ಕನ್ನಡಪ್ರಭ ವಾರ್ತೆ ಮೈಸೂರು
ಈ ವೇಳೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಎಂಬುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಈ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ತೆಗೆದು ಸಾಧನೆ ಮಾಡಿದ್ದಾರೆ. ಈ ಯಶಸ್ಸು ನಿಮ್ಮ ಮುಂದಿನ ಗುರಿ ತಲುಪಲು ಸೇತುವೆಯಾಗಿ ಇನ್ನಷ್ಟು ಸಾಧನೆಯ ಗರಿ ನಿಮ್ಮ ಮೂಡಿಗೇರಲಿ ಎಂದು ಹಾರೈಸಿದರು.
ಈ ಫಲಿತಾಂಶದಿಂದ ಮುಂದಿನ ದಿನಗಳಲ್ಲಿ ನಿಮ್ಮ ಮೇಲಿನ ನಿರೀಕ್ಷೆ ಹೆಚ್ಚಾಗಲಿದ್ದು, ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ಮುನ್ನಡೆಯಬೇಕು. ಹಂತ ಹಂತವಾಗಿ ನೋಡಿದಾಗ ಸ್ಪರ್ಧೆ ಹೆಚ್ಚಾಗಿದ್ದು, ಅದರಲ್ಲಿ ನಾವು ಏನು ಅಲ್ಲ ಎಂದೆಂನಿಸುತ್ತದೆ. ಹಾಗಾಗಿ ಮನಸ್ಸನ್ನು ಎಲ್ಲಿಯೂ ಕುಗ್ಗದಂತೆ ನೋಡಿಕೊಂಡು ಗುರಿಯತ್ತ ಸಾಗಬೇಕು ಎಂದು ಅವರು ಹುರುದುಂಬಿಸಿದರು.10ನೇ ತರಗತಿಯು ವಿದ್ಯಾರ್ಥಿ ಜೀವನದಲ್ಲಿ ಒಂದು ಪ್ರಮುಖ ಘಟ್ಟವಾಗಿದ್ದು. ನಮ್ಮ ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲು ಇದೊಂದು ಉತ್ತಮ ಸಮಯವಾಗಿದೆ. ನಿಮ್ಮ ಗುರಿ ಏನೆಂಬುದನ್ನು ಇಲ್ಲಿಯೇ ಅರಿತು ಅದರೊಂದಿಗೆ ಸಾಗಬೇಕಿದೆ ಎಂದರು.
ಕಾಲೇಜು ದಿನಗಳಿಗೆ ಕಾಲಿಡುತ್ತಿರುವ ನೀವು ಕೆಲವೊಂದು ವಿಷಯಗಳಿಂದ ಮನಸ್ಸು ಏರು-ಪೇರಾಗುವುದು ಸಹಜ. ಆದರೇ ಯಾವುದೇ ಒತ್ತಡಕ್ಕೆ ಒಳಗಾಗಿ ಕೆಟ್ಟ ಹವ್ಯಾಸ ರೂಡಿಸಿಕೊಳ್ಳಬಾರದು. ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಂಡು ಇತರರಿಗೂ ಮಾದರಿಯಾಗಬೇಕು ಎಂದು ಅವರು ಸಲಹೆ ನೀಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನುಮಾದರಿಯನ್ನಾಗಿಸಿಕೊಂಡು ದೊಡ್ಡ ಮಟ್ಟದ ಯಶಸ್ಸು ಸಾಧಿಸುವತ್ತಾ ನಿಮ್ಮ ಗುರಿ ಇರಲಿ. ವಿದ್ಯಾರ್ಥಿಗಳ ಜೀವನ ಎಂಬ ವಿಷಯಕ್ಕೆ ಬಂದರೆ ಪೋಷಕರ ಪಾತ್ರ ಬಹಳ ಮುಖ್ಯವಾಗಿದ್ದು ಅವರ ಹಾಗೂ ಹೋಗುಗಳನ್ನು ಸದಾ ಗಮನಿಸುತ್ತಿರಬೇಕು. ಮಾರ್ಗ ಸೂಚಿಸಬೇಕು ಎಂದರು.
ಇಷ್ಟು ದಿನ ಇದ್ದಂತಹ ಶಾಲಾ ವಾತಾವರಣವು ಮುಂದಿನ ದಿನಗಳಲ್ಲಿ ಬದಲಾಗುತ್ತದೆ. ವಿಭಿನ್ನ ರೀತಿಯ ವಾತಾವರಣಕ್ಕೆ ಹೊಂದಿಕೊಂಡು ಹೋಗಬೇಕಾಗುವ ಸನ್ನಿವೇಶ ಬರುವುದರಿಂದ ಅದಕ್ಕೆ ಎಲ್ಲಾ ವಿದ್ಯಾರ್ಥಿಗಳೂ ಮಾನಸಿಕವಾಗಿ ಇತರ ಆಗಬೇಕು. ಪ್ರತಿಯೊಬ್ಬರೂ ಸ್ವಯಂ ಜವಾಬ್ದಾರಿಯನ್ನು ತೆಗೆದುಕೊಂಡು, ಧೃತಿಗೆಡದೆ ತಮ್ಮ ಕನಸನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಹಾಕಬೇಕು ಎಂದು ಹೇಳಿದರು.