ವಿಶೇಷಚೇತನರಲ್ಲಿ ಆತ್ಮವಿಶ್ವಾಸ ತುಂಬಬೇಕು

KannadaprabhaNewsNetwork |  
Published : Jan 01, 2025, 12:00 AM IST
ಶಿರ್ಷಿಕೆ-೩೧ಕೆ.ಎಂ.ಎಲ್.ಆರ್.೨-ಮಾಲೂರು ಕ್ಷೇತ್ರ ಶಿಕ್ಷಣಾಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರಸಮನ್ವ ಯಾಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಕಾರಿ ಟಿ.ವೆಂಕಟಸ್ವಾಮಿ ಅವರು ಉದ್ಘಾಟಸಿದರು. | Kannada Prabha

ಸಾರಾಂಶ

ವಿಕಲಚೇತನರು ಎಂದಾಕ್ಷಣ ಕೈಲಾಗದವರು ಎಂರ್ಥವಲ್ಲ. ಅವರಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ. ಸೋಮಾರಿಗಳಾಗದೇ ನಿರಂತರ ಶ್ರಮವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕು. ವಿಕಲಾಂಗರಾದ ಅದೆಷ್ಟೊ ಮಂದಿ ಕೆಎಎಸ್, ಐಎಎಸ್ ಸೇರಿದಂತೆ ಕ್ರಿಡಾ ಕ್ಷೆತ್ರದಲ್ಲೂ ಸಾಸಿ ದೇಶ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ

ಕನ್ನಡಪ್ರಭ ವಾರ್ತೆ ಮಾಲೂರು

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರಸಮನ್ವಧಿಯಾಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ವಿಶ್ವ ವಿಕಲಚೇತನರ ದಿನವನ್ನು ಇಲ್ಲಿನ ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಕಾರಿ ಟಿ.ವೆಂಕಟಸ್ವಾಮಿ ಅವರು ಉದ್ಘಾಟಸಿ ಮಾತನಾಡಿ, ವಿಶ್ವ ವಿಕಲ ಚೇತನ ದಿನಾಚರಣೆ ೧೯೯೨ರಲ್ಲಿ ವಿಶ್ವ ಸಂಸ್ಥೆಯಲ್ಲಿ ಅಕೃತವಾಗಿ ಪ್ರಾರಂಭಿಸಿದರು. ಪ್ರತಿ ವರ್ಷ ಡಿ.೩ ರಂದು ವಿಶ್ವ ವಿಕಲಚೇತನ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ವಿಶೇಷ ಸಾಮರ್ಥ್ಯ ಉಳ್ಳವರು

ವಿಶ್ವದ ಎಲ್ಲೆಡೆ ವಿಕಲಚೇತನ ವ್ಯಕ್ತಿಗಳಲ್ಲಿ ಆತ್ಮಸ್ಥ್ಯರ್ಯ, ವಿಶ್ವಾಸವನ್ನು ತುಂಬಿ ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡುವುದರಲ್ಲಿ ವಿವಿಧ ಸಂಘ ಸಂಸ್ಥೆಗಳು ಇಲಾಖೆಯು ಕರ್ತವ್ಯವನ್ನು ನಿರ್ವಹಿಸುತ್ತಿದೆ. ವಿಕಲಚೇತನರು ಎಂದಾಕ್ಷಣ ಕೈಲಾಗದವರು ಎಂರ್ಥವಲ್ಲ. ಅವರಲ್ಲಿಯೂ ವಿಶೇಷ ಸಾಮರ್ಥ್ಯವಿರುತ್ತದೆ. ಸೋಮಾರಿಗಳಾಗದೇ ನಿರಂತರ ಶ್ರಮವಹಿಸುವ ಮೂಲಕ ಸಾಧನೆಯ ಹಾದಿ ಹಿಡಿಯಬೇಕು. ವಿಕಲಾಂಗರಾದ ಅದೆಷ್ಟೊ ಮಂದಿ ಕೆಎಎಸ್, ಐಎಎಸ್ ಸೇರಿದಂತೆ ಕ್ರಿಡಾ ಕ್ಷೆತ್ರದಲ್ಲೂ ಸಾಸಿ ದೇಶ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ ಎಂದ ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮುಗಯ್ಯ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷಎಂ. ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪಿ.ರಮೇಶ್, ಕೈಗಾರಿಕ ಉದ್ಯಮಿ ಸುರೇಶ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಆರ್.ನರಸಿಂಹ, ಎಸ್. ಮೋಹನ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಕ್ಷೇತ್ರ ಸಮನ್ವಯ ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಫಿಜಿಯೋಥೆರಪಿಸ್ಟ್ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಹ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ