ಚನ್ನಗಿರಿ: ಮಾ.2ರಂದು ತಾಲೂಕು ಕಾಂಗ್ರೆಸ್ ಮುಖಂಡರಿಗೆ ಅಭಿನಂದನಾ ಸಮಾರಂಭ

KannadaprabhaNewsNetwork |  
Published : Feb 26, 2026, 01:45 AM IST
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೀರುವ ಚನ್ನಗಿರಿ ಬ್ಲಾಕ್ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಸಿ.ಹೆಚ್.ಶ್ರೀನಿವಾಸ್ | Kannada Prabha

ಸಾರಾಂಶ

ಈಗಾಗಲೇ ಅವಧಿ ಮುಗಿದಿರುವಂತಹ ಗ್ರಾ.ಪಂ., ಜಿ.ಪಂ., ತಾ.ಪಂ., ಪುರಸಭೆ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕಗೊಂಡ ಅಧ್ಯಕ್ಷರು, ಮುಖಂಡರಿಗೆ ಮಾ.2ರಂದು ಪಟ್ಟಣದ ಜವಳಿ ಸಮುದಾಯ ಭವನದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಸಮಾರಂಭಕ್ಕೆ ತಾಲೂಕಿನ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಬೇಕು ಎಂದು ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

- ಸಚಿವ, ಸಂಸದೆ, ಶಾಸಕರು, ಮುಖಂಡರು ಭಾಗಿ: ಶ್ರೀನಿವಾಸ್‌

- - -

ಚನ್ನಗಿರಿ: ಈಗಾಗಲೇ ಅವಧಿ ಮುಗಿದಿರುವಂತಹ ಗ್ರಾ.ಪಂ., ಜಿ.ಪಂ., ತಾ.ಪಂ., ಪುರಸಭೆ ಸದಸ್ಯರು ಮತ್ತು ಕಾಂಗ್ರೆಸ್ ಪಕ್ಷದ ವತಿಯಿಂದ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿ ನೇಮಕಗೊಂಡ ಅಧ್ಯಕ್ಷರು, ಮುಖಂಡರಿಗೆ ಮಾ.2ರಂದು ಪಟ್ಟಣದ ಜವಳಿ ಸಮುದಾಯ ಭವನದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ. ಸಮಾರಂಭಕ್ಕೆ ತಾಲೂಕಿನ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಬೇಕು ಎಂದು ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದಲ್ಲಿ ನಿಗಮ ಮಂಡಳಿಗಳಿಗೆ ಅಧ್ಯಕ್ಷರಾಗಿರುವ ಬ್ರಾಹ್ಮಣ ನಿಗಮದ ಅಧ್ಯಕ್ಷ ಜಯಸಿಂಹ, ತಾಂಡ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯದೇವ ನಾಯ್ಕ್, ಬಯಲುಸೀಮೆ ಅಭಿವೃದ್ಧಿ ನಿಗಮ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಜೀವ ವೈವಿಧ್ಯ ನಿಗಮ ಅಧ್ಯಕ್ಷ ವಡ್ನಾಳ್ ಜಗದೀಶ್, ಮಲೆನಾಡು ಅಭವೃದ್ಧಿ ನಿಗಮ ಅಧ್ಯಕ್ಷ ಮರಿಯೋಜಿ ರಾವ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನೇಶ್ ಶೆಟ್ಟಿ, ಕಾಂಗ್ರೆಸ್ ಮಾಧ್ಯಮ ವಕ್ತಾರರಾದ ಮಾವಿನಕಟ್ಟೆ ಶ್ರೀಕಾಂತ್, ಕುಳೇನೂರು ಹನುಮಂತಪ್ಪ ಅವರನ್ನು ನೇಮಕ ಮಾಡಿದ್ದಾರೆ ಎಂದರು.

ಸಮಾರಂಭಕ್ಕೆ ಜಿಲ್ಲಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕ ಬಸವರಾಜು ವಿ. ಶಿವಗಂಗಾ, ಮಾಜಿ ಶಾಸಕ ವಡ್ನಾಳ್ ರಾಜಣ್ಣ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಂತೆಬೆನ್ನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಜಬೀಉಲ್ಲಾ, ಜಿಲ್ಲಾ ಕಾಂಗ್ರೆಸ್ ಪಕ್ಷದ ಅಸ್ಲಾಂ, ಮುಖಂಡರಾದ ಎಂ.ಬಿ. ಶಿವಾಜಿ ರಾವ್, ಜ್ಯೋತಿ ಕೊಟ್ರೇಶ್ ಕೋರಿ, ಸವಿತಾ, ಷಡಾಕ್ಷರಿ, ಹನುಮಂತಪ್ಪ ಉಪಸ್ಥಿತರಿದ್ದರು.

- - -

-25ಕೆಸಿಎನ್‌ಜಿ: ಪತ್ರಿಕಾಗೋಷ್ಠಿಯಲ್ಲಿ ಚನ್ನಗಿರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್.ಶ್ರೀನಿವಾಸ್ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ.ಮಾದೇಗೌಡರು ಶಿಕ್ಷಣ ಸಂಸ್ಥೆ ಕಟ್ಟದಿದ್ದರೆ ಲಕ್ಷಾಂತರ ಮಂದಿ ಶಿಕ್ಷಣ ವಂಚಿತ: ಡಾ.ಕೆ.ಎಸ್.ಅಮೃತೇಶ್
ಸರ್ಕಾರ ಗುರುರಾಯರ ವರ್ಧಂತಿ ಆಚರಿಸಲಿ: ಆರತಿ ತಿವಾರಿ