ಕಾಪು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ವತಿಯಿಂದ 2025 - 26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳನ್ನು ಗಳಿಸಿದ ಮತ್ತು ರಾಜ್ಯಮಟ್ಟದಲ್ಲಿ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳ ಅಭಿನಂದಾ ಕಾರ್ಯಕ್ರಮ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು.ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ ಕನ್ನಡ ನಾಡು, ನುಡಿ, ಸಂಸ್ಕೃತಿ ಉಳಿಸಲು ಉಡುಪಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ. ಧಾರ್ಮಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯ ಜೊತೆಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರತಿಸಿಕೊಳ್ಳುವಲ್ಲಿ ಕರಾವಳಿ ಜನರ ಆತಿಥ್ಯದ ಗುಣವೇ ಕಾರಣವಾಗಿದೆ ಎಂದರು.ಕಾರ್ಯಕ್ರಮವನ್ನು ದ.ಕ ಮೊಗವೀರ ಹಿತಸಾಧನಾ ವೇದಿಕೆಯ ಅಧ್ಯಕ್ಷ ಸತೀಶ್ ಆರ್. ಸಾಲಿಯಾನ್ ಉದ್ಘಾಟಿಸಿ ಮಾತನಾಡಿ, ಇಂದು ಭಾಷಾಭಿಮಾನ ಮೂಡಿಸುವುದು ಅತ್ಯಗತ್ಯವಾಗಿದೆ. ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ನಾವೇ ಕೈಜೋಡಿಸಬೇಕಾಗಿದೆ. ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಪೂರ್ಣ ಸಹಕಾರ ನೀಡಲಾಗುವುದು ಎಂದರು.ಈ ಸಂದರ್ಭ ಕಾಪು ತಾಲೂಕು ವ್ಯಾಪ್ತಿಯ ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳಿಸಿದ 46 ಮತ್ತು ರ್‍ಯಾಂಕ್ ವಿಜೇತ 4 ವಿದ್ಯಾರ್ಥಿಗಳನ್ನು, ಅವರ ಕನ್ನಡ ಭಾಷಾ ಶಿಕ್ಷಕರೊಂದಿಗೆ ಅಭಿನಂದಿಸಲಾಯಿತು.
ಸಂಚಾಲಕ ಕೃಷ್ಣಕುಮಾರ್ ರಾವ್ ಮಟ್ಟು ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ನೀಲಾನಂದ ನಾಯ್ಕ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ವಂದಿಸಿದರು.