ಜಿಪಂ, ತಾಪಂ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಗೊಂದಲ !

KannadaprabhaNewsNetwork |  
Published : Nov 17, 2026, 01:15 AM IST
ಕಲ್ಮರುಡಪ್ಪ | Kannada Prabha

ಸಾರಾಂಶ

ಚಿಕ್ಕಮಗಳೂರುಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿ ಯಲಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಸ್ಥಳೀಯ ಮಟ್ಟದಲ್ಲಿ ಎರಡೂ ಪಕ್ಷಗಳ ಆಕಾಂಕ್ಷಿಗಳು ಮತ್ತು ಕಾರ್ಯ ಕರ್ತರಲ್ಲಿ ಗೊಂದಲ ಸೃಷ್ಟಿಸಿದೆ.

- ಡಿಸೆಂಬರ್ / ಜನವರಿಯಲ್ಲಿ ನಡೆಸುವ ಭರವಸೆ । ಚುನಾವಣಾ ಅಧಿಸೂಚನೆ ಹೊರಡಿಸು ವುದಷ್ಟೇ ಬಾಕಿ

ವಿಶ್ವನಾಥ ಮಲೇಬೆನ್ನೂರು

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿ ಯಲಿದೆಯೇ ಎಂಬ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಸ್ಥಳೀಯ ಮಟ್ಟದಲ್ಲಿ ಎರಡೂ ಪಕ್ಷಗಳ ಆಕಾಂಕ್ಷಿಗಳು ಮತ್ತು ಕಾರ್ಯ ಕರ್ತರಲ್ಲಿ ಗೊಂದಲ ಸೃಷ್ಟಿಸಿದೆ.

ರಾಜ್ಯ ಸರ್ಕಾರ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ನಡೆಸು ವುದಾಗಿ ಭರವಸೆ ನೀಡಿದ್ದು, ಈಗಾಗಲೇ ಕ್ಷೇತ್ರ ಮರುವಿಂಗಡಣೆ ಹಾಗೂ ಕ್ಷೇತ್ರವಾರು ಮೀಸಲಾತಿ ಹಂಚಿಕೆ ಮಾಡಿ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತ ದಾರರ ಪಟ್ಟಿಯನ್ನೂ ಪ್ರಕಟಿಸಲಾಗಿದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಅಧಿಸೂಚನೆ ಹೊರಡಿಸು ವುದಷ್ಟೇ ಬಾಕಿ ಉಳಿದಿದೆ.ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಆಕಾಂಕ್ಷಿಗಳು ಚುನಾ ವಣೆಗೆ ಸ್ಪರ್ಧಿಸಲು ಸಿದ್ಧತೆ ಆರಂಭಿಸಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಯನ್ನು ಚುರುಕುಗೊಳಿಸುತ್ತಿದ್ದಾರೆ. ಆದರೆ, ಕಳೆದ ಲೋಕಸಭೆ ಚುನಾವಣೆಯಿಂದ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮುಂದುವರಿಯಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ.ಮೈತ್ರಿ ಮುಂದುವರಿಯುವ ಬಗ್ಗೆ ಎರಡೂ ಪಕ್ಷಗಳ ವರಿಷ್ಠರಿಂದ ಸ್ಪಷ್ಟ ಸೂಚನೆ ಇಲ್ಲದಿರುವುದು ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮೈತ್ರಿ ಮುಂದುವರಿದರೆ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರಗಳು ಸಿಗಲಿವೆ, ತಮ್ಮ ಕ್ಷೇತ್ರದಲ್ಲಿ ಯಾರಿಗೆ ಸ್ಪರ್ಧಿಸಲು ಅವಕಾಶ ದೊರೆಯಲಿದೆ ಎಂಬ ಲೆಕ್ಕಾಚಾರದಲ್ಲಿರುವ ಆಕಾಂಕ್ಷಿಗಳಿಗೆ ಸದ್ಯಕ್ಕೆ ಸ್ಪಷ್ಟ ಉತ್ತರ ಸಿಗುತ್ತಿಲ್ಲ.ಕಾಂಗ್ರೆಸ್‌ನಲ್ಲಿ ಸ್ಪಷ್ಟತೆ, ಎನ್‌ಡಿಎಯಲ್ಲಿ ಮಸುಕು:ಜಿಪಂ ಮತ್ತು ತಾಪಂ ಕ್ಷೇತ್ರಗಳಿಂದ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಲ್ಲಿ ತುಸು ಸ್ಪಷ್ಟತೆ ಕಂಡುಬರುತ್ತಿದೆ. ಅದಕ್ಕೆ ತಕ್ಕಂತೆ ಪಕ್ಷದ ಕಾರ್ಯಕರ್ತರು, ಮುಖಂಡರು ಸದ್ದಿಲ್ಲದೆ ಚುನಾವಣಾ ಸಿದ್ಧತೆ ಆರಂಭಿಸಿದ್ದಾರೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಒಳಗೊಂಡ ಎನ್‌ಡಿಎ ಮೈತ್ರಿಕೂಟದಲ್ಲಿ ಚುನಾವಣಾ ಸ್ಪರ್ಧೆ ಕುರಿತು ಕೆಳಮಟ್ಟದ ಕಾರ್ಯಕರ್ತರಿಗೆ ಈವರೆಗೆ ಸ್ಪಷ್ಟ ಸಂದೇಶ ರವಾನೆಯಾಗಿಲ್ಲ. ಇದರಿಂದ ಎರಡೂ ಪಕ್ಷಗಳ ಸ್ಥಳೀಯ ಘಟಕಗಳಲ್ಲಿ ಗೊಂದಲ ಮುಂದುವರಿದಿದೆ.ಮೈತ್ರಿ ಬೇಕು, ಬೇಡ ಎಂಬ ಎರಡೂ ವಾದ ಸ್ಥಳೀಯ ಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯ ಕರ್ತರಲ್ಲಿ ಮೈತ್ರಿ ಪರ ಮತ್ತು ವಿರೋಧದ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.ಮೈತ್ರಿ ಬೇಕು ಎನ್ನುವವರ ಪ್ರಕಾರ, ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸು ವುದರಿಂದ ಮುಂಬರುವ ವಿಧಾನಸಭಾ ಚುನಾವಣೆಗೆ ಭದ್ರ ಬುನಾದಿ ಹಾಕಿದಂತಾಗುತ್ತದೆ. ಎರಡೂ ಪಕ್ಷಗಳ ಕಾರ್ಯ ಕರ್ತರ ನಡುವೆ ಹೊಂದಾಣಿಕೆ ಮತ್ತು ಪರಸ್ಪರ ವಿಶ್ವಾಸ ವೃದ್ಧಿಯಾಗುವ ಜತೆಗೆ ಮೈತ್ರಿ ರಾಜಕಾರಣ ತಳಮಟ್ಟದಲ್ಲಿ ಬಲಪಡಿಸಲು ಸಹಕಾರಿಯಾಗಲಿದೆ ಎಂಬುದು ಅವರ ವಾದ.ಇನ್ನೊಂದೆಡೆ, ಮೈತ್ರಿ ಬೇಡ ಎನ್ನುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸ ಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಮೈತ್ರಿಯಿಂದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಆಕಾಂಕ್ಷಿಗಳಿಗೆ ಸ್ಪರ್ಧಿಸಲು ಅವ ಕಾಶ ಕಡಿಮೆಯಾಗಲಿದೆ. ಲೋಕಸಭೆ, ವಿಧಾನಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳಲ್ಲಿ ಮೈತ್ರಿ ಇರಲಿ. ಆದರೆ, ಜಿಪಂ, ತಾಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಮೈತ್ರಿ ಬೇಡ. ಪ್ರತ್ಯೇಕವಾಗಿ ಸ್ಪರ್ಧಿಸುವುದರಿಂದ ಎರಡೂ ಪಕ್ಷಗಳ ಸಂಘಟನೆ ಮತ್ತು ಬೆಳವಣಿಗೆಗೆ ಅನುಕೂಲವಾಗಲಿದೆ ಎಂಬುದು ಅವರ ಅಭಿಪ್ರಾಯ.ಹೀಗಾಗಿ ಮೈತ್ರಿ ಪರ-ವಿರೋಧದ ಚರ್ಚೆಗಳು ಸ್ಥಳೀಯ ಮಟ್ಟದಲ್ಲಿ ನಡೆಯುತ್ತಿದ್ದು, ವರಿಷ್ಠರ ನಿರ್ಧಾರಕ್ಕಾಗಿ ಆಕಾಂಕ್ಷಿಗಳು ಮತ್ತು ಕಾರ್ಯಕರ್ತರು ಕಾಯುವಂತಾಗಿದೆ.-- ಬಾಕ್ಸ್--ಜಿಪಂ, ತಾಪಂ ನಿಜಕ್ಕೂ ಚುನಾವಣೆ ನಡೆಯುತ್ತಾ?ಈಗಾಗಲೇ ಒಂದು ಅವಧಿಯನ್ನು ಮುಂದೂಡಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ರಾಜ್ಯ ಸರ್ಕಾರ ಈ ಬಾರಿಯಾದರೂ ನಡೆಸಲಿದೆಯೇ ಎಂಬ ಅನುಮಾನ ಸ್ಥಳೀಯ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ. ಕ್ಷೇತ್ರ ಮರುವಿಂಗಡಣೆ ಮತ್ತು ಮೀಸಲಾತಿ ಪ್ರಕಟಿಸಿರುವುದು ಚುನಾವಣೆಗೆ ಮುನ್ನುಡಿಯೇ ಅಥವಾ ಕೇವಲ ಕಣ್ಣೊರೆಸುವ ತಂತ್ರವೇ ಎಂಬ ಪ್ರಶ್ನೆಯೂ ಕೇಳಿಬರುತ್ತಿದೆ.ಇತ್ತೀಚೆಗೆ ನಡೆದ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸೋಲು ಕಂಡಿರುವ ಹಿನ್ನೆಲೆಯಲ್ಲಿ, ಆಡಳಿತ ವಿರೋಧಿ ಅಲೆ ನಡುವೆಯೇ ರಾಜ್ಯ ಸರ್ಕಾರ ಜಿಪಂ ಮತ್ತು ತಾಪಂ ಚುನಾವಣೆ ನಡೆಸಲು ಮುಂದಾಗಲಿದೆಯೇ ಎಂಬ ಚರ್ಚೆ ನಡೆಯುತ್ತಿದೆ. ಚುನಾವಣಾ ಸಿದ್ಧತೆಗಳ ಪ್ರಕ್ರಿಯೆ ಮುಂದುವರಿದಿದ್ದರೂ, ಸರ್ಕಾರದ ಅಂತಿಮ ನಿರ್ಧಾರದ ಬಗ್ಗೆ ಸ್ಪಷ್ಟತೆ ಇಲ್ಲದಿರುವುದು ಅನುಮಾನಗಳಿಗೆ ಕಾರಣವಾಗಿದೆ.-- ಬಾಕ್ಸ್--ಕೇಂದ್ರದ ಅನುದಾನ ಪಡೆಯಲು ರಾಜ್ಯಕ್ಕೆ ಸ್ಥಳೀಯ ಚುನಾವಣೆ ಅನಿವಾರ್ಯಕೇಂದ್ರ ಸರ್ಕಾರದ 16ನೇ ಹಣಕಾಸು ಆಯೋಗದ ಶಿಫಾರಸಿನಡಿ ರಾಜ್ಯಕ್ಕೆ ಬರಬೇಕಾದ ಅನುದಾನ ಪಡೆಯಲು ಸ್ಥಳೀಯ ಸಂಸ್ಥೆಗಳ ಚುನಾವಣೆ ಮಹತ್ವದ್ದಾಗಿದೆ. ಜಿಪಂ, ತಾಪಂ ಹಾಗೂ ಗ್ರಾಪಂಗಳಿಗೆ ಚುನಾಯಿತ ಪ್ರತಿನಿಧಿಗಳ ವ್ಯವಸ್ಥೆ ಇಲ್ಲ ದಿದ್ದರೆ ಕೇಂದ್ರದ ಅನುದಾನ ಹಂಚಿಕೆ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಚುನಾವಣೆ ನಡೆಸದಿದ್ದರೆ ರಾಜ್ಯಕ್ಕೆ ಬರಬೇಕಾದ ಸಾವಿರಾರು ಕೋಟಿ ಅನುದಾನ ಸ್ಥಗಿತಗೊಳ್ಳುವ ಆತಂಕವಿದೆ. ಹೀಗಾಗಿ ಕೇಂದ್ರದ ಅನುದಾನ ಪಡೆವ ದೃಷ್ಟಿಯಿಂದಲಾದರೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ರಾಜ್ಯ ಸರ್ಕಾರಕ್ಕೆ ಅನಿವಾರ್ಯ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.----ಕೋಟ್‌----

ಜಿಪಂ, ತಾಪಂಗೆ ಸಮನ್ವಯ ಸಮಿತಿಗಳನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಮಾಡಿ ಸಮಸ್ಯೆ ಪರಿಹಾರ ಮಾಡಲಿದ್ದಾರೆ. ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಹೊಂದಾಣಿಕೆಯೊಂದಿಗೆ ಜಿಪಂ, ತಾಪಂ ಚುನಾವಣೆ ಎದುರಿಸು ವುದು ಸೂಕ್ತ. ಇದರಿಂದ ಎಲ್ಲ ಕಾರ್ಯಕರ್ತರಿಗೆ ಅವಕಾಶ ದೊರೆಯುವುದಿಲ್ಲ. ಆದರೆ, ಚುನಾವಣೆಯಲ್ಲಿ ಗೆಲ್ಲುವುದು ಸಾಧಿಸು ವುದು ಬಹು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಹಿರಿಯ ಮುಖಂಡರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

- ರಂಜನ್‌ ಅಜಿತ್‌ ಕುಮಾರ್‌, ಜಿಲ್ಲಾಧ್ಯಕ್ಷರು, ಜೆಡಿಎಸ್‌ ಚಿಕ್ಕಮಗಳೂರು (ಫೋಟೋ ಇದೆ)-- ಕೋಟ್‌--

ಜಿಪಂ, ತಾಪಂ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್‌ ಹೊಂದಾಣಿಕೆ ಮುಂದುವರೆಯುವ ಸಾಧ್ಯತೆ ಇದೆ. ಈ ಬಗ್ಗೆ ಅಂತಿಮವಾಗಿ ಬಿಜೆಪಿ ಹೈಕಮಾಂಡ್‌ ನಿರ್ಧಾರ ಮಾಡಲಿದೆ. ಅದರಂತೆ ಚುನಾವಣೆ ಎದುರಿಸಲಾಗುವುದು.

- ಕಲ್ಮರುಡಪ್ಪ, ಪ್ರಧಾನ ಕಾರ್ಯದರ್ಶಿ, ಬಿಜೆಪಿ ರಾಜ್ಯ ರೈತ ಮೋರ್ಚಾ (ಪೋಟೋ ಇದೆ)

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಐಎನಲ್ಲಿ ₹13 ಕೋಟಿಯ ಡ್ರಗ್ಸ್‌ ಜಪ್ತಿ
ಮಾರತಹಳ್ಳೀಲಿ ಕೊಡಲಿಯಿಂದ ಕೊಚ್ಚಿ ಪತ್ನಿಯನ್ನೇ ಕೊಂದ ಗಂಡ