ಧರ್ಮಸ್ಥಳ ಯೋಜನೆಯಿಂದ ನೀಡುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಮಹಿಳೆಯರು ಕುಟುಂಬದ ಅಭಿವೃದ್ಧಿ ಮಾಡಬೇಕು. ತಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಕೊಡಿಸುವ ಮೂಲಕ ಆರ್ಥಿಕತೆಯಿಂದ ಸಬಲರಾಗಬೇಕು ಎಂದರು.

ಪ್ರಾದೇಶಿಕ ನಿರ್ದೇಶಕ ಜೆ. ಚಂದ್ರಶೇಖರ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ವಿದ್ಯಾವತಿ ಗೋಟೂರು ಮಹಿಳೆಯರ ಅಭಿವೃದ್ಧಿಯ ಬಗ್ಗೆ ಸಂಘದ ಯೋಜನೆಗಳ ಮಹತ್ವದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಈ ಸಂದರ್ಭ ದೋಟಿಹಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ ಕಾಳಗಿ, ಕೇಸೂರು ಗ್ರಾಪಂ ಅಧ್ಯಕ್ಷೆ ಶ್ರೀದೇವಿ ಮಳಿಮಠ, ಪ್ರಾದೇಶಿಕ ಜಿಲ್ಲಾ ನಿರ್ದೇಶಕ ಪ್ರಕಾಶರಾವ, ತಾಲೂಕಾ ಯೋಜನಾಧಿಕಾರಿ ಶೇಖರ ನಾಯಕ, ಜ್ಞಾನವಿಕಾಸ ಸಮಿತಿಯ ಸಮನ್ವಯ ಅಧಿಕಾರಿಗಳು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂಧು ಸ್ವ-ಸಹಾಯ ಸಂಘದ ಸರ್ವ ಸದಸ್ಯರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ