ದಾಬಸ್‍ಪೇಟೆ: ನೆಲಮಂಗಲ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ನೇಮಕವಾಗಿರುವ ಸೋಂಪುರ ಹೋಬಳಿಯ ಅಗಳಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ ಅಂಚೆಮನೆ ಪ್ರಕಾಶ್ ಅವರನ್ನು ಕಾಂಗ್ರೆಸ್ ಮುಖಂಡರು ಅಭಿನಂದಿಸಿ ಶುಭಕೋರಿದರು.
ನೂತನ ಎನ್‌ಪಿಎ ಸದಸ್ಯ ಅಂಚೆಮನೆ ಪ್ರಕಾಶ್ ಮಾತನಾಡಿ, ನಮ್ಮ ತಂದೆಯ ಕಾಲದಿಂದಲೂ ನಾವು ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡು ಸಂಘಟನೆ ಮಾಡಿದ್ದಕ್ಕೆ ಈ ಜವಾಬ್ದಾರಿ ಲಭಿಸಿದೆ. ವಿಶೇಷವಾಗಿ ನಮ್ಮ ಕ್ಷೇತ್ರದ ಶಾಸಕ ಎನ್.ಶ್ರೀನಿವಾಸ್ ಹಾಗೂ ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು ಸಹಕಾರದಿಂದ ಈ ಸ್ಥಾನ ದೊರೆತಿದೆ. ನೂತನ ಅಧ್ಯಕ್ಷರಿಗೆ ಸಹಕರಿಸುತ್ತ ನಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಪ್ರಾಧಿಕಾರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ಮುಖಂಡ ಅಗಳಕುಪ್ಪೆ ಗೋವಿಂದರಾಜು ಮಾತನಾಡಿ, ಕ್ಷೇತ್ರದ ಶಾಸಕರು ಅಧಿಕಾರ ವಿಕೇಂದ್ರೀಕರಣಕ್ಕೆ ಒತ್ತು ನೀಡಿ ಕ್ಷೇತ್ರದ ಎಲ್ಲಾ ಭಾಗಕ್ಕೂ ಸಮಾನ ಅವಕಾಶ ನೀಡಿದ್ದಾರೆ. ಇದೀಗ ನಮ್ಮ ಹೋಬಳಿಯ ಅಂಚೆಮನೆ ಪ್ರಕಾಶ್ ನೇಮಕ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷವನ್ನುಂಟು ಮಾಡಿದೆ. ಪಕ್ಷಕ್ಕಾಗಿ ದುಡಿದವರಿಗೆ ಉತ್ತಮ ಅವಕಾಶ ಸಿಗುತ್ತದೆ ಎನ್ನುವುದಕ್ಕೆ ಇವರೇ ಸಾಕ್ಷಿ ಎಂದು ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ಅಂಚೆಮನೆ ಶಿವಕುಮಾರ್ ಮಾತನಾಡಿ, ಪಕ್ಷದ ಸಂಘಟನೆಗೆ ನಮ್ಮ ಶಾಸಕರು ಹೊಸ ಜವಾಬ್ದಾರಿ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮಾಜಕ್ಕೆ ವಿಶೇಷ ಪ್ರಾತಿನಿಧ್ಯ ನೀಡಿ ಗುರುತಿಸಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ಹೋಬಳಿಯ ಮುಖಂಡರಿಗೂ ಎನ್‌ಪಿಎ ಅಧ್ಯಕ್ಷ ಸ್ಥಾನವನ್ನು ನೀಡುವಂತೆ ಶಾಸಕರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.ನೂತನ ಎನ್ ಪಿಎ ಸದಸ್ಯರನ್ನು ಮುಖಂಡರಾದ ಯೋಗಾನಂದೀಶ್, ನಾರಾಯಣಸ್ವಾಮಿ, ಡೈರಿ ಕಾರ್ಯದರ್ಶಿ ಕುಮಾರಸ್ವಾಮಿ, ಪಾರ್ಥ, ಚಂದ್ರಶೇಖರ್, ಗಂಗಾಧರ್, ಸುರೇಶ್, ಚಿಕ್ಕಣ್ಣ ಇತರರು ಅಭಿನಂದಿಸಿದರು.
ಪೆÇೀಟೋ 5 :ನೆಲಮಂಗಲ ಯೋಜನಾ ಪ್ರಾಧಿಕಾರದ ನೂತನ ಸದಸ್ಯ ಅಂಚೆಮನೆ ಪ್ರಕಾಶ್ ಅವರನ್ನು ಕಾಂಗ್ರೆಸ್ ಮುಖಂಡರಾದ ಅಗಳಕುಪ್ಪೆ ಗೋವಿಂದರಾಜು, ಗ್ರಾಪಂ ಮಾಜಿ ಅಧ್ಯಕ್ಷ ಶಿವಕುಮಾರ್ ಹಾಗೂ ಕಾರ್ಯಕರ್ತರು ಅಭಿನಂದಿಸಿದರು.