ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ

KannadaprabhaNewsNetwork |  
Published : Feb 21, 2026, 02:45 AM IST
ಕಟಪಾಡಿ ಎಸ್.ವಿ.ಎಸ್.ಪ.ಪೂ.ಕಾಲೇಜಿನಲ್ಲಿ ಕಟಪಾಡಿ - ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ತಾಲೂಕು ಘಟಕದ ವತಿಯಿಂದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸನ್ಮಾನ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ಪೋಷಕರಿಗೆ ಅಭಿನಂದನಾ ಕಾರ್‍ಯಕ್ರಮ ಇಲ್ಲಿನ ಕಟಪಾಡಿ ಎಸ್.ವಿ.ಎಸ್. ಪ.ಪೂ. ಕಾಲೇಜಿನಲ್ಲಿ ಜರುಗಿತು.

ಉಡುಪಿ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ತಾಲೂಕು ಘಟಕದ ವತಿಯಿಂದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಿಗೆ ಸನ್ಮಾನ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ಪೋಷಕರಿಗೆ ಅಭಿನಂದನಾ ಕಾರ್‍ಯಕ್ರಮ ಇಲ್ಲಿನ ಕಟಪಾಡಿ ಎಸ್.ವಿ.ಎಸ್. ಪ.ಪೂ. ಕಾಲೇಜಿನಲ್ಲಿ ಜರುಗಿತು.ಎಸ್‌ವಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸತ್ಯೇಂದ್ರ ಪೈ ಕಾರ್‍ಯಕ್ರಮ ಉದ್ಘಾಟಿಸಿ, ಸರ್ಕಾರದ ನೀತಿಯಿಂದ ಅನುದಾನಿತ ಶಾಲೆಗಳನ್ನು ನಡೆಸುವುದೇ ಕಷ್ಟವಾಗಿದೆ. ಆದರೂ ಶಾಲೆಗಳು ಕ್ರೀಡೆಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದ್ದು, ಈ ನಿಟ್ಟಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಕಾರ್‍ಯ ಶ್ಲಾಘನೀಯ ಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ವಹಿಸಿದ್ದರು. ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಸಮಾಜ ಸೇವಕ ಯೋಗೀಶ್ ಶೆಟ್ಟಿ, ಕಟಪಾಡಿ ಗ್ರಾಪಂ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ. ಪುಂಡಲೀಕ ಮರಾಠೆ ಶುಭ ಹಾರೈಸಿದರು.

ಈ ಸಂದರ್ಭ ಪ್ರಸಕ್ತ ಸಾಲಿನಲ್ಲಿ ನಿವೃತ್ತರಾದ ಶಾಲೆಯ ದೈ.ಶಿ. ಶಿಕ್ಷಕ ಪ್ರವೀಣ್ ಕುಮಾರ್ ಮತ್ತು ಕಡಿಯಾಳಿ ಕಮಲಾ ಬಾ ಪ್ರೌಢ ಶಾಲಾ ದೈ.ಶಿ. ಶಿಕ್ಷಕ ಸುದರ್ಶನ್ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಉಡುಪಿ ವಲಯದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಹಾಗೂ ಕ್ರೀಡಾ ಪೋಷಕರಿಗೆ ಸನ್ಮಾನಿಸಲಾಯಿತು.

ಕಾಪು ತಾಲೂಕು ಯುವಜನ ಸೇವಾ ಕ್ರೀಡಾ ಇಲಾಖೆ ಅಧಿಕಾರಿ ರಿತೇಶ್ ಶೆಟ್ಟಿ ಸೂಡ, ಎಸ್ ವಿಎಸ್ ಪ್ರೌಢಶಾಲೆ ವಿಭಾಗದ ಮುಖ್ಯ ಶಿಕ್ಷಕಿ ಜಯಲಕ್ಷ್ಮೀ ಶಾನುಭೋಗ್, ಗ್ರೇಡ್ 2 ಸಂಘದ ಜಯಲಕ್ಷ್ಮೀ, ಗ್ರೇಡ್ 1 ಸಂಘದ ಕಾರ್‍ಯದರ್ಶಿ ಪ್ರಸಾದ್ ಸುವರ್ಣ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಶೆಚ್ಟಿ ಸಾಗತಿಸಿದರು. ತಾಲೂಕು ದೈ.ಶಿ. ಪರಿವೀಕ್ಷಣಾಧಿಕಾರಿ ರವೀಂದ್ರ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್‍ಯದರ್ಶಿ ಶಿವನಗೌಡ ಹಿರೇಗೌಡ ವಂದಿಸಿದರು. ನವೀನ್ ಶೆಟ್ಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಶಾಲೆ ದುಬೈ ವಾರ್ಷಿಕೋತ್ಸವಕ್ಕೆ ಗೌರ್ನರ್‌ಗೆ ಆಹ್ವಾನ
ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್