ಕ್ರೆಡಿಲ್ ನಿರ್ದೇಶಕ ಕೆ.ಆರ್.ನಾಗೇಶ್‌ಗೆ ಅಭಿನಂದನೆ

KannadaprabhaNewsNetwork |  
Published : Nov 24, 2026, 12:30 AM IST
01 | Kannada Prabha

ಸಾರಾಂಶ

ದೇವನಹಳ್ಳಿ: ಸರಕಾರ ಇತ್ತೀಚೆಗಷ್ಟೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತಕ್ಕೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಕೆ.ಆರ್.ನಾಗೇಶ್ ಅವರನ್ನು ಸರಕಾರ ನಿರ್ದೇಶಕರಾಗಿ ಆಯ್ಕೆ ಮಾಡಿದ್ದು ದೇವನಹಳ್ಳಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು

ದೇವನಹಳ್ಳಿ: ಸರಕಾರ ಇತ್ತೀಚೆಗಷ್ಟೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತಕ್ಕೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮದ ಕೆ.ಆರ್.ನಾಗೇಶ್ ಅವರನ್ನು ಸರಕಾರ ನಿರ್ದೇಶಕರಾಗಿ ಆಯ್ಕೆ ಮಾಡಿದ್ದು ಅರನ್ನು ದೇವನಹಳ್ಳಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಕಾಂಗ್ರೇಸ್ ಮುಖಂಡರು ಅಭಿನಂದಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್ ಮಾತನಾಡಿ ಕೆ.ಆರ್.ನಾಗೇಶ್ ಅವರು ಯೂತ್ ಕಾಂಗ್ರೇಸ್ ರಾಜ್ಯ ಕಾರ್ಯದರ್ಶಿಯಗಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅದನ್ನು ಗುರುತಿಸಿ ಸರಕಾರ ಕ್ರೆಡಿಲ್ ನಿರ್ದೇಶಕರಾಗಿ ಆಯ್ಕೆ ಮಾಡಿದ್ದಾರೆ. ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಲಿ ಎಂದರು.

ಕ್ರೆಡಿಲ್ ನಿರ್ದೇಶಕ ಕೆ.ಆರ್.ನಾಗೇಶ್ ಮಾತನಾಡಿ, ಯೂತ್ ಕಾಂಗ್ರೇಸ್‌ನಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದನ್ನು ಗುರುತಿಸಿ ಮಾನ್ಯ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಕೆ.ಎಚ್.ಮುನಿಯಪ್ಪನವರು ರಾಜ್ಯಮಟ್ಟದಲ್ಲಿ ಕ್ರೆಡಿಲ್‌ನಲ್ಲಿ ನಿರ್ದೇಶಕ ಸ್ಥಾನವನ್ನು ನೀಡಿದ್ದಾರೆ ಅವರು ನನಗೆ ದೊಡ್ಡ ಜವಬ್ದಾರಿಯನ್ನು ನೀಡಿದ್ದಾರೆ, ತಾಲೂಕು ಮಟ್ಟದಲ್ಲಿ ಕೆಲಸ ಮಾಡುತ್ತಿದ್ದೆ ಆದರೆ ಈಗ ರಾಜ್ಯಾದ್ಯಂತ ಸರಕಾರದ ಜೊತೆ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ನನಗೆ ನೀಡಿರುವ ಜವಬ್ದಾರಿಯನ್ನು ಅರಿತು ಸಾರ್ವಜನಿಕರ ಒಳಿತಿಗಾಗಿ ಕೆಲಸ ಮಾಡುತ್ತೇನೆ. ಮುಂಬರುವ ಸ್ಥಳಿಯ ಸಂಸ್ಥೆಗಳ ಚುನಾವಣೆಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುವುದು ಎಂದರು.

ಜಿಲ್ಲಾ ಪಂಚಾಯತಿಗೆ ಸ್ಥಾನಕ್ಕೆ ಅನೇಕರು ಆಕಾಂಕ್ಷಿಗಳಿದ್ದಾರೆ ಅದರಲ್ಲಿ ನಾನು ಒಬ್ಬ ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸುತ್ತೇನೆ ಇಲ್ಲವಾದರೆ ಮತ್ತೊಬ್ಬರಿಗೆ ಅವಕಾಶ ಸಿಗುವುದಾದರೆ ಬಿಟ್ಟುಬಿಡುತ್ತೇನೆ. ಎಲ್ಲರಿಗೂ ಅವಕಾಶ ಕಲ್ಪಿಸಿದಾಗ ಮಾತ್ರ ಪಕ್ಷ ಬೆಳೆಯುವುದರ ಜೊತೆಗೆ ಸಂಘಟನೆಯಾಗಲಿದೆ ಎಂದರು.

ಇದೆ ವೇಳೆ ಕೆಪಿಸಿಸಿ ಸದಸ್ಯ ಚಿನ್ನಪ್ಪ ಯೂತ್ ಕಾಂಗ್ರೇಸ್‌ನ ಸಾಗರ್,ಮುನಿರಾಜು, ಮುಖಂಡರು ಮತ್ತಿತರರು ಇದ್ದರು.

೨೩ ದೇವನಹಳ್ಳಿ ಚಿತ್ರಸುದ್ದಿ:೦೧ ಕ್ರೆಡಿಲ್ ನಿರ್ದೇಶಕ ಕೆ.ಆರ್.ನಾಗೇಶ್‌ಗೆ ದೇವನಹಳ್ಳಿ ಪ್ರವಾಸಿಮಂದಿರದಲ್ಲಿ ಕಾಂಗ್ರೇಸ್ ಮುಖಂಡರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಪಿಎಂಸಿಯಲ್ಲಿ ರೈತರಿಂದ ಕಮಿಷನ್ ವಸೂಲಿ ಮಾಡುವಂತಿಲ್ಲ
ಕನ್ನಡಕ್ಕೆ ನುಡಿದಂತೆ ಬರೆಯುವ, ಬರೆದಂತೆ ನುಡಿವ ಅದ್ಭುತ ಶಕ್ತಿ