ಕನ್ನಡಪ್ರಭ ವಾರ್ತೆ ವಿಜಯಪುರಭಾರತೀಯ ಜನತಾ ಪಾರ್ಟಿಯ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಸಂಘಟನಾ ಸಭೆ ನಡೆಸಲಾಯಿತು.
ಬಿಜೆಪಿಯ ಬೆಳವಣಿಗೆ ಹಾಗೂ ನರೇಂದ್ರ ಮೋದಿ ಅವರ ಜನಪ್ರಿಯತೆಯನ್ನು ಸಹಿಸದ ಕಾಂಗ್ರೆಸ್ ಮತ್ತು ಎಡಪಂಥೀಯ ಶಕ್ತಿಗಳು ಪಕ್ಷದ ವಿರುದ್ಧ ನಿರಂತರ ಅಪಪ್ರಚಾರ ಮಾಡುತ್ತಿವೆ ಎಂದು ಆರೋಪಿಸಿದರು. ಅಲ್ಲದೇ, ಚುನಾವಣಾ ಆಯೋಗವು ಸ್ವಾಯತ್ತ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿ ಕುರಿತು ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಬಗ್ಗೆಯೂ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದು ಟೀಕಿಸಿದರು.ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪಅಂಗಡಿ, ವಿಧಾನ ಪರಿಷತ್ ಮಾಜಿ ಶಾಸಕ ಅರುಣ ಶಹಾಪುರ, ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ರಮೇಶ ಭೂಸನೂರ, ಡಾ.ಸಾರ್ವಭೌಮ ಬಗಲಿ, ಮಹಾಪೌರ ಎಮ್.ಎಸ್.ಕರಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಳುಗೌಡ ಪಾಟೀಲ, ಈರಣ್ಣ ರಾವೂರ, ಸಾಬು ಮಾಶ್ಯಾಳ, ಮುಖಂಡರಾದ ಸುರೇಶ ಬಿರಾದಾರ, ವಿಜುಗೌಡ ಪಾಟೀಲ, ಉಮೇಶ ಕಾರಜೋಳ, ಸಂಜೀವ ಐಹೊಳೆ, ಚಂದ್ರಶೇಖರ ಕವಟಗಿ, ಸ್ವಪ್ನಾ ಕಣಮುಚನಾಳ, ಜಿಲ್ಲಾ ಹಾಗೂ ಮಂಡಲ ಮಟ್ಟದ ಮುಖಂಡರು, ಪದಾಧಿಕಾರಿಗಳು, ಮಹಾನಗರ ಪಾಲಿಕೆಯ ಸದಸ್ಯರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.