ಕನ್ನಡಪ್ರಭ ವಾರ್ತೆ ಮೈಸೂರುವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡರು ಸರಳ, ಸಜ್ಜನ ವ್ಯಕ್ತಿಯಾಗಿದ್ದು, ಜನಸಾಮಾನ್ಯರಿಗೆ ಸದಾ ಸೇವೆ ಮಾಡಿಕೊಂಡು ಎರಡು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರ ಸೇವೆಯಲ್ಲಿ ಇನ್ನೂ ಹೆಚ್ಚು ತೊಡಗಿಸಿಕೊಳ್ಳಲು ಚಾಮುಂಡೇಶ್ವರಿ ತಾಯಿ ಆರೋಗ್ಯ, ಆಯುಷ್ಯು, ಶಕ್ತಿ ನೀಡಲಿ ಎಂದು ಮಾಜಿ ಸಚಿವ ಸಾ.ರಾ. ಮಹೇಶ್ ಹೇಳಿದರು.ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ ಅವರ 61ನೇ ಹುಟ್ಟುಹಬ್ಬದ ಅಂಗವಾಗಿ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಂಜೇಗೌಡರನ್ನು ಫೋನಿನ ಮೂಲಕ ಅಭಿನಂದಿಸಿದ್ದಾರೆ. ನಾವು ಸಹ ಪಕ್ಷದ ವತಿಯಿಂದ ಅಭಿನಂದಿಸುತ್ತಿದ್ದೇವೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿಯ ಸಮ್ಮಿಶ್ರ ಸರ್ಕಾರ ಬರಲಿದೆ. ಬೆಲೆ ಏರಿಕೆಯಿಂದ ಬೇಸತ್ತಿರುವ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ. ಕುಮಾರಣ್ಣನವರು ಕೇಂದ್ರ ಸಚಿವರಾಗಿ ಯಶಸ್ವಿಯಾಗಿ ಕೆಲಸ ಮಾಡುತ್ತಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ರಾಜ್ಯಾದ್ಯಾಂತ ಪ್ರವಾಸ ಮಾಡುತ್ತಿದ್ದಾರೆ. ಅವರನ್ನು ಜೆ.ಡಿ.ಎಸ್. ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಕುಮಾರಣ್ಣನವರಿಗೆ, ದೇವೇಗೌಡರಿಗೆ ಒತ್ತಡ ಹಾಕುತ್ತಿದ್ದೇವೆ ಎಂದರು.ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಮಾತನಾಡಿ, ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಜೆಡಿಎಸ್ ಹಾಗೂ ಸಾ.ರಾ. ಮಹೇಶಣ್ಣರವರ ಆಶೀರ್ವಾದದಿಂದ ನಾನು ಎಂ.ಎಲ್.ಸಿ. ಯಾಗಿ ಜನರ ಸೇವೆ ಸಲ್ಲಿಸುತ್ತಿದ್ದೇನೆ ಎಂದು ಜಿಲ್ಲೆಗಳ ಮುಖಂಡರು ನನ್ನ ಮೇಲಿನ ಪ್ರೀತಿಯಿಂದ ಬಂದು ಶುಭ ಹಾರೈಸಿದ್ದಾರೆ. ಎಚ್.ಡಿ. ದೇವೇಗೌಡರು ನಮಗೆ ಸ್ಪೂರ್ತಿಯಾಗಿದ್ದಾರೆ. ಕುಮಾರಣ್ಣನವರು 2028ಕ್ಕೆ ಮುಖ್ಯಮಂತ್ರಿಯಾಗಬೇಕು ಎನ್ನುವುದು ನನ್ನ ಅಭಿಲಾಷೆಯಾಗಿದೆ ಎಂದು ಅಭಿನಂದಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. ಅಭಿಮಾನಿಗಳು ಮಂಜೇಗೌಡರಿಗೆ ಸೇಬಿನ ಹಾರ, ದೊಡ್ಡ ದೊಡ್ಡ ಹೂವಿನಹಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಮಾಜಿ ಶಾಸಕ ಎಂ. ಅಶ್ವಿನ್ ಕುಮಾರ್, ಡಾ. ನೇಮಿಚಂದ್ರ, ಜಿಪಂ ಮಾಜಿ ಸದಸ್ಯ ಸಿ.ಜೆ. ದ್ವಾರಕೀಶ್, ಮಾಜಿ ಮೇಯರ್ ಲಿಂಗಪ್ಪ, ನಗರಪಾಲಿಕೆ ಮಾಜಿ ಸದಸ್ಯೆ ಪ್ರೇಮಾಶಂಕರೇಗೌಡ, ಮುಖಂಡರಾದ ಭರತ್ ಮಂಜೇಗೌಡ, ಅಪೆಕ್ಸ್ ಶ್ರೀನಿವಾಸ್, ನಿವೃತ್ತ ಯೋಧರ ಸಂಘದ ಜಿಲ್ಲಾ ಅಧ್ಯಕ್ಷ ದಿವಾಕರ್, ಸಿ.ಬಿ. ಲೋಕೇಶ್, ಅಮ್ಮ ಸಂತೋಷ್, ತಾಂಡವಪುರ ಶಿವಣ್ಣ, ಶ್ರೀರಾಂಪುರ ಗ್ರಾಪಂ ಮಾಜಿ ಅಧ್ಯಕ್ಷ ರಮೇಶ್, ರಾಘವೇಂದ್ರ, ಮಹಾದೇವ್, ನೂರಾರು ಅಭಿಮಾನಿಗಳು ಭಾಗವಹಿಸಿದ್ದರು.