ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಕಿ ಕಟ್ಟಿದ ವಿದ್ಯಾರ್ಥಿನಿಯರಿಗೆ ಅಭಿನಂದನೆ

KannadaprabhaNewsNetwork |  
Published : Sep 01, 2026, 02:15 AM IST
31ಕೆಎಂಎನ್ ಡಿ31 | Kannada Prabha

ಸಾರಾಂಶ

ಕಳೆದ ಶುಕ್ರವಾರ ನವ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಕಿ ಕಟ್ಟುವ ಮೂಲಕ ಅಭಿನಂದನೆ ಸಲ್ಲಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ರಕ್ಷಾ ಬಂಧನ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಕಿ ಕಟ್ಟುವ ಮೂಲಕ ಶುಭಕೋರಿದ ತಾಲೂಕಿನ ಕಟ್ಟೇರಿ ಗ್ರಾಮದಲ್ಲಿರುವ ಕಸ್ತೂರ್ ಬಾ ಗಾಂಧಿ ಶಾಲೆಯ ಇಬ್ಬರು ವಿದ್ಯಾರ್ಥಿನಿಯರನ್ನು ಶಾಲೆ ಹಾಗೂ ತಾಲೂಕು ಶಿಕ್ಷಣ ಇಲಾಖೆ ವತಿಯಿಂದ ಅಭಿನಂದಿಸಲಾಯಿತು.

ಗ್ರಾಮದಲ್ಲಿರುವ ಕಸ್ತೂರ್ ಬಾ ಗಾಂಧಿ ಬಾಲಿಕಾ ವಸತಿ ಶಾಲೆಯ ಎಂ.ಎನ್.ಖುಷಿ ಹಾಗೂ ಎಂ.ಜೆ. ಮನ್ವತಾ ಎಂಬ ಇಬ್ಬರು ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರು. ಕರ್ನಾಟಕ ರಾಜ್ಯದಿಂದ ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು.

ಕಳೆದ ಶುಕ್ರವಾರ ನವ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಕಿ ಕಟ್ಟುವ ಮೂಲಕ ಅಭಿನಂದನೆ ಸಲ್ಲಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳಾದ ಎಂ.ಎನ್.ಖುಷಿ ಹಾಗೂ ಎಂ.ಜೆ.ಮನ್ವತಾ ಅವರನ್ನು ಶಾಲೆ ಆಡಳಿತ ಮಂಡಳಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಕ ವೃಂದವರು ಅಭಿನಂದಿಸಿದರು.

ಮುಖ್ಯಶಿಕ್ಷಕಿ ವಿ.ಕೆ.ಪುಷ್ಪಲತಾ ಮಾತನಾಡಿ, ದೇಶದ ರಾಷ್ಟ್ರಪತಿಗಳಿಗೆ ರಾಕಿ ಕಟ್ಟುವ ಮೂಲಕ ಶಾಲೆಯ ಮಕ್ಕಳು ಕೀರ್ತಿ ತಂದಿದ್ದಾರೆ. ಗ್ರಾಮೀಣ ಪ್ರದೇಶದ ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ಥಾಪನೆಯಾಗಿರುವ ಕಸ್ತೂರ್ ಬಾ ಗಾಂಧಿ ಬಾಲಿಕಾ ವಸತಿ ಶಾಲೆಯ ಮಕ್ಕಳು ಈ ಮೂಲಕ ಹಳ್ಳಿಯಿಂದ ದಿಲ್ಲಿಯವರೆಗೆ ಹೋಗಲು ಸಹಕರಿಸಿದ ಬೆಂಗಳೂರಿನ ಯೋಜನಾ ಸಮಗ್ರ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಿ..ಚಂದ್ರಶೇಖರ್, ಬಿಇಒ ಧರ್ಮಶೆಟ್ಟಿ ಅವರಿಗೆ ಧನ್ಯವಾದ ಅರ್ಪಿಸಿದರು.

ಈ ವೇಳೆ ಬಿಇಒ ಧರ್ಮಶೆಟ್ಟಿ, ಬಿಆರ್ ಸಿ ಪ್ರಕಾಶ್, ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಾಲಾ ಶಿಕ್ಷಕರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಯೋಜನೆಗೆ ಸಿಎಂರಿಂದ ಶೀಘ್ರ ಚಾಲನೆ: ಶಾಸಕ ಕೃಷ್ಣಮೂರ್ತಿ
ಕೋನಿಗರಹಳ್ಳಿ ವೇದಾವತಿ ಮೇಲ್ಸೇತುವೆ ಬಿರುಕು