ಹುಬ್ಬಳ್ಳಿ:
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಇಬ್ಬರ ಗಲಾಟೆಯಿಂದಾಗಿ ಬೇಸತ್ತು ಹೋಗಿದ್ದಾರೆ. ಮತ್ತೊಂದೆಡೆ ವಕ್ಫ್ ವಿಚಾರವಾಗಿ ಬಿಜೆಪಿ ಸಾಕಷ್ಟು ಗೊಂದಲ ಸೃಷ್ಟಿಸುತ್ತಿದೆ. ಇದರಲ್ಲಿ ಏನೂ ವಿಷಯವಿಲ್ಲದಿದ್ದರೂ ಬಿಜೆಪಿಯವರು ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ ಎಂದು ದೂರಿದರು.
ಜನರ ದಿಕ್ಕು ತಪ್ಪಿಸುತ್ತಿದೆ ಬಿಜೆಪಿ:ವಕ್ಫ್ ಕಾಯ್ದೆ ಜಾರಿ ತಂದಿದ್ದು ಕಾಂಗ್ರೆಸ್ ಅಲ್ಲ, ಇದನ್ನು ಜಾರಿಗೆ ತಂದವರು ಬ್ರಿಟಿಷರು. ಯಾವುದೇ ಆಸ್ತಿಯನ್ನು ವಕ್ಫ್ ಮಾಡಲು ಆಗುವುದಿಲ್ಲ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯಾದ್ಯಂತ ವಕ್ಫ್ ಕುರಿತು ಲೋಕ್ ಅದಾಲತ್ ಮಾಡಲು ಹೋಗಿ ಬೀದಿಯಲ್ಲಿರುವ ಕಸವನ್ನು ಮೈಮೇಲೆ ಹಾಕಿಕೊಂಡರು. ಉಪಚುನಾವಣೆ ಇದ್ದ ಹಿನ್ನೆಲೆಯಲ್ಲಿ ಈ ವಕ್ಫ್ ವಿಷಯ ಮುನ್ನಲೆಗೆ ಬಂದಿತು. ವಕ್ಫ್ ಹೆಸರಲ್ಲಿ ಜನರ ದಿಕ್ಕು ತಪ್ಪಿಸುವ ಕಾರ್ಯ ಬಿಜೆಪಿ ಮಾಡುತ್ತಿದೆ. ರಾಜ್ಯದ ಬಿಜೆಪಿ ನಾಯಕರು ಹೈಕಮಾಂಡ್, ಅಮಿತಾ ಶಾ ಅವರನ್ನು ಒಲಿಸಿಕೊಳ್ಳುವ ಸಲುವಾಗಿ ಹೈಕಮಾಂಡ್ ಎಂಬ ಹುಲಿ ಹಿಡಿಯಲು ವಕ್ಫ್ ಎಂಬ ಕುರಿ ಕಟ್ಟುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಮುಸ್ಲಿಮರನ್ನು ನಿಲ್ಲಿಸಿರುವುದರಿಂದ ನಮ್ಮ ಅಭ್ಯರ್ಥಿ ಸೋಲು ಕಾಣಬೇಕಾಯಿತು ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಇಬ್ರಾಹಿಂ, ಜೋಶಿ ಅವರೇ ಹಿಂದುತ್ವ ಕುರಿತು ಮಾತನಾಡುವುದರಿಂದ ಮತಗಳು ಬರುತ್ತವೆ ಎಂದುಕೊಂಡಿದ್ದರೆ ತಪ್ಪು. ಜನತೆಗೆ ನಿಮ್ಮ ಹಿಂದುತ್ವದ ಪದ ಕೇಳಿ ಸಾಕಾಗಿದೆ. ಇದನ್ನೆಲ್ಲ ಬಿಟ್ಟು ಮಹದಾಯಿ ಯೋಜನೆ ಕುರಿತು ಚರ್ಚಿಸಿ ಸಮಸ್ಯೆ ಪರಿಹರಿಸುವ ಕಾರ್ಯ ಮಾಡಲಿ. ಇದರಿಂದ ನಿಮಗೂ ಹಾಗೂ ರಾಜ್ಯದ ಜನತೆಗೂ ಸಹಕಾರಿಯಾಗಲಿದೆ ಎಂದರು.
ಯತ್ನಾಳರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: