ನಾಳೆ ಶಾಮನೂರು ಶಿವಶಂಕರಪ್ಪಗೆ ಅಭಿನಂದನೆ

KannadaprabhaNewsNetwork |  
Published : Jul 04, 2025, 12:32 AM IST
3ಸಿಎಚ್‌ಎನ್‌54ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಅವರು ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ಹಾಗೂ ತಾಲೂಕು ಘಟಕಗಳ ವತಿಯಿಂದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜು.5ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ಹಾಗೂ ತಾಲೂಕು ಘಟಕಗಳ ವತಿಯಿಂದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜು.5ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10 ಗಂಟೆಗೆ ನಗರದ ಶ್ರೀಶಿವಕುಮಾರಸ್ವಾಮಿ ಭವನದಲ್ಲಿ ನಡೆಯುವ ಸಮಾರಂಭದ ಸಾನಿಧ್ಯವನ್ನು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸಲಿದ್ದು, ಹರವೆ ವಿರಕ್ತ ಮಠದ ಸರ್ಪಭೂಷಣ ಸ್ವಾಮೀಜಿ, ಚಾಮರಾಜನಗರದ ಸಿದ್ದಮಲ್ಲೇಶ್ವರ ವಿರಕ್ತ ಮಠದ ಚೆನ್ನಬಸವ ಸ್ವಾಮೀಜಿ, ಮರಿಯಾಲ ಮಠದ ಇಮ್ಮಡಿ ಮುರುಘರಾಜೇಂದ್ರಸ್ವಾಮೀಜಿ ಅವರ ದಿವ್ಯ ಸಮ್ಮುಖದಲ್ಲಿ ಸಮಾರಂಭ ನಡೆಯಲಿದೆ ಎಂದರು.

ಕಾರ್ಯಕ್ರಮವನ್ನು ಅರಣ್ಯ ಸಚಿವ ಹಾಗೂ ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ವಿ.ಸೋಮಣ್ಣ ಅವರು ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಶ್ರೀ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್‌ಮಹಾದೇವ ಬಿದರಿ, ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಸಪ್ಪನವರ್, ಸಂಸದ ಸುನೀಲ್ ಬೋಸ್, ಶಾಸಕರಾದ ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್.ಮಂಜುನಾಥ್, ಮಾಜಿ ಶಾಸಕರಾದ ವಾಟಾಳ್ ನಾಗರಾಜ್, ಪರಿಮಳಾನಾಗಪ್ಪ, ಸಿ.ಎಸ್.ನಿರಂಜನ್ ಕುಮಾರ್, ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ಇತರರು ಭಾಗವಹಿಸಲಿದ್ದಾರೆ ಎಂದರು.

ಸಾಧಕರಾದ ಸಾಲೂರು ಮಠದ ಡಾ. ಶ್ರೀ ಶಾಂತಮಲ್ಲಿಕಾರ್ಜುನಸ್ವಾಮೀಜಿ, ಅಂತರರಾಷ್ಟ್ರೀಯ ಖೋ ಖೋ ಕ್ರೀಡಾಪಟು ಚೈತ್ರಾ ಕುರುಬೂರು, ಸಾಹಿತಿ ಸ್ವಾಮಿ ಪೊನ್ನಾಚಿ, ಶಿಕ್ಷಕಿ ಅನಿತಾ, ಎಂ.ಪಿ. ರಾಜಣ್ಣ, ಡಾ.ಯೋಗೇಶ್, ಶಶಿಕಲಾ ಕೆ.ಜಿ. ಪ್ರಕಾಸ್ ಪುಟ್ಟಪ್ಪ, ಶಿವಾನಿ, ಹಾಗೂ ರೈತ ವರನನ್ನು ಮದುವೆಯಾದ ಎಂಜಿನಿಯರ್ ಪದವೀಧರೆ ಹಿಮ್ಮಾವು ಯೋಗೇಶ್ವರಿ ದಂಪತಿಯನ್ನು ಸನ್ಮಾನಿಸಲಾಗುತ್ತದೆ ಎಂದರು.

ಈ ಕಾರ್ಯಕ್ರಮಕ್ಕೆ ವೀರಶೈವ ಲಿಂಗಾಯತ ಸಮಾಜದ ಬಂಧುಗಳು ಹಾಗೂ ಮಹಾಸಭಾದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೋರುತ್ತೇವೆ.

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಜ್ಯ ಸಮಿತಿ ಸದಸ್ಯ ಸುಜೇಂದ್ರ ಕಿಲಗೆರೆ, ನಿರ್ದೇಶಕರಾದ ಬಿಸಲವಾಡಿ ಉಮೇಶ್, ಯು.ಪಿ.ರಾಜೇಂದ್ರ ಪ್ರಸಾದ್, ಕೆ.ವೀರಭದ್ರಸ್ವಾಮಿ, ರತ್ನಮ್ಮಬಸವರಾಜು, ಗಾಯಿತ್ರಿ ಇದ್ದರು.

PREV

Recommended Stories

ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನೆ
ಪ್ಲಾನಿಂಗ್‌ ಆ್ಯಂಡ್ ಆರ್ಕಿಟೆಕ್ಚರ್‌ ಸ್ಕೂಲ್‌ ಆರಂಭಕ್ಕೆ ಸಿದ್ಧತೆ: ಡಿಕೆಶಿ