ಕನ್ನಡಪ್ರಭ ವಾರ್ತೆ ಮಂಗಳೂರು
ಬಳಿಕ ಮಾತನಾಡಿದ ಆರ್.ಪದ್ಮರಾಜ್ ಪೂಜಾರಿ, ದೇಶದ ಸಂವಿಧಾನದ ಆಶೋತ್ತರಗಳಿಗೆ ಸ್ಪಂದಿಸುವ ಏಕೈಕ ಪಕ್ಷ ಏನಾದರು ಇದ್ದರೆ ಅದು ಕಾಂಗ್ರೆಸ್ ಪಕ್ಷ, ಹೀಗಾಗಿ ಮುಂದಿನ ದಿನಗಳಲ್ಲಿ ಈ ನಿಟ್ಟಿನಲ್ಲಿ ನಾವೆಲ್ಲರೂ ಚಿಂತಿಸಿ ಕಾರ್ಯೋನ್ಮುಖರಾಗಬೇಕಿದೆ. ವಿವಿಧ ನಿಗಮಗಳಿಗೆ ಆಯ್ಕೆಯಾಗಿರುವ ನಮ್ಮ ಕಾರ್ಯಕರ್ತರು ಮುಂದೆ ಉತ್ತಮ ರೀತಿಯಲ್ಲಿ ಪಕ್ಷ ನಿಷ್ಠೆಯಿಂದ ಸೇವೆ ಸಲ್ಲಿಸಲಿ ಎಂದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ನೂತನವಾಗಿ ಜವಾಬ್ದಾರಿ ವಹಿಸಿಕೊಂಡ ಎಲ್ಲರಿಗೂ ಅಭಿನಂದನೆಗಳು. ಮುಂದೆ ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆ ಮತ್ತು ಇನ್ನಿತರ ಚುನಾವಣೆಗಳಲ್ಲಿ ಪಕ್ಷವನ್ನು ಬಲಪಡಿಸಿ ಅಧಿಕಾರಕ್ಕೆ ತರುವುದೇ ನಮ್ಮೆಲ್ಲರ ಧ್ಯೇಯವಾಗಿರಲಿ ಎಂದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಮುಖಂಡರಾದ ಪ್ರವೀಣ್ ಚಂದ್ರ ಆಳ್ವ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಸುರೇಶ್ ಬಳ್ಳಾಲ್, ವಿಶ್ವಾಸ್ ಕುಮಾರ್ ದಾಸ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಕುಮಾರಿ ಅಪ್ಪಿ, ಮಾಜಿ ಮೇಯರ್ ಜೆಸಿಂತಾ, ಅಭಿನಂದನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಇದ್ದರು.ಅಭಿನಂದನಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ನಗರ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲಿಯಾನ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.